Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 25:21 - ಕನ್ನಡ ಸತ್ಯವೇದವು J.V. (BSI)

21 ಅವನು ಇವರನ್ನು ಅಲ್ಲಿಯೇ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟು ಹೋಗಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಬಾಬೆಲಿನ ಅರಸನು ಹಮಾತ್ ಪ್ರದೇಶದ ಅವರನ್ನು ಕತ್ತಿಯಿಂದ ರಿಬ್ಲದಲ್ಲಿ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟು ಹೋಗಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅವನು ಅವರನ್ನು ಅಲ್ಲಿಯೇ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯಾಳುಗಳಾಗಿ ತಮ್ಮ ನಾಡನ್ನೇ ಬಿಟ್ಟು ಹೋಗಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಬಾಬಿಲೋನ್ ರಾಜನು ಹಮಾತ್ ದೇಶದ ರಿಬ್ಲದಲ್ಲಿ ಅವರನ್ನೆಲ್ಲ ಕೊಂದುಹಾಕಿದನು. ಹೀಗೆ ಯೆಹೂದದ ಜನರನ್ನೆಲ್ಲ ಅವರ ದೇಶದಿಂದ ಸೆರೆಯಾಳುಗಳನ್ನಾಗಿಸಿ ಹಿಡಿದೊಯ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಬಾಬಿಲೋನಿನ ಅರಸನು ಹಮಾತಿನ ರಿಬ್ಲದಲ್ಲಿ ಅವರನ್ನು ಕೊಂದುಹಾಕಿಸಿದನು. ಈ ಪ್ರಕಾರ ಯೆಹೂದ್ಯರು ಸೆರೆಯಾಳುಗಳಾಗಿ ತಮ್ಮ ದೇಶವನ್ನು ಬಿಟ್ಟುಹೋಗಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 25:21
18 ತಿಳಿವುಗಳ ಹೋಲಿಕೆ  

ಆತನು - ಇಸ್ರಾಯೇಲ್ಯರನ್ನು ತೆಗೆದುಹಾಕಿದಂತೆ ಯೆಹೂದ್ಯರನ್ನೂ ನನ್ನ ಸನ್ನಿಧಿಯಿಂದ ತೆಗೆದುಹಾಕುವೆನು; ನಾನು ಆರಿಸಿಕೊಂಡ ಯೆರೂಸಲೇಮ್ ಪಟ್ಟಣವನ್ನೂ ನನ್ನ ನಾಮಮಹತ್ತಿಗೋಸ್ಕರ ಸ್ವೀಕರಿಸಿಕೊಂಡ ದೇವಾಲಯವನ್ನೂ ತಿರಸ್ಕರಿಸುವೆನು ಎಂದು ಹೇಳಿದನು.


ಭೂಮಂಡಲದ ಚತುರ್ದಿಕ್ಕುಗಳಲ್ಲಿರುವ ಎಲ್ಲಾ ಜನಾಂಗಗಳಲ್ಲಿಯೂ ಯೆಹೋವನು ನಿಮ್ಮನ್ನು ಚದರಿಸುವನು; ಅಲ್ಲಿ ನಿಮಗಾದರೂ ನಿಮ್ಮ ಪಿತೃಗಳಿಗಾದರೂ ಗೊತ್ತಿಲ್ಲದ ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.


ನಾನು ನಿಮ್ಮನ್ನು ದಮಸ್ಕದ ಆಚೆ ಸೆರೆಗೆ ತಳ್ಳುವೆನು; ಸೇನಾಧೀಶ್ವರ ದೇವರೆಂಬ ಯೆಹೋವನು ಇದನ್ನು ನುಡಿದಿದ್ದಾನೆ.


ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ; ಇದು ಸಾಗುವದು, ನಾನು ನೆರವೇರಿಸುವೆನು; ಹಿಂದೆಗೆಯೆನು, ಕ್ಷವಿುಸೆನು, ಕರುಣಿಸೆನು; ನಿನ್ನ ದುರ್ಮಾರ್ಗ ದುಷ್ಕೃತ್ಯಗಳಿಗೆ ಸರಿಯಾಗಿ ನಿನಗೆ ನ್ಯಾಯತೀರ್ಪು ಆಗುವದು; ಇದು ಕರ್ತನಾದ ಯೇಹೋವನ ನುಡಿ.


ಆತನು ಇಸ್ರಾಯೇಲ್‍ಕುಲಗಳಲ್ಲಿ ಉಳಿದಿದ್ದ ಇವರನ್ನೂ ಹೇಸಿ ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟು ಸೂರೆಮಾಡುವವರಿಗೆ ಒಪ್ಪಿಸಿ ಬಾಧಿಸಿದನು.


ನಿಮಗೂ ನಿಮ್ಮ ಪಿತೃಗಳಿಗೂ ಗೊತ್ತಿಲ್ಲದ ಜನಾಂಗದವರ ದೇಶಕ್ಕೆ ಯೆಹೋವನು ನಿಮ್ಮನ್ನೂ ನೀವು ನೇವಿುಸಿಕೊಳ್ಳುವ ಅರಸರನ್ನೂ ಒಯ್ಯಿಸುವನು; ಅಲ್ಲಿ ನೀವು ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಸೇವಿಸುವಿರಿ.


ಆತನನ್ನು ಕೋಪಗೊಳಿಸಿದರೆ ನೀವು ಯೊರ್ದನ್ ಹೊಳೆಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವ ಆ ದೇಶದಲ್ಲಿ ಉಳಿಯದೆ ಬೇಗನೆ ನಾಶವಾಗಿ ಹೋಗುವಿರಿ ಎಂದು ಭೂಮ್ಯಾಕಾಶಗಳನ್ನು ಸಾಕ್ಷಿಗಳಾಗಿ ಕರೆದು ಎಚ್ಚರಿಸುತ್ತೇನೆ. ನೀವು ಆ ದೇಶದಲ್ಲಿ ಬಹುದಿವಸ ಇರದೆ ನಾಶವಾಗಿಯೇ ಹೋಗುವಿರಿ.


ಅವರು ನಿನಗೆ ವಿರುದ್ಧವಾಗಿ ಪಾಪಮಾಡಾರು. ಪಾಪಮಾಡದ ಮನುಷ್ಯನು ಒಬ್ಬನೂ ಇಲ್ಲವಲ್ಲಾ. ನೀನು ಅವರ ಮೇಲೆ ಕೋಪಗೊಂಡು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿದಾಗ ಮತ್ತು ಆ ಶತ್ರುಗಳು ಅವರನ್ನು ಸೆರೆಹಿಡಿದು ದೂರದಲ್ಲಾಗಲಿ ಸಮೀಪದಲ್ಲಾಗಲಿ ಇರುವ ತಮ್ಮ ದೇಶಕ್ಕೆ ಅವರನ್ನು ಒಯ್ದಾಗ


ಅವನು ಇವರನ್ನು ಅಲ್ಲಿಯೇ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟುಹೋಗಬೇಕಾಯಿತು.


ಯೆಹೋವನು ಅವರ ದೇಶದ ಮೇಲೆ ಕೋಪಮಾಡಿ ಈ ಗ್ರಂಥದಲ್ಲಿ ಬರೆದಿರುವ ಶಾಪಗಳನ್ನು ಅವರ ಮೇಲೆ ಬರಮಾಡಿ


ದುರ್ಮಾರ್ಗದಲ್ಲಿ ನಡೆಯುವದನ್ನು ಬಿಡಲಿಲ್ಲವಾದದರಿಂದ ಯೆಹೋವನು ತನ್ನ ಸೇವಕರಾದ ಎಲ್ಲಾ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದಂತೆ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು. ಅವರು ಸೆರೆಯವರಾಗಿ ತಮ್ಮ ದೇಶದಿಂದ ಅಶ್ಶೂರ್ ದೇಶಕ್ಕೆ ಒಯ್ಯಲ್ಪಟ್ಟು ಇಂದಿನವರೆಗೂ ಅಲ್ಲೇ ಇರುತ್ತಾರೆ.


ಅವನು ಯೆಹೋಯಾಖೀನನನ್ನೂ ಅವನ ತಾಯಿ ಹೆಂಡತಿಯರು ಕಂಚುಕಿಗಳು


ನೀವಾಗಲಿ ನಿಮ್ಮ ಪಿತೃಗಳಾಗಲಿ ನೋಡದ ದೇಶಕ್ಕೆ ನಿಮ್ಮನ್ನು ಈ ದೇಶದೊಳಗಿಂದ ಎಸೆದುಬಿಡುವೆನು; ಅಲ್ಲಿ ಹಗಲಿರುಳೂ ಅನ್ಯದೇವತೆಗಳನ್ನು ಸೇವಿಸುವಿರಿ; ನಾನು ನಿಮಗೆ ದಯೆತೋರಿಸೆನು.


ಯೆಹೋವನ ಉಗ್ರದೃಷ್ಟಿಯು ಅವರನ್ನು ಚದರಿಸಿದೆ; ಆತನು ಇನ್ನು ಕಟಾಕ್ಷಿಸನು. ಅವರು ಯಾಜಕರಾದರೇನು, ಅವರಿಗೆ ಮರ್ಯಾದೆ ತಪ್ಪಿದೆ; ವೃದ್ಧರಾದರೇನು, ಯಾರೂ ಅವರನ್ನು ಕರುಣಿಸರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು