2 ಅರಸುಗಳು 3:9 - ಕನ್ನಡ ಸತ್ಯವೇದವು J.V. (BSI)9 ಆಗ ಇಸ್ರಾಯೇಲ್ ಯೆಹೂದ ಎದೋಮ್ ರಾಜ್ಯಗಳ ಅರಸರು ಹೊರಟು ಸುತ್ತಾದ ದಾರಿಯಿಂದ ಏಳು ದಿವಸ ಪ್ರಯಾಣಮಾಡಿದರು. ಮಾರ್ಗದಲ್ಲಿ ಅವರ ಸೈನಿಕರಿಗೂ ಅವರು ತಂದ ಪಶುಗಳಿಗೂ ನೀರು ಸಿಕ್ಕದೆಹೋದದರಿಂದ ಇಸ್ರಾಯೇಲ್ಯರ ಅರಸನು - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆಗ ಇಸ್ರಾಯೇಲ್, ಯೆಹೂದ್ಯ, ಎದೋಮ್ ರಾಜ್ಯಗಳ ಅರಸರು ಹೊರಟು ಸುತ್ತು ಬಳಸು ದಾರಿಯಿಂದ ಏಳು ದಿನಗಳವರೆಗೆ ಪ್ರಯಾಣ ಮಾಡಿದರು. ಮಾರ್ಗದಲ್ಲಿ ಅವರ ಸೈನಿಕರಿಗೂ, ಅವರು ತಂದ ಪಶುಗಳಿಗೂ ನೀರು ಸಿಕ್ಕದೆ ಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆಗ ಇಸ್ರಯೇಲ್, ಜುದೇಯ ಹಾಗು ಎದೋಮ್ ರಾಜ್ಯಗಳ ಅರಸರು ಹೊರಟು ಸುತ್ತಾದ ದಾರಿಯಿಂದ ಏಳು ದಿವಸ ಪ್ರಯಾಣ ಮಾಡಿದರು. ಮಾರ್ಗದಲ್ಲಿ ಅವರ ಸೈನಿಕರಿಗೂ ಅವರು ತಂದಿದ್ದ ಪಶುಗಳಿಗೂ ನೀರು ಸಿಕ್ಕದೆಹೋಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆದ್ದರಿಂದ ಇಸ್ರೇಲಿನ ರಾಜನು ಯೆಹೂದದ ಮತ್ತು ಎದೋಮಿನ ರಾಜರೊಂದಿಗೆ ಹೋದನು. ಅವರು ಏಳು ದಿನಗಳ ಕಾಲ ಪ್ರಯಾಣ ಮಾಡಿದರು. ಅವರ ಸೇನೆಗೆ ಮತ್ತು ಪ್ರಾಣಿಗಳಿಗೆ ಸಾಕಾಗುವಷ್ಟು ನೀರು ಅಲ್ಲಿ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಹೀಗೆ ಇಸ್ರಾಯೇಲಿನ ಅರಸನು ಮತ್ತು ಯೆಹೂದದ ಅರಸನು, ಎದೋಮಿನ ಅರಸನೊಂದಿಗೆ ಹೊರಟು, ಸುತ್ತಾದ ಮಾರ್ಗದಲ್ಲಿ ಏಳು ದಿವಸ ನಡೆದರು. ಆದರೆ ಸೈನ್ಯಕ್ಕೂ, ಅವರು ತಂದಿದ್ದ ಪಶುಗಳಿಗೂ ನೀರು ಇಲ್ಲದೆ ಹೋಯಿತು. ಅಧ್ಯಾಯವನ್ನು ನೋಡಿ |
ಯೆಹೂದ್ಯರ ಅರಸನಾದ ಯೆಹೋಷಾಫಾಟನಿಗೆ ದೂತರ ಮುಖಾಂತರವಾಗಿ - ಮೋವಾಬ್ಯರ ಅರಸನು ನನಗೆ ವಿರೋಧವಾಗಿ ತಿರುಗಿಬಿದ್ದಿದ್ದಾನೆ; ಮೋವಾಬ್ಯರೊಡನೆ ಯುದ್ಧಮಾಡುವದಕ್ಕೆ ನೀನು ನನ್ನ ಜೊತೆಯಲ್ಲಿ ಬರುತ್ತೀಯೋ ಎಂದು ಹೇಳಿಕಳುಹಿಸಿದನು. ಅದಕ್ಕೆ ಯೆಹೋಷಾಫಾಟನು - ಬರುತ್ತೇನೆ; ನಾನೂ ನೀನೂ, ನನ್ನ ಜನರೂ ನಿನ್ನ ಜನರೂ, ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇಯಲ್ಲವೋ ಎಂದು ಉತ್ತರಕೊಟ್ಟು