Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 25:29 - ಕನ್ನಡ ಸತ್ಯವೇದವು J.V. (BSI)

29 ಯೆಹೋಯಾಖೀನನು ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ ಜೀವದಿಂದಿರುವವರೆಗೂ ಅರಸನ ಪಂಕ್ತಿಯಲ್ಲಿ ಊಟ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಎವೀಲ್ಮೆರೋದಕನು ಯೆಹೋಯಾಖೀನನ ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ, ಜೀವದಿಂದಿರುವವರೆಗೂ ಅರಸನ ಪಂಕ್ತಿಯಲ್ಲಿ ಊಟಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಯೆಹೋಯಾಖೀನನು ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ, ಜೀವದಿಂದ ಇರುವವರೆಗೂ, ಅರಸನ ಪಂಕ್ತಿಯಲ್ಲೇ ಊಟಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಎವೀಲ್ಮೆರೋದಕನು ಯೆಹೋಯಾಖೀನನ ಸೆರೆವಾಸದ ಬಟ್ಟೆಗಳನ್ನು ತೆಗೆಸಿ ಹೊಸ ಬಟ್ಟೆಗಳನ್ನು ತೊಡಿಸಿದನು. ಯೆಹೋಯಾಖೀನನು ಬದುಕಿರುವ ತನಕ ತನ್ನ ಪಂಕ್ತಿಯಲ್ಲಿ ಊಟಮಾಡಲು ಎವೀಲ್ಮೆರೋದಕನು ಅವಕಾಶ ಮಾಡಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅವನ ಸೆರೆಯ ವಸ್ತ್ರಗಳನ್ನು ತೆಗೆದು ರಾಜವಸ್ತ್ರ ತೊಡಿಸಿದನು. ಹೀಗೆ ಯೆಹೋಯಾಖೀನನು ಬದುಕಿದ ಸಕಲ ದಿವಸಗಳಲ್ಲಿ ಅರಸನ ಪಂಕ್ತಿಯಲ್ಲಿಯೇ ಊಟಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 25:29
12 ತಿಳಿವುಗಳ ಹೋಲಿಕೆ  

ಆಗ ದಾವೀದನು ಅವನಿಗೆ - ಹೆದರಬೇಡ; ನಿನ್ನ ತಂದೆಯಾದ ಯೋನಾತಾನನನ್ನು ನೆನಸಿ ನಿನಗೆ ದಯೆತೋರಿಸುತ್ತೇನೆ. ನಿನ್ನ ಅಜ್ಜನಾದ ಸೌಲನ ಭೂವಿುಯನ್ನೆಲ್ಲಾ ನಿನಗೆ ಹಿಂದಕ್ಕೆ ಕೊಡುತ್ತೇನೆ; ಮತ್ತು ನೀನು ಪ್ರತಿದಿನ ನನ್ನ ಪಂಕ್ತಿಯಲ್ಲಿ ಊಟಮಾಡಬೇಕು ಎಂದು ಹೇಳಿದನು.


ದುಃಖಿತರೆಲ್ಲರನ್ನು ಸಂತೈಸುವದಕ್ಕೂ ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವದು.


ತನ್ನ ಕೈಯಿಂದ ಮುದ್ರಿಕೆಯನ್ನು ತೆಗೆದು ಯೋಸೇಫನ ಕೈಗೆ ಇಟ್ಟು ಅವನಿಗೆ ನಾರುಮಡಿಯನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಸರಪಣಿಯನ್ನು ಹಾಕಿಸಿ


ತಂದೆಯು ತನ್ನ ಆಳುಗಳಿಗೆ - ಶ್ರೇಷ್ಠವಾದ ನಿಲುವಂಗಿಯನ್ನು ತಟ್ಟನೆ ತಂದು ಇವನಿಗೆ ತೊಡಿಸಿರಿ; ಇವನ ಕೈಗೆ ಉಂಗುರವನ್ನು ಇಡಿರಿ; ಕಾಲಿಗೆ ಜೋಡು ಮೆಡಿಸಿರಿ;


ದೇವದೂತನು ತನ್ನ ಸೇವಕರಿಗೆ - ಇವನ ಕೊಳೆಬಟ್ಟೆಗಳನ್ನು ತೆಗೆದುಬಿಡಿರಿ ಎಂದು ಅಪ್ಪಣೆಕೊಟ್ಟು ಅವನಿಗೆ - ಇಗೋ, ನಿನ್ನ ದೋಷವನ್ನು ನಿನ್ನಿಂದ ತೊಲಗಿಸಿದ್ದೇನೆ, ನಿನಗೆ ಶ್ರೇಷ್ಠವಸ್ತ್ರಗಳನ್ನು ತೊಡಿಸುವೆನು ಎಂದು ಹೇಳಿದನು.


ಮೊರ್ದೆಕೈಯಾದರೋ ನೀಲ ಶುಭ್ರವರ್ಣಗಳುಳ್ಳ ರಾಜವಸ್ತ್ರಗಳನ್ನು ಧರಿಸಿ ಬಂಗಾರದ ದೊಡ್ಡ ಪಟ್ಟಿಯನ್ನು ಹಣೆಗೆ ಕಟ್ಟಿಕೊಂಡು ರಕ್ತವರ್ಣದ ನಾರಿನ ಶಾಲನ್ನು ಹೊದ್ದು ರಾಜಸನ್ನಿಧಿಯಿಂದ ಹೊರಟನು. ಶೂಷನ್ ಪಟ್ಟಣದಲ್ಲಿ ಸಂತೋಷದ ಆರ್ಭಟವು ಕೇಳಿಸಿತು.


ಎಸ್ತೇರಳ ಸೇವಕಿಯರೂ ಕಂಚುಕಿಗಳೂ ರಾಣಿಯಾದ ಆಕೆಯ ಬಳಿಗೆ ಬಂದು ಅದನ್ನು ತಿಳಿಸಿದಾಗ ಆಕೆಯು ಬಹಳವಾಗಿ ಕಳವಳಗೊಂಡು ಮೊರ್ದೆಕೈಗೆ ವಸ್ತ್ರಗಳನ್ನು ಕಳುಹಿಸಿ - ಗೋಣಿತಟ್ಟನ್ನು ತೆಗೆದುಬಿಟ್ಟು ಇವುಗಳನ್ನು ಧರಿಸಿಕೋ ಎಂದು ಹೇಳಿಸಿದಳು; ಆದರೆ ಅವನು ಅವುಗಳನ್ನು ಸ್ವೀಕರಿಸಲಿಲ್ಲ.


ಆಗ ಯೆಹೂದದ ಅರಸನಾದ ಯೆಹೋಯಾಖೀನನು ತನ್ನ ತಾಯಿ ಪರಿವಾರದವರು ಸೇನಾಪತಿಗಳು ಕಂಚುಕಿಗಳು ಇವರೊಡನೆ ಅವನ ಬಳಿಗೆ ಹೋದನು; ಅವನು ಇವನನ್ನು ತನ್ನ ಆಳಿಕೆಯ ಎಂಟನೆಯ ವರುಷದಲ್ಲಿ ಸೆರೆಹಿಡಿದನು.


ಫರೋಹನು ಇದನ್ನು ಕೇಳಿ ಯೋಸೇಫನನ್ನು ಕರೇ ಕಳುಹಿಸಿದನು. ಯೋಸೇಫನು ಬೇಗನೆ ಸೆರೆಮನೆಯಿಂದ ಬಿಡಿಸಲ್ಪಟ್ಟವನಾಗಿ ಕ್ಷೌರಮಾಡಿಸಿಕೊಂಡು ಬೇರೆ ವಸ್ತ್ರಗಳನ್ನು ಹಾಕಿಕೊಂಡು ಫರೋಹನ ಸನ್ನಿಧಿಗೆ ಬಂದನು.


ಯೆಹೋಯಾಖೀನನು ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ ಜೀವದಿಂದಿರುವವರೆಗೂ ಅರಸನ ಪಂಙ್ತಿಯಲ್ಲಿ ಊಟಮಾಡುತ್ತಿದ್ದನು.


ಆದರೆ ನೀನು ಗಿಲ್ಯಾದ್ಯನಾದ ಬರ್ಜಿಲ್ಲೈಯ ಮಕ್ಕಳಿಗೆ ಉಪಕಾರಮಾಡಬೇಕು; ಅವರು ನಿತ್ಯವೂ ನಿನ್ನ ಪಂಕ್ತಿಯಲ್ಲಿ ಊಟಮಾಡುತ್ತಿರಬೇಕು. ಯಾಕಂದರೆ ನಾನು ನಿನ್ನ ಸಹೋದರನಾದ ಅಬ್ಷಾಲೋಮನ ಬಳಿಯಿಂದ ಓಡಿಹೋದಾಗ ಅವರು ನನ್ನನ್ನು ಉಪಚರಿಸಿದರು.


ನಿನ್ನನ್ನೂ ನಿನ್ನ ಹೆತ್ತ ತಾಯಿಯನ್ನೂ ಜನ್ಮಭೂವಿುಯಲ್ಲದ ಅನ್ಯದೇಶಕ್ಕೆ ಎಸೆಡುಬಿಡುವೆನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು