Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 3:14 - ಕನ್ನಡ ಸತ್ಯವೇದವು J.V. (BSI)

14 ಆಗ ಎಲೀಷನು - ನಾನು ಸನ್ನಿಧಿಸೇವೆ ಮಾಡುತ್ತಿರುವ ಸೇನಾಧೀಶ್ವರನಾದ ಯೆಹೋವನಾಣೆ, ಯೆಹೂದ್ಯರ ಅರಸನಾದ ಯೆಹೋಷಾಫಾಟನು ನಿನ್ನ ಜೊತೆಯಲ್ಲಿರದಿದ್ದರೆ ನಾನು ನಿನ್ನನ್ನು ನೋಡುತ್ತಿದ್ದಿಲ್ಲ, ಲಕ್ಷಿಸುತ್ತಿದ್ದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಎಲೀಷನು, “ನಾನು ಸೇವೆಮಾಡುತ್ತಿರುವ ಸೇನಾಧೀಶ್ವರನಾದ ಯೆಹೋವನಾಣೆ, ಯೆಹೂದ್ಯರ ಅರಸನಾದ ಯೆಹೋಷಾಫಾಟನು ನಿನ್ನ ಜೊತೆಯಲ್ಲಿರದಿದ್ದರೆ ನಾನು ನಿನ್ನನ್ನು ನೋಡುತ್ತಿರಲಿಲ್ಲ. ನಿನ್ನನ್ನು ಲಕ್ಷಿಸುತ್ತಲೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆಗ ಎಲೀಷನು, “ನಾನು ಸನ್ನಿಧಿಸೇವೆ ಮಾಡುತ್ತಿರುವ ಸರ್ವೇಶ್ವರನಾಣೆ, ಯೆಹೂದ್ಯರ ಅರಸನಾದ ಯೆಹೋಷಾಫಾಟನು ನಿಮ್ಮ ಜೊತೆಯಲ್ಲಿರದಿದ್ದರೆ ನಾನು ನಿಮ್ಮನ್ನು ನೋಡುತ್ತಿರಲಿಲ್ಲ; ಲಕ್ಷಿಸುತ್ತಲೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಎಲೀಷನು, “ಸರ್ವಶಕ್ತನಾದ ಯೆಹೋವನ ಸೇವೆಯನ್ನು ಮಾಡುವವನು ನಾನು. ಯೆಹೋವನಾಣೆ, ನಾನು ನಿಜವನ್ನು ಹೇಳುತ್ತೇನೆ. ಯೆಹೂದದ ರಾಜನಾದ ಯೆಹೋಷಾಫಾಟನು ಇಲ್ಲಿ ಇಲ್ಲದಿದ್ದರೆ, ನಾನು ನಿನ್ನನ್ನು ಕಣ್ಣೆತ್ತಿಯೂ ನೋಡುತ್ತಿರಲಿಲ್ಲ; ನಿನ್ನನ್ನು ಗಮನಿಸುತ್ತಲೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಎಲೀಷನು, “ನಾನು ಸನ್ನಿಧಿಸೇವೆ ಮಾಡುತ್ತಿರುವ ಸೇನಾಧೀಶ್ವರ ಯೆಹೋವ ದೇವರ ಆಣೆ, ನಿಶ್ಚಯವಾಗಿ ಯೆಹೂದದ ಅರಸನಾದ ಯೆಹೋಷಾಫಾಟನು ನಿನ್ನ ಜೊತೆಯಲ್ಲಿ ಬಂದಿರುವುದರಿಂದ ಗೌರವಿಸುತ್ತಿದ್ದೇನೆ; ಇಲ್ಲದಿದ್ದರೆ, ನಾನು ನಿನ್ನ ಕಡೆ ಸಹ ನೋಡುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 3:14
12 ತಿಳಿವುಗಳ ಹೋಲಿಕೆ  

ಅದಕ್ಕೆ ಎಲೀಷನು - ನಾನು ಸನ್ನಿಧಿ ಸೇವೆಮಾಡುತ್ತಿರುವ ಯೆಹೋವನಾಣೆ, ನಿನ್ನಿಂದ ಏನೂ ತೆಗೆದುಕೊಳ್ಳುವದಿಲ್ಲ ಅಂದನು. ನಾಮಾನನು ಎಷ್ಟು ಒತ್ತಾಯಪಡಿಸಿದರೂ ಅವನು ತೆಗೆದುಕೊಳ್ಳಲೇ ಇಲ್ಲ.


ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯನಾದ ಎಲೀಯ ಎಂಬವನು ಅಹಾಬನಿಗೆ - ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್‍ದೇವರಾದ ಯೆಹೋವನಾಣೆ, ನಾನು ಸೂಚಿಸಿದ ಹೊರತು ಇಂದಿನಿಂದ ಕೆಲವು ವರುಷಗಳವರೆಗೆ ಮಳೆಯಾಗಲಿ ಮಂಜಾಗಲಿ ಬೀಳುವದಿಲ್ಲ ಅಂದನು.


ಆತನ ಬಳಿಗೆ ತಮ್ಮ ಶಿಷ್ಯರನ್ನು ಹೆರೋದಿಯರ ಕೂಡ ಕಳುಹಿಸಿದರು. ಇವರು ಬಂದು - ಗುರುವೇ, ನೀನು ಸತ್ಯವಂತನು, ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನು, ಯಾರಿಗೂ ಹೆದರದವನು; ನೀನು ಜನರ ಮುಖದಿಚ್ಫೆಗೆ ಮಾತಾಡುವವನಲ್ಲ ಎಂದು ಬಲ್ಲೆವು.


ಇಗೋ, ನಾನು ಈ ಹೊತ್ತು ನಿನ್ನನ್ನು ಯೆಹೂದದ ಅರಸರು, ಅಧಿಪತಿಗಳು, ಯಾಜಕರು, ಸಾಧಾರಣ ಜನರು, ಅಂತು ದೇಶದವರೆಲ್ಲರನ್ನೂ ಎದುರಿಸತಕ್ಕ ಕೋಟೆಕೊತ್ತಲದ ಪಟ್ಟಣವನ್ನಾಗಿಯೂ ಕಬ್ಬಿಣದ ಕಂಬವನ್ನಾಗಿಯೂ ತಾಮ್ರದ ಪೌಳಿಗೋಡೆಯನ್ನಾಗಿಯೂ ಸ್ಥಾಪಿಸಿದ್ದೇನೆ.


ಅವನು ಭ್ರಷ್ಟರನ್ನು ಜರಿದುಬಿಟ್ಟವನೂ ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವನೂ ನಷ್ಟವಾದರೂ ಪ್ರಮಾಣತಪ್ಪದವನೂ ಆಗಿರಬೇಕು.


ಅಹಾಬನು ಎಲೀಯನನ್ನು ಕಂಡು ಅವನನ್ನು - ನನ್ನ ವೈರಿಯೇ, ನೀನು ನನ್ನನ್ನು ಕಂಡುಕೊಂಡಿಯಾ ಎಂದು ಕೇಳಲು ಅವನು - ಹೌದು, ಕಂಡುಕೊಂಡೆನು; ನೀನು ನಿನ್ನನ್ನು ಪಾಪಕ್ಕೆ ಮಾರಿಬಿಟ್ಟು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದಿಯಲ್ಲಾ.


ಆಗ ಎಲೀಯನು ಅವನಿಗೆ - ನಾನು ಸನ್ನಿಧಿ ಸೇವೆಮಾಡುತ್ತಿರುವ ಸೇನಾಧೀಶ್ವರನಾದ ಯೆಹೋವನಾಣೆ, ಈಹೊತ್ತು ಅಹಾಬನಿಗೆ ಹೇಗೂ ಕಾಣಿಸಿಕೊಳ್ಳುವೆನು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು