2 ಅರಸುಗಳು 3:7 - ಕನ್ನಡ ಸತ್ಯವೇದವು J.V. (BSI)7 ಯೆಹೂದ್ಯರ ಅರಸನಾದ ಯೆಹೋಷಾಫಾಟನಿಗೆ ದೂತರ ಮುಖಾಂತರವಾಗಿ - ಮೋವಾಬ್ಯರ ಅರಸನು ನನಗೆ ವಿರೋಧವಾಗಿ ತಿರುಗಿಬಿದ್ದಿದ್ದಾನೆ; ಮೋವಾಬ್ಯರೊಡನೆ ಯುದ್ಧಮಾಡುವದಕ್ಕೆ ನೀನು ನನ್ನ ಜೊತೆಯಲ್ಲಿ ಬರುತ್ತೀಯೋ ಎಂದು ಹೇಳಿಕಳುಹಿಸಿದನು. ಅದಕ್ಕೆ ಯೆಹೋಷಾಫಾಟನು - ಬರುತ್ತೇನೆ; ನಾನೂ ನೀನೂ, ನನ್ನ ಜನರೂ ನಿನ್ನ ಜನರೂ, ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇಯಲ್ಲವೋ ಎಂದು ಉತ್ತರಕೊಟ್ಟು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಯೆಹೂದ್ಯರ ಅರಸನಾದ ಯೆಹೋಷಾಫಾಟನಿಗೆ ದೂತರ ಮುಖಾಂತರವಾಗಿ, “ಮೋವಾಬ್ಯರ ಅರಸನು ನನ್ನ ವಿರುದ್ಧವಾಗಿ ತಿರುಗಿಬಿದ್ದಿದ್ದಾನೆ. ಮೋವಾಬ್ಯರೊಡನೆ ಯುದ್ಧಮಾಡುವುದಕ್ಕೆ ನೀನೂ ನನ್ನ ಜೊತೆಯಲ್ಲಿ ಬರುತ್ತೀಯೋ?” ಎಂದು ಹೇಳಿ ಕಳುಹಿಸಿದನು. ಅದಕ್ಕೆ ಯೆಹೋಷಾಫಾಟನು, “ಬರುತ್ತೇನೆ. ನಾನೂ ನೀನೂ, ನನ್ನ ಜನರೂ, ನಿನ್ನ ಜನರೂ, ನನ್ನ ಕುದುರೆಗಳೂ, ನಿನ್ನ ಕುದುರೆಗಳೂ ಒಂದೇ ಅಲ್ಲವೋ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಯೆಹೂದ್ಯರ ಅರಸನಾದ ಯೆಹೋಷಾಫಾಟನಿಗೆ ದೂತರ ಮುಖಾಂತರ, “ಮೋವಾಬ್ಯರ ಅರಸನು ನನಗೆ ವಿರುದ್ಧ ದಂಗೆ ಎದ್ದಿದ್ದಾನೆ; ಮೋವಾಬರೊಡನೆ ಯುದ್ಧಮಾಡುವುದಕ್ಕೆ ನೀನೂ ನನ್ನ ಜೊತೆಯಲ್ಲಿ ಬರುತ್ತೀಯೋ?” ಎಂದು ಹೇಳಿ ಕಳುಹಿಸಿದನು. ಅದಕ್ಕೆ ಯೆಹೋಷಾಫಾಟನು, “ಬರುತ್ತೇನೆ; ನಾನೂ ನೀನೂ, ನನ್ನ ಜನರೂ ನಿನ್ನ ಜನರೂ ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇ ಅಲ್ಲವೇ?” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಯೋರಾಮನು ಯೆಹೂದದ ರಾಜನಾದ ಯೆಹೋಷಾಫಾಟನ ಬಳಿಗೆ ಸಂದೇಶಕರನ್ನು ಕಳುಹಿಸಿ, “ನನ್ನ ಆಳ್ವಿಕೆಯಿಂದ ಮೋವಾಬಿನ ರಾಜನು ಬೇರ್ಪಟ್ಟಿದ್ದಾನೆ. ಮೋವಾಬಿನ ವಿರುದ್ಧ ಹೋರಾಡಲು ನನ್ನ ಜೊತೆ ಬರುವೆಯಾ?” ಎಂದು ಕೇಳಿದನು. ಯೆಹೋಷಾಫಾಟನು, “ಆಗಲಿ, ನಿನ್ನ ಜೊತೆ ನಾನೂ ಬರುತ್ತೇನೆ. ನಾನೂ ನೀನೂ ಒಂದೇ. ನನ್ನ ಜನರೂ ನಿನ್ನ ಜನರೂ ಒಂದೇ. ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಇದಲ್ಲದೆ ಅವನು ಹೋಗಿ, “ಮೋವಾಬಿನ ಅರಸನು ನನಗೆ ವಿರೋಧವಾಗಿ ತಿರುಗಿಬಿದ್ದನು. ನೀನು ನನ್ನ ಸಂಗಡ ಮೋವಾಬಿನ ಮೇಲೆ ಯುದ್ಧಮಾಡಲು ಬರುವೆಯೋ?” ಎಂದು ಯೆಹೂದದ ಅರಸನಾದ ಯೆಹೋಷಾಫಾಟನಿಗೆ ಹೇಳಿ ಕಳುಹಿಸಿದನು. ಅದಕ್ಕವನು, “ನಾನು ಬರುವೆನು, ನಾನು ನಿನ್ನವನೇ, ನನ್ನ ಜನರು ನಿನ್ನ ಜನರೇ, ಹಾಗೆಯೇ ನನ್ನ ಕುದುರೆಗಳು ನಿನ್ನ ಕುದುರೆಗಳೇ,” ಎಂದನು. ಅಧ್ಯಾಯವನ್ನು ನೋಡಿ |