Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 4:1 - ಕನ್ನಡ ಸತ್ಯವೇದವು J.V. (BSI)

1 ಒಂದು ದಿವಸ ಪ್ರವಾದಿಮಂಡಲಿಯವರಲ್ಲೊಬ್ಬನ ಹೆಂಡತಿಯು ಎಲೀಷನ ಹತ್ತಿರ ಬಂದು ಅವನಿಗೆ - ನಿನ್ನ ಸೇವಕನಾದ ನನ್ನ ಗಂಡನು ಮರಣಹೊಂದಿದನು; ಅವನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿದ್ದನೆಂಬದು ನಿನಗೆ ಗೊತ್ತುಂಟಲ್ಲಾ; ಸಾಲಕೊಟ್ಟವನು ನನ್ನ ಇಬ್ಬರು ಮಕ್ಕಳನ್ನು ದಾಸರನ್ನಾಗಿ ತೆಗೆದುಕೊಂಡು ಹೋಗುವದಕ್ಕೆ ಬಂದಿದ್ದಾನೆ ಎಂದು ಮೊರೆಯಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಒಂದು ದಿನ ಪ್ರವಾದಿ ಮಂಡಳಿಯಲ್ಲಿನ ಒಬ್ಬನ ಹೆಂಡತಿಯು ಎಲೀಷನ ಹತ್ತಿರ ಬಂದು ಅವನಿಗೆ, “ನಿನ್ನ ಸೇವಕನಾದ ನನ್ನ ಗಂಡನು ಮರಣಹೊಂದಿದನು. ಅವನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿದ್ದನು ಎಂಬುದು ನಿನಗೆ ಗೊತ್ತಿದೆಯಲ್ಲಾ. ಸಾಲಕೊಟ್ಟವನು, ನನ್ನ ಇಬ್ಬರು ಮಕ್ಕಳನ್ನು ದಾಸರನ್ನಾಗಿ ಕರೆದುಕೊಂಡು ಹೋಗುವುದಕ್ಕೆ ಬಂದಿದ್ದಾನೆ” ಎಂದು ಮೊರೆಯಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಒಂದು ದಿನ ಪ್ರವಾದಿಮಂಡಲಿಯವರಲ್ಲಿ ಒಬ್ಬನ ಹೆಂಡತಿ ಎಲೀಷನನ್ನು ಭೇಟಿಯಾದಳು. ಅವನಿಗೆ, “ನಿಮ್ಮ ಸೇವಕನಾದ ನನ್ನ ಗಂಡ ಮರಣಹೊಂದಿದನು. ಅವನು ಸರ್ವೇಶ್ವರನಲ್ಲಿ ಭಯಭಕ್ತಿ ಉಳ್ಳವನಾಗಿದ್ದನೆಂಬುದು ನಿಮಗೆ ತಿಳಿದ ವಿಷಯ. ಸಾಲಕೊಟ್ಟವನು ನನ್ನ ಇಬ್ಬರು ಮಕ್ಕಳನ್ನು ಗುಲಾಮರನ್ನಾಗಿ ತೆಗೆದುಕೊಂಡು ಹೋಗುವುದಕ್ಕೆ ಬಂದಿದ್ದಾನೆ,” ಎಂದು ಮೊರೆಯಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಒಂದು ದಿನ ಪ್ರವಾದಿಮಂಡಲಿಯವರಲ್ಲೊಬ್ಬನ ಪತ್ನಿಯು ಗೋಳಾಡುತ್ತಾ ಎಲೀಷನಲ್ಲಿಗೆ ಹೋಗಿ, “ನನ್ನ ಗಂಡನು ನಿನಗೆ ಸೇವಕನಂತಿದ್ದನು. ಈಗ ನನ್ನ ಗಂಡ ಸತ್ತಿದ್ದಾನೆ! ಅವನು ಯೆಹೋವನಲ್ಲಿ ಭಯಭಕ್ತಿ ಉಳ್ಳವನಾಗಿದ್ದದು ನಿನಗೆ ತಿಳಿದಿದೆ. ಆದರೆ ಅವನು ಒಬ್ಬ ಮನುಷ್ಯನಿಗೆ ಹಣವನ್ನು ಕೊಡಬೇಕಾಗಿದೆ. ಈಗ ಆ ಮನುಷ್ಯನು ನನ್ನ ಎರಡು ಗಂಡುಮಕ್ಕಳನ್ನು ತೆಗೆದುಕೊಂಡು ತನ್ನ ಗುಲಾಮರನ್ನಾಗಿ ಮಾಡಿಕೊಳ್ಳಲು ಬರುತ್ತಿದ್ದಾನೆ!” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಪ್ರವಾದಿಗಳ ಗುಂಪಿನಲ್ಲಿದ್ದ ಒಬ್ಬ ಪ್ರವಾದಿಯ ಹೆಂಡತಿ ಎಲೀಷನಿಗೆ ಕೂಗಿ, “ನಿನ್ನ ದಾಸನಾದ ನನ್ನ ಗಂಡನು ಮರಣಹೊಂದಿದನು. ನಿನ್ನ ದಾಸನು ಯೆಹೋವ ದೇವರಿಗೆ ಭಯಪಡುವವನಾಗಿದ್ದನೆಂದು ನೀನು ಬಲ್ಲೆ. ಈಗ ಸಾಲಗಾರನು ನನ್ನ ಇಬ್ಬರು ಮಕ್ಕಳನ್ನು ತನಗೆ ದಾಸರಾಗಿ ತೆಗೆದುಕೊಳ್ಳಲು ಬಂದಿದ್ದಾನೆ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 4:1
35 ತಿಳಿವುಗಳ ಹೋಲಿಕೆ  

ಆ ಸಾಲಾ ತೀರಿಸುವದಕ್ಕೆ ಅವನಲ್ಲಿ ಏನೂ ಇಲ್ಲದ್ದರಿಂದ ಅವನ ಒಡೆಯನು ಅವನನ್ನೂ ಅವನ ಹೆಂಡತಿಮಕ್ಕಳನ್ನೂ ಅವನ ಬದುಕೆಲ್ಲವನ್ನೂ ಮಾರಿ ಅದನ್ನು ತೀರಿಸಬೇಕೆಂದು ಅಪ್ಪಣೆ ಮಾಡಿದನು.


ತರುವಾಯ ಅವರಿಬ್ಬರೂ ಬೇತೇಲಿಗೆ ಹೋದರು. ಬೇತೇಲಿನ ಪ್ರವಾದಿಮಂಡಲಿಯವರು ಎಲೀಷನನ್ನು ಎದುರುಗೊಂಡು ಅವನನ್ನು - ಯೆಹೋವನು ಈಹೊತ್ತು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ಮೇಲಕ್ಕೆ ತೆಗೆದುಕೊಳ್ಳುವನೆಂಬದು ನಿನಗೆ ಗೊತ್ತುಂಟೋ ಎಂದು ಕೇಳಿದರು. ಅದಕ್ಕೆ ಅವನು -


ಆಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಶಬ್ದವು - ದೇವರ ದಾಸರೆಲ್ಲರೇ, ದೇವರಿಗೆ ಭಯಪಡುವ ಹಿರಿಕಿರಿಯರೇ, ನಮ್ಮ ದೇವರನ್ನು ಕೊಂಡಾಡಿರಿ ಎಂದು ಹೇಳಿತು.


ಆದರೆ ಅವನು ಒಪ್ಪದೆ ಹೊರಟು ಹೋಗಿ ಆ ಸಾಲಾ ತೀರಿಸುವ ತನಕ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು.


ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ [ದೇವರ] ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ;


ಇಂಥ ಮಾತುಗಳನ್ನು ಕೇಳಿ ಯೆಹೋವನ ಭಕ್ತರು ಒಬ್ಬರಿಗೊಬ್ಬರು ಮಾತಾಡಿಕೊಳ್ಳಲು ಯೆಹೋವನು ಕಿವಿಗೊಟ್ಟು ಆಲಿಸಿ ಭಯಭಕ್ತಿಯಿಂದ ತನ್ನ ನಾಮಸ್ಮರಣೆ ಮಾಡುವವರ ಹೆಸರುಗಳನ್ನು ತನ್ನ ಮುಂದೆ ಜ್ಞಾಪಕದ ಪುಸ್ತಕದಲ್ಲಿ ಬರೆಯಿಸಿದನು.


ಯೆಹೋವನು ಆನಂದಿಸುವದು ತನ್ನ ಕೃಪೆಯನ್ನು ನಿರೀಕ್ಷಿಸುವ ಭಕ್ತರಲ್ಲೇ.


ಆದರೆ ಯೆಹೋವನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ದಯವು ಯುಗಯುಗಾಂತರಗಳವರೆಗೂ ಇರುತ್ತದೆ.


ಭೂವಿುಯ ಮೇಲೆ ಆಕಾಶವು ಎಷ್ಟು ಉನ್ನತವೋ ಆತನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ಕೃಪೆಯು ಅಷ್ಟು ಅಪಾರವಾಗಿದೆ.


ಇದಲ್ಲದೆ ಕುಗ್ಗಿದವರೂ ಸಾಲಗಾರರೂ ಮನನೊಂದವರೂ ಆಗಿರುವ ಸರ್ವಜನರೂ ಬಂದು ಅವನನ್ನು ಆಶ್ರಯಿಸಿಕೊಳ್ಳಲು ಅವನು ಸುಮಾರು ನಾನೂರು ಜನರಿಗೆ ನಾಯಕನಾದನು.


ಕರ್ತನೇ, ನಿನ್ನ ನಾಮಕ್ಕೆ ಭಯಪಡದವರೂ ಅದನ್ನು ಘನವಾದದ್ದೆಂದು ಒಪ್ಪಿಕೊಳ್ಳದವರೂ ಯಾರಾದರೂ ಇದ್ದಾರೇ? ನೀನೊಬ್ಬನೇ ಪರಿಶುದ್ಧನು; ನಿನ್ನ ನೀತಿಯುಳ್ಳ ಕೃತ್ಯಗಳು ಪ್ರಕಾಶಕ್ಕೆ ಬಂದದರಿಂದ ಎಲ್ಲಾ ಜನಾಂಗಗಳು ಬಂದು ನಿನ್ನ ಸನ್ನಿಧಾನದಲ್ಲಿ ನಮಸ್ಕಾರ ಮಾಡುವರು ಎಂದು ಹೇಳಿದರು.


ಕರುಣೆತೋರಿಸದೆ ಇರುವವನಿಗೆ ನ್ಯಾಯತೀರ್ಮಾನದಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಮಾನವನ್ನು ಗೆದ್ದು ಹಿಗ್ಗುತ್ತದೆ.


ಸಹೋದರರೇ, ಅಬ್ರಹಾಮನ ವಂಶಸ್ಥರೇ, ಮತ್ತು ನಿಮ್ಮಲ್ಲಿರುವ ಯೆಹೂದ್ಯ ಮತಾವಲಂಭಿಗಳೇ, ನಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಿ ಅದೆ.


ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಸಹೋದರನಿಗೆ ಮನಃಪೂರ್ವಕವಾಗಿ ಕ್ಷವಿುಸದೆಹೋದರೆ ಪರಲೋಕದಲ್ಲಿರುವ ನನ್ನ ತಂದೆಯೂ ನಿಮಗೆ ಹಾಗೆಯೇ ಮಾಡುವನು ಅಂದನು.


ತನ್ನನ್ನು ನಿಮಗೆ ಮಾರಿಕೊಂಡು ಆರು ವರುಷ ನಿಮ್ಮ ದಾಸನಾಗಿದ್ದ ಇಬ್ರಿಯನಾದ ಪ್ರತಿಯೊಬ್ಬ ಸಹೋದರನನ್ನು ಏಳನೆಯ ವರುಷದಲ್ಲಿ ಸ್ವತಂತ್ರನನ್ನಾಗಿ ಬಿಟ್ಟುಬಿಡಿರಿ ಎಂದು ವಿಧಿಸಿ ಅವರೊಂದಿಗೆ ಒಡಂಬಡಿಕೆ ಮಾಡಿಕೊಂಡೆನಷ್ಟೆ; ಆದರೆ ನಿಮ್ಮ ಪಿತೃಗಳು ನನ್ನ ಮಾತಿಗೆ ಕಿವಿಗೊಡಲಿಲ್ಲ, ಕೇಳಲಿಲ್ಲ.


ವಿಷಯವು ತೀರಿತು; ಎಲ್ಲವೂ ಕೇಳಿ ಮುಗಿಯಿತು; ದೇವರಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಳ್ಳು; ಮನುಷ್ಯರೆಲ್ಲರ [ಕರ್ತವ್ಯವು] ಇದೇ.


ಪಾಪಿಯು ನೂರು ಸಲ ಅಧರ್ಮಮಾಡಿ ಬಹುಕಾಲ ಬದುಕಿದರೂ ದೇವರ ಮುಂದೆ ಹೆದರಿ ಆತನಲ್ಲಿ ಭಯಭಕ್ತಿಯುಳ್ಳವರಿಗೆ ಮೇಲೇ ಆಗುವದೆಂದು ಬಲ್ಲೆನು.


ದೇಶನಿವಾಸಿಗಳು ಮಾರುವದಕ್ಕೋಸ್ಕರ ತರುವ ಯಾವ ಸರಕುಗಳನ್ನೂ ಧಾನ್ಯವನ್ನೂ ಸಬ್ಬತ್ ಮೊದಲಾದ ಪರಿಶುದ್ಧ ದಿನಗಳಲ್ಲಿ ಕೊಂಡುಕೊಳ್ಳುವದಿಲ್ಲ; ಪ್ರತಿಯೊಂದು ಏಳನೆಯ ವರುಷ [ಭೂವಿುಯ ಸಾಗುವಳಿಯನ್ನೂ ] ಹೆರರು ಕೊಡಬೇಕಾದ ಸಾಲವನ್ನೂ ಬಿಟ್ಟು ಬಿಡುತ್ತೇವೆ;


ಆಮೇಲೆ ನನ್ನ ತಮ್ಮನಾದ ಹನಾನಿಗೂ ಬಲು ನಂಬಿಗಸ್ತನೂ ದೇವರಲ್ಲಿ ವಿಶೇಷ ಭಯಭಕ್ತಿಯುಳ್ಳವನೂ ದುರ್ಗಾಧಿಕಾರಿಯೂ ಆದ ಹನನ್ಯನಿಗೂ ಯೆರೂಸಲೇವಿುನ ಮೇಲ್ವಿಚಾರಣೆಯನ್ನು ಒಪ್ಪಿಸಿ


ಎಲೀಷನು ತಿರಿಗಿ ಗಿಲ್ಗಾಲಿಗೆ ಹೋದನು. ಆಗ ದೇಶದಲ್ಲಿ ಬರವಿದ್ದಿತು. ಪ್ರವಾದಿ ಮಂಡಲಿಯವರು ತನ್ನ ಮುಂದೆ ಕೂಡಿ ಬರಲು ಅವನು ತನ್ನ ಸೇವಕನಿಗೆ - ದೊಡ್ಡ ಹಂಡೆಯನ್ನು ತೆಗೆದುಕೊಂಡು ಇವರಿಗೋಸ್ಕರ ಅಡಿಗೆಮಾಡು ಎಂದು ಆಜ್ಞಾಪಿಸಿದನು.


ಅಲ್ಲಿನ ಪ್ರವಾದಿಮಂಡಲಿಯವರು ಅವನನ್ನು ಎದುರುಗೊಂಡು - ಯೆಹೋವನು ಈಹೊತ್ತು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ಮೇಲಕ್ಕೆ ಕರೆದುಕೊಳ್ಳುವನೆಂದು ನಿನಗೆ ಗೊತ್ತುಂಟೋ ಎಂದು ಕೇಳಿದರು. ಅದಕ್ಕೆ ಅವನು - ಗೊತ್ತುಂಟು, ಸುಮ್ಮನಿರ್ರಿ ಎಂದು ಉತ್ತರಕೊಟ್ಟನು.


ಪ್ರವಾದಿಮಂಡಲಿಯವರಲ್ಲಿ ಒಬ್ಬನು ಯೆಹೋವ ಪ್ರೇರಿತನಾಗಿ ತನ್ನ ಜೊತೆಗಾರನಿಗೆ - ನನ್ನನ್ನು ಹೊಡಿ ಎಂದು ಹೇಳಿದನು. ಅದಕ್ಕೆ ಅವನು ಒಪ್ಪಲಿಲ್ಲ.


ಅಹಾಬನು ತನ್ನ ಉಗ್ರಾಣಿಕನಾದ ಓಬದ್ಯ ಎಂಬವನನ್ನು ಕರೇಕಳುಹಿಸಿದನು.


ಅವನ ಬಂಧುಗಳಲ್ಲಿ ಯಾರಾದರೂ ಈಡುಕೊಟ್ಟು ಅವನನ್ನು ಬಿಡಿಸಬಹುದು.


ಆ ದೂತನು ಅವನಿಗೆ - ನಿನ್ನ ಹುಡುಗನ ಮೇಲೆ ಕೈಹಾಕಬೇಡ, ಅವನಿಗೆ ಏನೂ ಮಾಡಬೇಡ. ನೀನು ನಿನ್ನ ಒಬ್ಬನೇ ಮಗನನ್ನಾದರೂ ನನಗೆ ಸಮರ್ಪಿಸುವದಕ್ಕೆ ಹಿಂದೆಗೆಯಲಿಲ್ಲವಾದ್ದರಿಂದ ನೀನು ದೇವರಲ್ಲಿ ಭಯಭಕ್ತಿಯುಳ್ಳವನೆಂಬದು ಈಗ ತೋರಬಂತು ಎಂದು ಹೇಳಿದನು.


ಇಸ್ರಾಯೇಲನ ಮನೆತನದವರನ್ನು ಆಶೀರ್ವದಿಸುವನು; ಆರೋನನ ಮನೆತನದವರನ್ನು ಆಶೀರ್ವದಿಸುವನು. ತನ್ನ ಭಕ್ತರನ್ನು ಆಶೀರ್ವದಿಸುವನು.


ದೇವರ ಮನುಷ್ಯನು ಇಸ್ರಾಯೇಲ್ಯರ ಅರಸನಿಗೆ - ಜಾಗರೂಕತೆಯಿಂದಿರ್ರಿ; ನೀವು ಇಂಥಿಂಥ ಸ್ಥಳದಲ್ಲಿ ಹಾಯಬಾರದು, ಅಲ್ಲಿ ಅರಾಮ್ಯರು ಅಡಗಿಕೊಂಡಿದ್ದಾರೆ ಎಂದು ತಿಳಿಸುತ್ತಿದ್ದನು.


ಯೆಹೋವನು ಹೀಗನ್ನುತ್ತಾನೆ - ನಾನು ನಿಮ್ಮ ತಾಯಿಯನ್ನು ತ್ಯಜಿಸಿದ ತ್ಯಾಗಪತ್ರವು ಎಲ್ಲಿ? ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟಿದ್ದೇನೆ ನೋಡಿರಿ, ನಿಮ್ಮ ದೋಷಗಳ ನಿವಿುತ್ತ ನಿಮ್ಮನ್ನು ಮಾರಿದೆನು, ನಿಮ್ಮ ದ್ರೋಹಗಳಿಗಾಗಿ ನಿಮ್ಮ ತಾಯಿಯನ್ನು ಬಿಟ್ಟೆನು.


ನೊವೊವಿುಯ ಗಂಡನಾದ ಎಲೀಮೆಲೆಕನು ಸತ್ತನು. ಆಕೆಯು ಇಬ್ಬರು ಮಕ್ಕಳೊಡನೆ ಉಳಿದಳು.


ಪ್ರವಾದಿ ಮಂಡಲಿಯವರಲ್ಲಿ ಐವತ್ತು ಜನರು ಇವರ ಹಿಂದಿನಿಂದಲೇ ಬಂದು ಸ್ವಲ್ಪ ದೂರದಲ್ಲಿ ನಿಂತುಕೊಂಡರು.


ದೂರದಲ್ಲಿ ನಿಂತಿದ್ದ ಯೆರಿಕೋವಿನ ಪ್ರವಾದಿ ಮಂಡಲಿಯವರು ಇದನ್ನು ಕಂಡು ಎಲೀಯನಿಗಿದ್ದ ಆತ್ಮವು ಎಲೀಷನ ಮೇಲೆ ಬಂದಿತೆಂದು ತಿಳಿದುಕೊಂಡು ಅವನನ್ನು ಎದುರುಗೊಂಡು ಅವನಿಗೆ ಸಾಷ್ಟಾಂಗ ನಮಸ್ಕಾರಮಾಡಿದರು.


ಬಲ್ಲಿದನು ಬಡವನಿಗೆ ಒಡೆಯ; ಸಾಲಗಾರನು ಸಾಲಕೊಟ್ಟವನಿಗೆ ಸೇವಕ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು