Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 3:2 - ಕನ್ನಡ ಸತ್ಯವೇದವು J.V. (BSI)

2 ಇವನು ತನ್ನ ತಂದೆತಾಯಿಗಳಷ್ಟು ದುಷ್ಟನಾಗಿರಲಿಲ್ಲವಾದರೂ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು. ತನ್ನ ತಂದೆಯು ಬಾಳನಿಗೋಸ್ಕರ ನಿಲ್ಲಿಸಿದ ಕಲ್ಲಿನ ಕಂಬವನ್ನು ತೆಗೆದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇವನು ತನ್ನ ತಂದೆತಾಯಿಗಳಷ್ಟು ದುಷ್ಟನಾಗಿರಲಿಲ್ಲ. ಆದರೂ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು. ತನ್ನ ತಂದೆ ಬಾಳನಿಗೋಸ್ಕರ ನಿಲ್ಲಿಸಿದ ಕಲ್ಲಿನ ಸ್ತಂಭ, ಸ್ಮಾರಕಗಳನ್ನು ತೆಗೆದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಇವನು ತನ್ನ ತಂದೆ ತಾಯಿಗಳಷ್ಟು ದುಷ್ಟನಾಗಿರಲಿಲ್ಲ. ಆದರೂ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು. ತನ್ನ ತಂದೆ ಬಾಳ್ ದೇವತೆಯ ಗೌರವಾರ್ಥ ನಿಲ್ಲಿಸಿದ ಕಲ್ಲಿನ ಕಂಬವನ್ನು ತೆಗೆದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಯೋರಾಮನು ಮಾಡಿದನು. ಆದರೆ ಯೋರಾಮನು ಅವನ ತಂದೆತಾಯಿಗಳಂತೆ ಇರಲಿಲ್ಲ. ಸುಳ್ಳುದೇವರಾದ ಬಾಳನನ್ನು ಪೂಜಿಸಲು ತನ್ನ ತಂದೆಯು ನಿರ್ಮಿಸಿದ್ದ ಸ್ತಂಭವನ್ನು ಅವನು ಕಿತ್ತುಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆದರೆ ತನ್ನ ತಂದೆಯಂತೆ, ತನ್ನ ತಾಯಿಯಂತೆ ಮಾಡಲಿಲ್ಲ. ತನ್ನ ತಂದೆಯು ಮಾಡಿಟ್ಟ ಬಾಳನ ಸ್ತಂಭವನ್ನು ತೆಗೆದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 3:2
14 ತಿಳಿವುಗಳ ಹೋಲಿಕೆ  

ತರುವಾಯ ಅವನು ಎಲ್ಲಾ ಜನರನ್ನು ಕೂಡಿಸಿ ಅವರಿಗೆ - ಅಹಾಬನು ಬಾಳನನ್ನು ಸ್ವಲ್ಪ ಮಾತ್ರ ಸೇವಿಸಿದನು; ಯೇಹುವಾದರೋ ಅಧಿಕವಾಗಿ ಸೇವಿಸಬೇಕೆಂದಿರುತ್ತಾನೆ.


ಹೆಂಡತಿಯಾದ ಈಜೆಬೆಲಳಿಂದ ಪ್ರೇರಿತನಾಗಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವದನ್ನು ಮಾಡುವದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ.


ಅವರ ದೇವತೆಗಳನ್ನು ನೀವು ನಮಸ್ಕರಿಸಲೂಬಾರದು, ಪೂಜಿಸಲೂಬಾರದು; ಅವರ ಆಚರಣೆಗಳನ್ನು ಅನುಸರಿಸಲೇಬಾರದು. ಆ ಜನಗಳನ್ನು ನಿರ್ಮೂಲ ಮಾಡಿ ವಿಗ್ರಹಸ್ತಂಭಗಳನ್ನು ನಾಶನ ಮಾಡಬೇಕು.


ಅವನು ತನ್ನ ತಂದೆಯಾದ ಮನಸ್ಸೆಯ ಮಾರ್ಗದಲ್ಲಿಯೇ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ಇದಲ್ಲದೆ ಅವನು ತನ್ನ ಮಗನನ್ನು ಆಹುತಿಕೊಟ್ಟನು. ಕಣಿಹೇಳಿಸುವದು, ಯಂತ್ರಮಂತ್ರಗಳನ್ನು ಮಾಡಿಸುವದು, ಸತ್ತವರಲ್ಲಿ ವಿಚಾರಿಸುವವರ ಮತ್ತು ಬೈತಾಳಿಕರ ಬಳಿಕೆ ಮಾಡುವದು ಇವೇ ಮೊದಲಾದ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನೆಬ್ಬಿಸಿದನು.


ಅನಂತರ ಅವನು ಅರಮನೆಯೊಳಗೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡು ತನ್ನ ಸೇವಕರಿಗೆ - ಆ ಶಾಪಗ್ರಸ್ತ ಸ್ತ್ರೀಯ ಶವವನ್ನು ನೋಡಿಕೊಂಡು ಸಮಾಧಿಮಾಡಿರಿ; ಆಕೆಯು ರಾಜಪುತ್ರಿಯಾಗಿರುತ್ತಾಳಷ್ಟೆ ಎಂದು ಆಜ್ಞಾಪಿಸಿದನು.


ಯೋರಾಮನು ಅವನನ್ನು ಕಂಡ ಕೂಡಲೆ - ಯೇಹುವೇ, ಶುಭವೋ ಎಂದು ಅವನನ್ನು ಕೇಳಿದನು. ಅದಕ್ಕೆ ಅವನು - ನಿನ್ನ ತಾಯಿಯ ದೇವದ್ರೋಹವೂ ಮಂತ್ರತಂತ್ರವೂ ಪ್ರಬಲವಾಗಿರುವಲ್ಲಿ ಶುಭವೆಲ್ಲಿಂದ ಬರುವದು ಎಂದು ಉತ್ತರಕೊಟ್ಟನು.


ಅಹಾಬನು ಎಲೀಯನನ್ನು ಕಂಡು ಅವನನ್ನು - ನನ್ನ ವೈರಿಯೇ, ನೀನು ನನ್ನನ್ನು ಕಂಡುಕೊಂಡಿಯಾ ಎಂದು ಕೇಳಲು ಅವನು - ಹೌದು, ಕಂಡುಕೊಂಡೆನು; ನೀನು ನಿನ್ನನ್ನು ಪಾಪಕ್ಕೆ ಮಾರಿಬಿಟ್ಟು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದಿಯಲ್ಲಾ.


ಅವನು ಯಾರೊಬ್ಬಾಮನಂತೆ ತಾನು ಪಾಪಮಾಡಿದ್ದಲ್ಲದೆ ಇಸ್ರಾಯೇಲ್ಯರನ್ನೂ ಪಾಪಕ್ಕೆ ಪ್ರೇರಿಸಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದದರಿಂದ ಹೀಗಾಯಿತು.


ಆದರೆ ನೀನು ಯೆಹೋವನ ಮಾತನ್ನು ಕೇಳದೆ ಕೊಳ್ಳೆಗಾಗಿ ಎರಗಿ ಆತನಿಗೆ ದ್ರೋಹಮಾಡಿದ್ದೇಕೆ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು