Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 3:23 - ಕನ್ನಡ ಸತ್ಯವೇದವು J.V. (BSI)

23 ಅದು ರಕ್ತ; ಅರಸರು ತಮ್ಮ ತಮ್ಮೊಳಗೆ ಜಗಳವಾಡಿ ಸಂಹೃತರಾಗಿರಬೇಕು; ಮೋವಾಬ್ಯರೇ, ಏಳಿರಿ, ಸುಲಿಗೆಗೆ ಹೋಗೋಣ ಎಂದು ಕೂಗಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಇವರು, “ಅದು ರಕ್ತ! ಅರಸರು ತಮ್ಮ ತಮ್ಮೊಳಗೆ ಜಗಳವಾಡಿ ಸಂಹಾರರಾಗಿರಬೇಕು. ಮೋವಾಬ್ಯರೇ ಏಳಿರಿ, ಸುಲಿಗೆಗೆ ಹೋಗೋಣ!” ಎಂದು ಕೂಗಿಕೊಂಡು ಇಸ್ರಾಯೇಲರ ಪಾಳೆಯಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆದ್ದರಿಂದ, “ಅದು ರಕ್ತ; ಅರಸರು ತಮ್ಮ ತಮ್ಮೊಳಗೆ ಜಗಳವಾಡಿ ಹತರಾಗಿರಬೇಕು; ಮೋವಾಬ್ಯರೇ, ಏಳಿ, ಸುಲಿಗೆಗೆ ಹೋಗೋಣ,” ಎಂದು ಕೂಗಿಕೊಂಡು ಇಸ್ರಯೇಲರ ಪಾಳೆಯಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಮೋವಾಬಿನ ಜನರು, “ರಕ್ತದತ್ತ ನೋಡಿ! ರಾಜರುಗಳು ಪರಸ್ಪರ ಹೋರಾಡಿರಲೇಬೇಕು. ಅವರು ಒಬ್ಬರನ್ನೊಬ್ಬರು ನಾಶಗೊಳಿಸಿರಲೇಬೇಕು. ಸತ್ತಿರುವ ದೇಹಗಳಿಂದ ಬೆಲೆಬಾಳುವ ವಸ್ತುಗಳನ್ನು ದೋಚಿಕೊಳ್ಳೋಣ!” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಗ ಅವರು, “ಇದು ರಕ್ತವೇ. ಆ ಅರಸರು ತಮ್ಮನ್ನು ತಾವೇ ನಿಜವಾಗಿ ನಾಶಮಾಡಿ ಒಬ್ಬರನ್ನೊಬ್ಬರು ಕೊಂದಿದ್ದಾರೆ. ಈಗ ಮೋವಾಬ್ಯರೇ ಕೊಳ್ಳೆಗೆ ಬನ್ನಿರಿ,” ಎಂದು ಹೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 3:23
8 ತಿಳಿವುಗಳ ಹೋಲಿಕೆ  

ಜನಗಳ ಆಸ್ತಿಪಾಸ್ತಿಯು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ; ಪಕ್ಷಿಯು ಇಟ್ಟುಹೋದ ಮೊಟ್ಟೆಗಳನ್ನು ಸಂಗ್ರಹಿಸಿಕೊಳ್ಳುವವನಂತೆ ಭೂವಿುಯನ್ನೆಲ್ಲಾ ಸಂಗ್ರಹಿಸಿಕೊಂಡಿದ್ದೇನೆ; ರೆಕ್ಕೆಯಾಡಿಸಿ ಬಾಯಿದೆರೆದು ಕೀಚುಗುಟ್ಟುವ ಯಾರೂ ಇರಲಿಲ್ಲ ಎಂದು ಅಂದುಕೊಂಡನು.


ಯೆಹೋಷಾಫಾಟನೂ ಅವನ ಜನರೂ ಸುಲಿಗೆಮಾಡುವದಕ್ಕೋಸ್ಕರ ಅಲ್ಲಿಗೆ ಹೋಗಲು ಅವರಿಗೆ ದ್ರವ್ಯ ವಸ್ತ್ರ ಶ್ರೇಷ್ಠಾಯುಧ ಇವುಗಳು ರಾಶಿರಾಶಿಯಾಗಿ ಸಿಕ್ಕಿದವು. ಅವರು ಹೊರಲಾರದಷ್ಟು ಸುಲುಕೊಂಡರು. ಕೊಳ್ಳೆಯು ಬಲುಹೆಚ್ಚಾಗಿದ್ದದರಿಂದ ಅವರು ಮೂರು ದಿನಗಳವರೆಗೂ ಕೂಡಿಸುತ್ತಿದ್ದರು.


ಕರ್ತನು ಅರಾಮ್ಯರ ಪಾಳೆಯದವರಿಗೆ ರಥರಥಾಶ್ವಸಹಿತವಾದ ಮಹಾಸೈನ್ಯ ಘೋಷವು ಕೇಳಿಸುವಂತೆ ಮಾಡಿದ್ದರಿಂದ ಅವರು - ಇಸ್ರಾಯೇಲ್ಯರ ಅರಸನು ಹಿತ್ತಿಯ, ಐಗುಪ್ತ ಇವುಗಳ ಅರಸರಿಗೆ ಹಣಕೊಟ್ಟು ಅವರನ್ನು ನಮಗೆ ವಿರೋಧವಾಗಿ ಕರತಂದಿದ್ದಾನೆ ಅಂದುಕೊಂಡು


ನಿಶ್ಚಯವಾಗಿ ಅವರಿಗೆ ಕೊಳ್ಳೆಸಿಕ್ಕಿರುತ್ತದೆ; ಅದನ್ನು ಹಂಚಿಕೊಳ್ಳುತ್ತಿದ್ದಾರೆ. ಪ್ರತಿಯೊಬ್ಬ ಸೈನಿಕನಿಗೆ ಒಬ್ಬಿಬ್ಬರು ದಾಸಿಯರೂ ಸೀಸೆರನಿಗೆ ನಾನಾ ವರ್ಣಗಳುಳ್ಳ ಬಟ್ಟೆಗಳೂ ವಿಚಿತ್ರವಾಗಿ ಕಸೂತಿಹಾಕಿದ ಒಂದೆರಡು ವಸ್ತ್ರಗಳೂ ಕಂಠಮಾಲೆಯೂ ದೊರಕಿರುತ್ತವೆ ಎಂಬದೇ.


ನಾವು ಇವರನ್ನು ಹಿಂದಟ್ಟಿ ಹಿಡಿಯುವೆವು, ಅವರ ಸೊತ್ತನ್ನು ಅಪಹರಿಸಿ ಹಂಚಿಕೊಳ್ಳುವೆವು, ಅವರಲ್ಲಿ ನಮ್ಮ ಕೋರಿಕೆಯನ್ನು ತೀರಿಸಿಕೊಳ್ಳುವೆವು, ನಾವು ಕತ್ತಿಯನ್ನು ಹಿರಿದು ಭುಜಬಲದಿಂದ ಅವರನ್ನು ಸಂಹಾರ ಮಾಡುವೆವು ಎಂಬದಾಗಿ ನಮ್ಮ ಶತ್ರುಗಳು ಮಾತಾಡಿಕೊಳ್ಳುತ್ತಿದ್ದರು.


ಎದುರಿಗಿದ್ದ ನೀರು ಇವರ ದೃಷ್ಟಿಗೆ ಬಿದ್ದಿತು. ಸೂರ್ಯ ಪ್ರಕಾಶದಿಂದ ಆ ನೀರು ರಕ್ತದಂತೆ ಕೆಂಪಾಗಿ ಕಾಣಿಸುತ್ತಿದ್ದದರಿಂದ ಇವರು -


ಇಸ್ರಾಯೇಲ್ಯರ ಪಾಳೆಯಕ್ಕೆ ಹೋದರು. ಆದರೆ ಇಸ್ರಾಯೇಲ್ಯರು ಎದ್ದು ಮೋವಾಬ್ಯರನ್ನು ಸೋಲಿಸಿ ಓಡಿಸಿಬಿಟ್ಟರು. ಇದಲ್ಲದೆ ಅವರು ಮೋವಾಬ್ಯರನ್ನು ಸಂಹರಿಸುತ್ತಾ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು