Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 3:20 - ಕನ್ನಡ ಸತ್ಯವೇದವು J.V. (BSI)

20 ಪ್ರಾತಃಕಾಲನೈವೇದ್ಯವನ್ನು ಸಮರ್ಪಿಸುವ ಹೊತ್ತಿನಲ್ಲಿ ಫಕ್ಕನೆ ಎದೋವಿುನ ಕಡೆಯಿಂದ ನೀರು ಬಂದು ದೇಶದಲ್ಲೆಲ್ಲಾ ತುಂಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಮುಂಜಾನೆ ವೇಳೆಯಲ್ಲಿ ನೈವೇದ್ಯವನ್ನು ಸಮರ್ಪಿಸುವ ಹೊತ್ತಿನಲ್ಲಿ ಪಕ್ಕನೆ ಎದೋಮಿನ ಕಡೆಯಿಂದ ನೀರು ಬಂದು ದೇಶದಲ್ಲೆಲ್ಲಾ ತುಂಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಪ್ರಾತಃಕಾಲದ ನೈವೇದ್ಯವನ್ನು ಸಮರ್ಪಿಸುವ ಹೊತ್ತಿನಲ್ಲಿ ಫಕ್ಕನೆ ಎದೋಮಿನ ಕಡೆಯಿಂದ ನೀರು ಬಂದು ನಾಡಿನಲ್ಲೆಲ್ಲಾ ತುಂಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಮುಂಜಾನೆ, ಯಜ್ಞಗಳನ್ನು ಅರ್ಪಿಸುವ ಕಾಲದಲ್ಲಿ ಎದೋಮಿನ ಕಡೆಯಿಂದ ನೀರು ಹರಿಯಲಾರಂಭಿಸಿತು ಮತ್ತು ಕಣಿವೆಯು ತುಂಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಉದಯದಲ್ಲಿ ಕಾಣಿಕೆಗಳನ್ನು ಅರ್ಪಿಸುತ್ತಿರುವಾಗ, ನೀರು ಎದೋಮಿನ ಮಾರ್ಗವಾಗಿ ಬಂದದ್ದರಿಂದ ದೇಶವು ನೀರಿನಿಂದ ತುಂಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 3:20
8 ತಿಳಿವುಗಳ ಹೋಲಿಕೆ  

ಮೊದಲು ನನ್ನ ಕನಸಿನಲ್ಲಿ ಕಂಡ ಗಬ್ರಿಯೇಲನೆಂಬ ಪುರುಷನು ಅಸುರುಸುರಾಗಿ ಹಾರಿಬಂದು ಸಂಧ್ಯಾನೈವೇದ್ಯಸಮಯದಲ್ಲಿ ನನ್ನನ್ನು ಸೇರಿ


ಬಂಡೆಯನ್ನು ಹೊಡೆದು ನೀರು ಚಿವ್ಮಿು ಹೊರಗೆ ಬರುವಂತೆಯೂ ಪ್ರವಾಹವು ದಡಮೀರಿ ಹರಿಯುವಂತೆಯೂ ಮಾಡಿದನಲ್ಲವೋ? ಆತನು ರೊಟ್ಟಿಯನ್ನೂ ಕೊಡಶಕ್ತನೋ? ತನ್ನ ಜನರಿಗೆ ಮಾಂಸವನ್ನೂ ಒದಗಿಸುವನೋ ಎಂಬದೇ.


ಸಂಧ್ಯಾನೈವೇದ್ಯದ ಹೊತ್ತಿಗೆ ಪ್ರವಾದಿಯಾದ ಎಲೀಯನು ವೇದಿಯ ಹತ್ತಿರ ಬಂದು - ಅಬ್ರಹಾಮ್ ಇಸಾಕ್ ಇಸ್ರಾಯೇಲ್ಯರ ದೇವರೇ, ಯೆಹೋವನೇ, ನೀನೋಬ್ಬನೇ ಇಸ್ರಾಯೇಲ್ಯರ ದೇವರಾಗಿರುತ್ತೀ ಎಂಬದನ್ನೂ ನಾನು ನಿನ್ನ ಸೇವಕನಾಗಿರುತ್ತೇನೆಂಬದನ್ನೂ ಇದನ್ನೆಲ್ಲಾ ನಿನ್ನ ಅಪ್ಪಣೆಯ ಮೇರೆಗೆ ಮಾಡಿದೆನೆಂಬದನ್ನೂ ಈಹೊತ್ತು ತೋರಿಸಿ ಕೊಡು.


ಅರಸುಗಳು ತಮಗೆ ವಿರೋಧವಾಗಿ ಯುದ್ಧಕ್ಕೆ ಬಂದಿದ್ದಾರೆಂಬದನ್ನು ಮೋವಾಬ್ಯರು ಕೇಳಿ ಆಯುಧಗಳನ್ನು ಧರಿಸಶಕ್ತರಾದ ಎಲ್ಲಾ ಯೌವನಸ್ಥರನ್ನೂ ಪ್ರಾಯಸ್ಥರನ್ನೂ ಕೂಡಿಸಿಕೊಂಡು ತಮ್ಮ ದೇಶದ ಮೇರೆಗೆ ಬಂದು ಬೆಳಿಗ್ಗೆ ಎದ್ದು ನೋಡಲು


ಅರಣ್ಯವನ್ನು ಕೆರೆಯಾಗಿಯೂ ಒಣನೆಲವನ್ನು ಬುಗ್ಗೆಗಳಾಗಿಯೂ ಮಾಡಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು