Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 3:10 - ಕನ್ನಡ ಸತ್ಯವೇದವು J.V. (BSI)

10 ಅಯ್ಯೋ! ಯೆಹೋವನು ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವದಕ್ಕೋಸ್ಕರ ಇಲ್ಲಿಗೆ ಬರಮಾಡಿದ್ದಾನೆ ಎಂದು ಗೋಳಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇಸ್ರಾಯೇಲರ ಅರಸರು, “ಅಯ್ಯೋ, ಯೆಹೋವನು ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವುದಕ್ಕೋಸ್ಕರ ಇಲ್ಲಿಗೆ ಬರಮಾಡಿದ್ದಾನೆ” ಎಂದು ಗೋಳಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆದ್ದರಿಂದ ಇಸ್ರಯೇಲರ ಅರಸನು, “ಅಯ್ಯೋ, ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವುದಕ್ಕಾಗಿ ಸರ್ವೇಶ್ವರ ಇಲ್ಲಿಗೆ ಬರಮಾಡಿದ್ದಾರೆ,” ಎಂದು ಪರಿತಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆಗ ಇಸ್ರೇಲಿನ ರಾಜನಾದ ಯೋರಾಮನು, “ಅಯ್ಯೋ, ಮೂವರು ರಾಜರಾದ ನಮ್ಮನ್ನು ನಿಜವಾಗಿಯೂ ಒಟ್ಟಿಗೆ ಬರಮಾಡಿದ ಯೆಹೋವನು ನಮ್ಮನ್ನು ಮೋವಾಬ್ಯರು ಸೋಲಿಸುವಂತೆ ಮಾಡಿದನಲ್ಲಾ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಇಸ್ರಾಯೇಲಿನ ಅರಸನು, “ಅಯ್ಯೋ, ಯೆಹೋವ ದೇವರು ಈ ಮೂರು ಮಂದಿ ಅರಸರನ್ನು ಮೋವಾಬ್ಯರ ಕೈಯಲ್ಲಿ ಒಪ್ಪಿಸಿಕೊಡಲು ಕರೆದಿದ್ದಾರಲ್ಲಾ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 3:10
8 ತಿಳಿವುಗಳ ಹೋಲಿಕೆ  

ನಿನ್ನ ಮಕ್ಕಳು ಪ್ರಜ್ಞೆತಪ್ಪಿದವರಾಗಿ ಬಲೆಗೆ ಸಿಕ್ಕಿದ ಜಿಂಕೆಯಂತೆ ಬೀದಿಗಳೆಲ್ಲಾ ಕೂಡುವ ಚೌಕದಲ್ಲಿ ಬಿದ್ದಿದ್ದಾರೆ; ಯೆಹೋವನ ರೋಷವನ್ನೂ ನಿನ್ನ ದೇವರ ತರ್ಜನವನ್ನೂ ಹೊಟ್ಟೆ ತುಂಬಾ ಕುಡಿದಿದ್ದಾರೆ.


ಅವರು ಘೋರಕಷ್ಟಕ್ಕೊಳಗಾಗಿ ಹಸಿದುಕೊಂಡು ದೇಶದಲ್ಲಿ ಅಲೆಯುವರು; ಹಸಿದಾಗ ರೇಗಿಕೊಂಡು ತಮ್ಮ ರಾಜನನ್ನೂ ತಮ್ಮ ದೇವರನ್ನೂ ಶಪಿಸುವರು;


ಮನುಷ್ಯನು ಮೂರ್ಖತನದಿಂದ ತನ್ನ ಗತಿಯನ್ನು ಕೆಡಿಸಿಕೊಂಡು ಯೆಹೋವನ ಮೇಲೆ ಕುದಿಯುವನು.


ಅವನು ಅವರೊಡನೆ ಮಾತಾಡುತ್ತಿರುವಾಗಲೇ ಆಳೂ [ಅವನ ಹಿಂದಿನಿಂದ ಅರಸನೂ] ಅಲ್ಲಿಗೆ ಬಂದರು. ಅರಸನು ಎಲೀಷನಿಗೆ - ನೋಡು, ಈ ಆಪತ್ತು ಯೆಹೋವನಿಂದಲೇ ಬಂದದ್ದು. ಇನ್ನು ಮುಂದೆ ನಾನೇಕೆ ಆತನನ್ನು ನಿರೀಕ್ಷಿಸಿಕೊಂಡಿರಬೇಕು ಅಂದನು.


ಕಾಯಿನನು ಯೆಹೋವನಿಗೆ - ನನ್ನ ಅಪರಾಧಫಲ ತಾಳಕೂಡದಷ್ಟಾಗಿದೆ.


ಆಗ ಇಸ್ರಾಯೇಲ್ ಯೆಹೂದ ಎದೋಮ್ ರಾಜ್ಯಗಳ ಅರಸರು ಹೊರಟು ಸುತ್ತಾದ ದಾರಿಯಿಂದ ಏಳು ದಿವಸ ಪ್ರಯಾಣಮಾಡಿದರು. ಮಾರ್ಗದಲ್ಲಿ ಅವರ ಸೈನಿಕರಿಗೂ ಅವರು ತಂದ ಪಶುಗಳಿಗೂ ನೀರು ಸಿಕ್ಕದೆಹೋದದರಿಂದ ಇಸ್ರಾಯೇಲ್ಯರ ಅರಸನು -


ಆದರೆ ಯೇಹೋಷಾಫಾಟನು - ಯೆಹೋವನ ಸನ್ನಿಧಿಯಲ್ಲಿ ನಮಗೋಸ್ಕರ ವಿಚಾರಿಸಬಲ್ಲವನಾದ ಒಬ್ಬ ಪ್ರವಾದಿಯು ಇಲ್ಲಿರುವದಿಲ್ಲವೋ ಎಂದು ಕೇಳಿದನು. ಆಗ ಇಸ್ರಾಯೇಲ್ಯರ ಅರಸನ ಸೇವಕರಲ್ಲೊಬ್ಬನು ಅವನಿಗೆ - ಶಾಫಾಟನ ಮಗನೂ ಎಲೀಯನ ಕೈಗೆ ನೀರು ಕೊಡುತ್ತಿದ್ದವನೂ ಆದ ಎಲೀಷನೆಂಬ ಪ್ರವಾದಿಯು ಇಲ್ಲಿರುತ್ತಾನೆ ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು