Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 3:6 - ಕನ್ನಡ ಸತ್ಯವೇದವು J.V. (BSI)

6 ಆದದರಿಂದ ಅರಸನಾದ ಯೋರಾಮನು ಒಡನೆ ಇಸ್ರಾಯೇಲ್ಯರನ್ನು ಕೂಡಿಸಿಕೊಂಡು ಸಮಾರ್ಯದಿಂದ ಹೊರಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದುದರಿಂದ ಅರಸನಾದ ಯೋರಾಮನು ಕೂಡಲೆ ಇಸ್ರಾಯೇಲರನ್ನು ಸೇರಿಸಿಕೊಂಡು ಸಮಾರ್ಯದಿಂದ ಹೊರಟು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆದುದರಿಂದ ಅರಸನಾದ ಯೋರಾಮನು ಒಡನೆ ಇಸ್ರಯೇಲರನ್ನು ಕೂಡಿಸಿಕೊಂಡು ಸಮಾರಿಯದಿಂದ ಹೊರಟನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆಗ ರಾಜನಾದ ಯೋರಾಮನು ಸಮಾರ್ಯದಿಂದ ಹೊರಗೆ ಹೋಗಿ, ಇಸ್ರೇಲಿನ ಜನರನ್ನೆಲ್ಲ ಒಟ್ಟುಗೂಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆ ದಿವಸದಲ್ಲಿ ಅರಸನಾದ ಯೋರಾಮನು ಸಮಾರ್ಯದಿಂದ ಹೊರಟುಹೋಗಿ ಇಸ್ರಾಯೇಲರನ್ನು ಕೂಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 3:6
6 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರೂ ಕೂಡಿ ಆಹಾರ ಸಾಮಗ್ರಿಗಳನ್ನು ಒದಗಿಸಿಕೊಂಡು ಅವರಿಗೆ ವಿರೋಧವಾಗಿ ಬಂದರು. ಅರಾಮ್ಯರು ದೇಶದಲ್ಲೆಲ್ಲಾ ವ್ಯಾಪಿಸಿಕೊಂಡಿದ್ದರು. ಆಡುಮರಿಗಳ ಎರಡು ಹಿಂಡುಗಳಂತಿರುವ ಇಸ್ರಾಯೇಲ್ಯರು ಅವರ ಎದುರಿನಲ್ಲಿ ಪಾಳೆಯ ಮಾಡಿಕೊಂಡರು.


ಸೌಲನು ತೆಲಾಯೀವಿುನಲ್ಲಿ ಸೈನ್ಯವನ್ನು ಕೂಡಿಸಿ ಲೆಕ್ಕಿಸಲು ಎರಡು ಲಕ್ಷ ಮಂದಿ ಕಾಲಾಳುಗಳು ಇದ್ದರು; ಯೆಹೂದ್ಯರು ಹತ್ತು ಸಾವಿರ ಮಂದಿ ಇದ್ದರು.


ಅವರನ್ನು ಬೆಜೆಕಿನಲ್ಲಿ ಕ್ರಮಪಡಿಸಿ ಲೆಕ್ಕಿಸಿದಾಗ ಇಸ್ರಾಯೇಲ್ಯರಲ್ಲಿ ಮೂರು ಲಕ್ಷ ಸೈನಿಕರೂ ಯೆಹೂದ್ಯರಲ್ಲಿ ಮೂವತ್ತು ಸಾವಿರ ಸೈನಿಕರೂ ಇದ್ದರು.


ಆದರೆ ಅಹಾಬನು ಮರಣಹೊಂದಿದನಂತರ ಇವನು ಇಸ್ರಾಯೇಲ್ಯರ ಅರಸನಿಗೆ ವಿರೋಧವಾಗಿ ತಿರುಗಿಬಿದ್ದನು.


ಯೆಹೂದ್ಯರ ಅರಸನಾದ ಯೆಹೋಷಾಫಾಟನಿಗೆ ದೂತರ ಮುಖಾಂತರವಾಗಿ - ಮೋವಾಬ್ಯರ ಅರಸನು ನನಗೆ ವಿರೋಧವಾಗಿ ತಿರುಗಿಬಿದ್ದಿದ್ದಾನೆ; ಮೋವಾಬ್ಯರೊಡನೆ ಯುದ್ಧಮಾಡುವದಕ್ಕೆ ನೀನು ನನ್ನ ಜೊತೆಯಲ್ಲಿ ಬರುತ್ತೀಯೋ ಎಂದು ಹೇಳಿಕಳುಹಿಸಿದನು. ಅದಕ್ಕೆ ಯೆಹೋಷಾಫಾಟನು - ಬರುತ್ತೇನೆ; ನಾನೂ ನೀನೂ, ನನ್ನ ಜನರೂ ನಿನ್ನ ಜನರೂ, ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇಯಲ್ಲವೋ ಎಂದು ಉತ್ತರಕೊಟ್ಟು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು