Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 25:25 - ಕನ್ನಡ ಸತ್ಯವೇದವು J.V. (BSI)

25 ಆದರೆ ಏಳನೆಯ ತಿಂಗಳಿನಲ್ಲಿ ರಾಜವಂಶದವನೂ ಎಲೀಷಾಮನ ಮೊಮ್ಮಗನೂ ನೆತನ್ಯನ ಮಗನೂ ಆದ ಇಷ್ಮಾಯೇಲನು ಹತ್ತು ಮಂದಿ ಆಳುಗಳೊಡನೆ ಬಂದು ಗೆದಲ್ಯನನ್ನೂ ಅವನ ಸಂಗಡ ವಿುಚ್ಪದಲ್ಲಿದ್ದ ಯೆಹೂದ್ಯರನ್ನೂ ಕಸ್ದೀಯರನ್ನೂ ಸಂಹರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆದರೆ ಏಳನೆಯ ತಿಂಗಳಿನಲ್ಲಿ ರಾಜವಂಶದವನೂ, ಎಲೀಷಾಮನ ಮೊಮ್ಮಗನೂ, ನೆತನ್ಯನ ಮಗನೂ ಆದ ಇಷ್ಮಾಯೇಲನು ಹತ್ತು ಮಂದಿ ಆಳುಗಳೊಡನೆ ಬಂದು ಗೆದಲ್ಯನನ್ನೂ, ಅವನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರನ್ನೂ, ಕಸ್ದೀಯರನ್ನೂ ಸಂಹರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆದರೆ ಏಳನೆಯ ತಿಂಗಳಿನಲ್ಲಿ ರಾಜವಂಶದವನೂ ಎಲೀಷಮನ ಮೊಮ್ಮಗನೂ ನೆತನ್ಯನ ಮಗನೂ ಆದ ಇಷ್ಮಾಯೇಲನು ಹತ್ತುಮಂದಿ ಆಳುಗಳೊಡನೆ ಬಂದು ಗೆದಲ್ಯನನ್ನು, ಅವನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರನ್ನು ಹಾಗು ಬಾಬಿಲೋನಿಯಾದವರನ್ನು ಸಂಹರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆದರೆ ಏಳನೆಯ ತಿಂಗಳಲ್ಲಿ, ರಾಜನ ಕುಲದವನೂ ಎಲೀಷಾಮನ ಮೊಮ್ಮಗನೂ ನೆತನ್ಯನ ಮಗನೂ ಆದ ಇಷ್ಮಾಯೇಲನು ಹತ್ತು ಜನರೊಂದಿಗೆ ಬಂದು ಗೆದಲ್ಯನನ್ನು ಕೊಂದುಹಾಕಿದನು. ಇಷ್ಮಾಯೇಲ ಮತ್ತು ಅವನ ಜನರು ಮಿಚ್ಛದಲ್ಲಿ ಗೆದಲ್ಯನ ಜೊತೆಗಿದ್ದ ಯೆಹೂದ್ಯರನ್ನು ಮತ್ತು ಬಾಬಿಲೋನಿನವರನ್ನು ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆದರೆ ಏಳನೆಯ ತಿಂಗಳಲ್ಲಿ ಅರಸನ ಸಂತಾನದವನೂ, ಎಲೀಷಾಮನ ಮೊಮ್ಮಗನೂ, ನೆತನ್ಯನ ಮಗನೂ ಆದ ಇಷ್ಮಾಯೇಲನು ಅವನ ಸಂಗಡ ಹತ್ತು ಮಂದಿಯೂ ಬಂದು ಗೆದಲ್ಯನನ್ನೂ, ಅವನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರನ್ನೂ, ಬಾಬಿಲೋನಿಯರನ್ನೂ ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 25:25
8 ತಿಳಿವುಗಳ ಹೋಲಿಕೆ  

ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನಾಲ್ಕನೆಯ ತಿಂಗಳಿನ ಉಪವಾಸ, ಐದನೆಯ ತಿಂಗಳಿನ ಉಪವಾಸ, ಏಳನೆಯ ತಿಂಗಳಿನ ಉಪವಾಸ, ಹತ್ತನೆಯ ತಿಂಗಳಿನ ಉಪವಾಸ, ಇವು ಯೆಹೂದ ವಂಶಕ್ಕೆ ವಿಶೇಷವಾದ ಹಬ್ಬಗಳಾಗಿ ಹರ್ಷೋಲ್ಲಾಸಗಳನ್ನುಂಟುಮಾಡುವವು; ಹೀಗಿರಲು ಸತ್ಯವನ್ನೂ ಸಮಾಧಾನವನ್ನೂ ಪ್ರೀತಿಸಿರಿ.


ನೀನು ಯಾಜಕರಿಗೂ ದೇಶದ ಸಕಲ ಜನರಿಗೂ ಹೀಗೆ ನುಡಿ - ನೀವು ಈ ಎಪ್ಪತ್ತು ವರುಷಗಳಿಂದಲೂ ಐದನೆಯ ಮತ್ತು ಏಳನೆಯ ತಿಂಗಳುಗಳಲ್ಲಿ ಉಪವಾಸಮಾಡಿ ಗೋಳಾಡುತ್ತಿದ್ದಾಗ ಆ ನಿಮ್ಮ ಉಪವಾಸವು ನನಗಾಗಿಯೇ ಮಾಡಿದ್ದೋ?


ಆಗ ಕಾರೇಹನ ಮಗನಾದ ಯೋಹಾನಾನನು ವಿುಚ್ಪದಲ್ಲಿ ಗೆದಲ್ಯನಿಗೆ - ನಾನು ಹೋಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕೊಲ್ಲಲಿಕ್ಕೆ ಅಪ್ಪಣೆಯಾಗಲಿ; ಇದು ನಿನ್ನ ಅಪ್ಪಣೆ ಎಂದು ಯಾರಿಗೂ ತಿಳಿದು ಬರುವದಿಲ್ಲ; ಅವನು ನಿನ್ನನ್ನು ಕೊಂದರೆ ನಿನ್ನ ಆಶ್ರಯದ ಯೆಹೂದ್ಯರೆಲ್ಲರೂ ದಿಕ್ಕಾಪಾಲಾಗಿ ಯೆಹೂದದ ಶೇಷವು ನಿಶ್ಶೇಷವಾಗುವದಲ್ಲಾ; ಏಕೆ ಹೀಗಾಗಬೇಕು ಎಂದು ರಹಸ್ಯವಾಗಿ ವಿಜ್ಞಾಪಿಸಲು


ಅಹಜ್ಯನು ಮರಣಹೊಂದಿದನೆಂಬದನ್ನು ಅವನ ತಾಯಿಯಾದ ಅತಲ್ಯಳು ಕೇಳಿದಾಗ ಫಕ್ಕನೆ ರಾಜಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟಳು.


ಗೆದಲ್ಯನು ಇವರಿಗೂ ಇವರ ಜನರಿಗೂ - ಕಸ್ದೀಯರ ಸೈನ್ಯದವರಿಗೆ ಹೆದರಬೇಡಿರಿ; ಬಾಬೆಲಿನ ಅರಸನಿಗೆ ಒಳಗಾಗಿದ್ದು ಇಲ್ಲಿಯೇ ವಾಸಿಸಿರಿ; ಆಗ ನಿಮಗೆ ಸುಖವಾಗುವದು ಎಂದು ಆಣೆಯಿಟ್ಟು ಹೇಳಿದನು.


ಏಳನೆಯ ತಿಂಗಳಿನಲ್ಲಿ ರಾಜವಂಶದವನೂ ಎಲೀಷಾಮನ ಮೊಮ್ಮಗನೂ ನೆತನ್ಯನ ಮಗನೂ ಅರಸನ ಪ್ರಧಾನರಲ್ಲಿ ಒಬ್ಬನೂ ಆದ ಇಷ್ಮಾಯೇಲನು ಹತ್ತು ಮಂದಿಯೊಂದಿಗೆ ಅಹೀಕಾಮನ ಮಗನಾದ ಗೆದಲ್ಯನು ವಾಸವಾಗಿದ್ದ ವಿುಚ್ಪಕ್ಕೆ ಬಂದನು; ಅಲ್ಲಿ ಅವನೊಂದಿಗೆ ಊಟಮಾಡಿದರು.


ಆಗ ನೆತನ್ಯನ ಮಗನಾದ ಇಷ್ಮಾಯೇಲನೂ ಅವನೊಂದಿಗಿದ್ದ ಹತ್ತು ಜನರೂ ಎದ್ದು ಅಹೀಕಾಮನ ಮಗ ಶಾಫಾನನ ಮೊಮ್ಮಗ ಬಾಬೆಲಿನ ಅರಸನಿಂದ ದೇಶಾಧಿಪತಿಯಾಗಿ ನೇವಿುಸಲ್ಪಟ್ಟವನೂ ಆದ ಗೆದಲ್ಯನನ್ನು ಕತ್ತಿಯಿಂದ ಹೊಡೆದು ಕೊಂದರು.


ಇದಲ್ಲದೆ ಇಷ್ಮಾಯೇಲನು ಗೆದಲ್ಯನ ಸಂಗಡ ವಿುಚ್ಪದಲ್ಲಿದ್ದ ಯೆಹೂದ್ಯರೆಲ್ಲರನ್ನೂ ಅಲ್ಲಿ ಸಿಕ್ಕಿದ ಕಸ್ದೀಯರಾದ ಸೈನಿಕರನ್ನೂ ಹತಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು