Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 3:11 - ಕನ್ನಡ ಸತ್ಯವೇದವು J.V. (BSI)

11 ಆದರೆ ಯೇಹೋಷಾಫಾಟನು - ಯೆಹೋವನ ಸನ್ನಿಧಿಯಲ್ಲಿ ನಮಗೋಸ್ಕರ ವಿಚಾರಿಸಬಲ್ಲವನಾದ ಒಬ್ಬ ಪ್ರವಾದಿಯು ಇಲ್ಲಿರುವದಿಲ್ಲವೋ ಎಂದು ಕೇಳಿದನು. ಆಗ ಇಸ್ರಾಯೇಲ್ಯರ ಅರಸನ ಸೇವಕರಲ್ಲೊಬ್ಬನು ಅವನಿಗೆ - ಶಾಫಾಟನ ಮಗನೂ ಎಲೀಯನ ಕೈಗೆ ನೀರು ಕೊಡುತ್ತಿದ್ದವನೂ ಆದ ಎಲೀಷನೆಂಬ ಪ್ರವಾದಿಯು ಇಲ್ಲಿರುತ್ತಾನೆ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆದರೆ ಯೆಹೋಷಾಫಾಟನು, “ಯೆಹೋವನ ಸನ್ನಿಧಿಯಲ್ಲಿ ನಮಗೋಸ್ಕರ ವಿಚಾರಿಸಬಲ್ಲವನಾದ ಒಬ್ಬ ಪ್ರವಾದಿಯು ಇಲ್ಲಿ ಇಲ್ಲವೇ?” ಎಂದು ಕೇಳಿದನು. ಆಗ ಇಸ್ರಾಯೇಲರ ಅರಸನ ಸೇವಕರಲ್ಲೊಬ್ಬನು ಅವನಿಗೆ, “ಶಾಫಾಟನ ಮಗನು, ಎಲೀಯನ ಕೈಗೆ ನೀರು ಕೊಡುತ್ತಿದ್ದವನೂ ಆದ ಎಲೀಷನೆಂಬ ಪ್ರವಾದಿಯು ಇಲ್ಲಿರುತ್ತಾನೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆದರೆ ಯೆಹೋಷಾಫಾಟನು, “ಸರ್ವೇಶ್ವರನ ಸನ್ನಿಧಿಯಲ್ಲಿ ನಮ್ಮ ಪರವಾಗಿ ವಿಚಾರಿಸಬಲ್ಲ ಪ್ರವಾದಿ ಇಲ್ಲಿ ಯಾರೂ ಇಲ್ಲವೇ?” ಎಂದು ಕೇಳಿದನು. ಆಗ ಇಸ್ರಯೇಲ್ ಅರಸನ ಸೇವಕರಲ್ಲೊಬ್ಬನು, “ಶಾಫಾಟನ ಮಗನೂ ಎಲೀಯನ ಕೈಗೆ ನೀರು ಕೊಡುತ್ತಿದ್ದವನೂ ಆದ ಎಲೀಷನೆಂಬ ಪ್ರವಾದಿ ಇಲ್ಲಿರುತ್ತಾನೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದರೆ ಯೆಹೋಷಾಫಾಟನು, “ಯೆಹೋವನ ಪ್ರವಾದಿಗಳಲ್ಲಿ ನಿಜವಾಗಿಯೂ ಯಾರಾದರೊಬ್ಬರು ಇಲ್ಲಿರಬೇಕು. ನಾವೇನು ಮಾಡಬೇಕೆಂದು ಯೆಹೋವನು ಹೇಳುತ್ತಾನೆ. ಅದಕ್ಕಾಗಿ ನಾವು ಆ ಪ್ರವಾದಿಯನ್ನು ಕೇಳೋಣ” ಎಂದು ಹೇಳಿದನು. ಇಸ್ರೇಲಿನ ರಾಜನ ಸೇವಕರಲ್ಲಿ ಒಬ್ಬನು, “ಶಾಫಾಟನ ಮಗನಾದ ಎಲೀಷನು ಇಲ್ಲಿಯೇ ಇದ್ದಾನೆ. ಎಲೀಷನು ಎಲೀಯನ ಸೇವಕನಾಗಿದ್ದನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದರೆ ಯೆಹೋಷಾಫಾಟನು ಪ್ರವಾದಿಯ ಮೂಲಕವಾಗಿ ಯೆಹೋವ ದೇವರನ್ನು ಕೇಳುವ ಹಾಗೆ, “ಇಲ್ಲಿ ಯೆಹೋವ ದೇವರ ಪ್ರವಾದಿಯು ಯಾವನೂ ಇಲ್ಲವೋ?” ಎಂದನು. ಆಗ ಇಸ್ರಾಯೇಲಿನ ಅರಸನ ಸೇವಕರಲ್ಲಿ ಒಬ್ಬನು ಉತ್ತರವಾಗಿ, “ಎಲೀಯನ ಕೈಗಳ ಮೇಲೆ ನೀರು ಹೊಯ್ಯುತ್ತಿದ್ದ ಶಾಫಾಟನ ಮಗ ಎಲೀಷನು ಇಲ್ಲಿದ್ದಾನೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 3:11
27 ತಿಳಿವುಗಳ ಹೋಲಿಕೆ  

ಆದರೆ ಯೆಹೋಷಾಫಾಟನು ಇಸ್ರಾಯೇಲ್ಯರ ಅರಸನನ್ನು - ಯೆಹೋವನ ಪ್ರವಾದಿಗಳಲ್ಲಿ ಇವರ ಹೊರತಾಗಿ ನಾವು ವಿಚಾರಿಸಬಹುದಾದ ಬೇರೆ ಪ್ರವಾದಿಯಿರುವದಿಲ್ಲವೋ ಎಂದು ಕೇಳಲು ಅವನು -


ಎಲೀಷನು ಹಿಂದಿರುಗಿಹೋಗಿ ತಾನು ಉಳುತ್ತಿದ್ದ ಜೋಡಿ ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ವಧಿಸಿ ಮಾಂಸವನ್ನು ರಂಟೆಯ ಕಟ್ಟಿಗೆಯಿಂದ ಬೇಯಿಸಿ ಜನರಿಗೆ ಔತಣಮಾಡಿಸಿದನು. ಅನಂತರ ಅವನು ಎದ್ದು ಎಲೀಯನನ್ನು ಹಿಂಬಾಲಿಸಿ ಅವನ ಸೇವಕನಾದನು.


ಆದರೂ ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡಲೇ ಇಲ್ಲ.


ಕರ್ತನಾದ ಯೆಹೋವನು ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ರಹಸ್ಯವನ್ನು ತಿಳಿಸದೆ ಏನೂ ಮಾಡನು.


ನಮ್ಮ ಆರಾಧನಾಚಿಹ್ನೆಗಳು ಈಗ ಕಾಣುವದಿಲ್ಲ. ಮುಂಚೆ ಇದ್ದಂತೆ ನಮಗೆ ಪ್ರವಾದಿಗಳು ಯಾರೂ ಇಲ್ಲ; ಇದು ಎಷ್ಟರವರೆಗೆ ಇರುವದೆಂದು ಬಲ್ಲವರು ನಮ್ಮಲ್ಲಿ ಯಾರೂ ಇಲ್ಲ.


ನೀವು ಮೊದಲನೆಯ ಸಾರಿ ಇರಲಿಲ್ಲವಾದದರಿಂದ ನಮ್ಮ ದೇವರಾದ ಯೆಹೋವನು ತನ್ನ ಸನ್ನಿಧಿಗೆ ಧರ್ಮವಿಧಿ ವಿರೋಧವಾಗಿ ಬಂದ ನಮ್ಮಲ್ಲಿ ಒಬ್ಬನನ್ನು ಸಂಹರಿಸಿದನಷ್ಟೆ ಎಂದು ಹೇಳಲು


ದಾವೀದನು ತಿರಿಗಿ ದೇವರ ಸನ್ನಿಧಿಯಲ್ಲಿ ವಿಚಾರಿಸಿದಾಗ ಆತನು ಅವನಿಗೆ - ನೀನು ಅವರನ್ನು ಬೆನ್ನಟ್ಟಬೇಡ; ಅವರ ಎದುರಿನಿಂದ ತಿರುಗಿಕೊಂಡು ಹೋಗಿ ಬಾಕಾಮರಗಳಿರುವ ಕಡೆಯಿಂದ ಅವರ ಮೇಲೆ ಬೀಳು.


ನಾನು ಫಿಲಿಷ್ಟಿಯರಿಗೆ ವಿರೋಧವಾಗಿ ಹೋಗಬಹುದೋ? ಅವರನ್ನು ನನ್ನ ಕೈಗೆ ಒಪ್ಪಿಸಿಕೊಡುವಿಯೋ ಎಂದು ಕೇಳಲು ಆತನು - ಹೋಗು, ನಾನು ಅವರನ್ನು ನಿನ್ನ ಕೈಗೆ ಒಪ್ಪಿಸುವೆನು ಎಂದು ಉತ್ತರಕೊಟ್ಟನು.


ಸೌಲನು ಯೆಹೋವನ ಮಾತನ್ನು ಕೇಳದೆ ಆತನಿಗೆ ವಿರೋಧವಾಗಿ ದ್ರೋಹಮಾಡಿದ್ದರಿಂದಲೂ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸದೆ ಪ್ರೇತಸಿದ್ಧರಲ್ಲಿ ವಿಚಾರಿಸಿದ್ದರಿಂದಲೂ ಅವನಿಗೆ ಇಂಥ ಮರಣವಾಯಿತು.


ಎಲೀಷನು ಅಲ್ಲಿಂದ ಕರ್ಮೆಲ್‍ಬೆಟ್ಟಕ್ಕೆ ಹೋಗಿ ಅನಂತರ ಸಮಾರ್ಯಕ್ಕೆ ಬಂದನು.


ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡವಳೂ ಆಗಿರಬೇಕು; ಅಂದರೆ ಮಕ್ಕಳನ್ನು ಸಾಕಿದವಳಾಗಲಿ ಅತಿಥಿಸತ್ಕಾರವನ್ನು ಮಾಡಿದವಳಾಗಲಿ ದೇವಜನರಿಗೆ ಉಪಚಾರಮಾಡಿದವಳಾಗಲಿ ಸಂಕಟದಲ್ಲಿ ಬಿದ್ದವರಿಗೆ ಸಹಾಯಮಾಡಿದವಳಾಗಲಿ ಎಲ್ಲಾ ಸತ್ಕಾರ್ಯಗಳಲ್ಲಿ ಆಸಕ್ತಿಯುಳ್ಳವಳಾಗಲಿ ಆಗಿರಬೇಕು.


ತಿಮೊಥೆಯನ ಗುಣವನ್ನು ನೀವು ನೋಡಿ ತಿಳಿದುಕೊಂಡಿದ್ದೀರಿ; ಮಗನು ತಂದೆಗೆ ಹೇಗೋ ಹಾಗೆಯೇ ಅವನು ನನ್ನ ಜೊತೆಯಲ್ಲಿ ಸುವಾರ್ತಾಪ್ರಚಾರಕ್ಕಾಗಿ ಕಷ್ಟಪಟ್ಟು ಕೆಲಸನಡಿಸಿದನೆಂಬದು ನಿಮಗೆ ಗೊತ್ತುಂಟು.


(ಇಸ್ರಾಯೇಲ್ಯರು ಹೋಗಿ ಯೆಹೋವನ ಮುಂದೆ ಅಳುತ್ತಾ - ನಾವು ತಿರಿಗಿ ನಮ್ಮ ಬಂಧುಗಳಾದ ಬೆನ್ಯಾಮೀನ್ಯರೊಡನೆ ಯುದ್ಧಮಾಡಬೇಕೋ ಎಂದು ಕೇಳಲು ಆತನು - ಹೋಗಿ ಯುದ್ಧಮಾಡಿರಿ ಅಂದನು.


ಇಸ್ರಾಯೇಲ್ಯರು ಬೇತೇಲಿಗೆ ಹೋಗಿ - ಬೆನ್ಯಾಮೀನ್ಯರ ಮೇಲೆ ಯುದ್ಧಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು ಎಂದು ದೇವರಾದ ಯೆಹೋವನನ್ನು ಕೇಳಲು ಆತನು - ಮೊದಲು ಯೆಹೂದಕುಲದವರು ಹೋಗಲಿ ಎಂದು ಹೇಳಿದನು.


ಆಗ ಇಸ್ರಾಯೇಲ್ಯರು ಅವರ ಬುತ್ತಿಯಲ್ಲಿ ಸ್ವಲ್ಪ ತೆಗೆದುಕೊಂಡರು. ಆದರೆ ಯೆಹೋವನನ್ನು ವಿಚಾರಿಸಲಿಲ್ಲ.


ಯೆಹೋವನ ಸೇವಕನಾದ ಮೋಶೆಯು ಸತ್ತ ಮೇಲೆ ಯೆಹೋವನು ಅವನ ಶಿಷ್ಯನಾದ ನೂನನ ಮಗ ಯೆಹೋಶುವನಿಗೆ - ನನ್ನ


ನೀರು ತರಿಸಿಕೊಡುತ್ತೇನೆ; ನಿಮ್ಮ ಕಾಲುಗಳನ್ನು ತೊಳೆದುಕೊಂಡು ಮರದ ನೆರಳಿನಲ್ಲಿ ವಿಶ್ರವಿುಸಿಕೊಳ್ಳಿರಿ.


ಅಯ್ಯೋ! ಯೆಹೋವನು ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವದಕ್ಕೋಸ್ಕರ ಇಲ್ಲಿಗೆ ಬರಮಾಡಿದ್ದಾನೆ ಎಂದು ಗೋಳಾಡಿದನು.


ಯೆಹೋಷಾಫಾಟನು - ಅವನು ಹೇಗೂ ಯೆಹೋವನ ಉತ್ತರವನ್ನು ತಿಳಿಸುವನು ಅಂದದರಿಂದ ಇಸ್ರಾಯೇಲ್ ಎದೋಮ್ ರಾಜ್ಯಗಳ ಅರಸರು ಯೆಹೋಷಾಫಾಟನೊಡನೆ ಎಲೀಷನ ಬಳಿಗೆ ಹೋದರು.


ಅರಸನಾದ ಚಿದ್ಕೀಯನು ಅವನನ್ನು ಕರತರಿಸಿ ಯೆಹೋವನಿಂದ ದೈವೋಕ್ತಿಯು ದೊರೆಯಿತೋ ಎಂದು ತನ್ನ ಮನೆಯಲ್ಲಿ ರಹಸ್ಯವಾಗಿ ವಿಚಾರಿಸಲು ಯೆರೆಮೀಯನು - ಹೌದು, ದೊರೆಯಿತು, ನೀನು ಬಾಬೆಲಿನ ಅರಸನ ಕೈಯಲ್ಲಿ ಸಿಕ್ಕಿ ಬೀಳುವಿ ಅಂದನು.


ಆದರೆ ಯೆಹೋಷಾಫಾಟನು ಇಸ್ರಾಯೇಲ್ಯರ ಅರಸನನ್ನು - ಯೆಹೋವನ ಪ್ರವಾಧಿಗಳಲ್ಲಿ ಇವರ ಹೊರತಾಗಿ ನಾವು ವಿಚಾರಿಸಬಹುದಾದ ಬೇರೆ ಪ್ರವಾದಿಯಿರುವದಿಲ್ಲವೋ ಎಂದು ಕೇಳಲು ಅವನು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು