2 ಎಲೀಷನು ಆಕೆಗೆ - ನಾನು ನಿನಗೇನು ಮಾಡಬೇಕನ್ನುತ್ತೀ? ನಿನ್ನ ಮನೆಯಲ್ಲಿ ಏನಿರುತ್ತದೆ, ಹೇಳು ಅಂದನು. ಅದಕ್ಕೆ ಆಕೆಯು - ನಿನ್ನ ದಾಸಿಯ ಮನೆಯಲ್ಲಿ ಒಂದು ಮೊಗೆ ಎಣ್ಣೆ ಹೊರತಾಗಿ ಏನೂ ಇಲ್ಲ ಎಂದು ಉತ್ತರಕೊಟ್ಟಳು.
2 ಎಲೀಷನು ಆಕೆಗೆ, “ನಾನು ನಿನಗೇನು ಮಾಡಬೇಕೆನ್ನುತ್ತೀ? ನಿನ್ನ ಮನೆಯಲ್ಲಿ ಏನಿರುತ್ತದೆ? ಹೇಳು ಎಂದನು.” ಅದಕ್ಕೆ ಆಕೆಯು, “ನಿನ್ನ ದಾಸಿಯ ಮನೆಯಲ್ಲಿ ಒಂದು ಮೊಗೆ ಎಣ್ಣೆ ಹೊರತಾಗಿ ಏನೂ ಇಲ್ಲ” ಎಂದು ಉತ್ತರ ಕೊಟ್ಟಳು.
2 ಎಲೀಷನು, “ನಾನು ನಿನಗೇನು ಮಾಡಬೇಕೆನ್ನುತ್ತೀ? ನಿನ್ನ ಮನೆಯಲ್ಲಿ ಏನಿದೆ, ಹೇಳು,” ಎಂದನು. ಅದಕ್ಕೆ ಆಕೆ, “ನಿಮ್ಮ ದಾಸಿಯ ಮನೆಯಲ್ಲಿ ಒಂದು ಮೊಗೆ ಎಣ್ಣೆ ಹೊರತಾಗಿ ಏನೂ ಇಲ್ಲ,” ಎಂದು ಉತ್ತರಕೊಟ್ಟಳು.
2 ಎಲೀಷನು, “ನಾನು ನಿನಗೆ ಹೇಗೆ ಸಹಾಯ ಮಾಡಲಿ? ನಿನ್ನ ಮನೆಯಲ್ಲಿ ಏನಿದೆ? ನನಗೆ ಅದನ್ನು ತಿಳಿಸು” ಎಂದು ಕೇಳಿದನು. ಆ ಸ್ತ್ರೀಯು, “ನನ್ನ ಮನೆಯಲ್ಲಿ ನನ್ನ ಹತ್ತಿರ ಏನೂ ಇಲ್ಲ. ನನ್ನ ಹತ್ತಿರ ಒಂದು ಪಾತ್ರೆ ಆಲೀವ್ ಎಣ್ಣೆ ಮಾತ್ರ ಇದೆ” ಎಂದು ಹೇಳಿದಳು.
2 ಎಲೀಷನು ಅವಳಿಗೆ, “ನಾನು ನಿನಗೆ ಏನು ಮಾಡಬೇಕು? ಮನೆಯಲ್ಲಿ ನಿನಗೆ ಏನು ಉಂಟು? ನನಗೆ ತಿಳಿಸು,” ಎಂದನು. ಅವಳು, “ನಿನ್ನ ಸೇವಕಿಗೆ ಒಂದು ಪಾತ್ರೆಯಲ್ಲಿ ಸ್ವಲ್ಪವೇ ಎಣ್ಣೆ ಅಲ್ಲದೆ ಮನೆಯಲ್ಲಿ ಮತ್ತೊಂದಿಲ್ಲ,” ಎಂದಳು.
ಆಕೆಯು ಅವನಿಗೆ - ನಿನ್ನ ದೇವರಾದ ಯೆಹೋವನಾಣೆ, ನನ್ನ ಹತ್ತಿರ ರೊಟ್ಟಿಯಿರುವದಿಲ್ಲ. ಮಡಕೆಯಲ್ಲಿ ಒಂದು ಹಿಡಿ ಹಿಟ್ಟು, ಮೊಗೆಯಲ್ಲಿ ಸ್ವಲ್ಪ ಎಣ್ಣೆ ಇವುಗಳ ಹೊರತಾಗಿ ಬೇರೇನೂ ಇರುವದಿಲ್ಲ. ಈಗ ಎರಡು ಕಟ್ಟಿಗೆಗಳನ್ನು ಹೆಕ್ಕಿ ನನಗೋಸ್ಕರವೂ ನನ್ನ ಮಗನಿಗೋಸ್ಕರವೂ ರೊಟ್ಟಿ ಮಾಡುತ್ತೇನೆ. ಅದನ್ನು ತಿಂದ ಮೇಲೆ ನಾವು ಸಾಯಬೇಕೇ ಹೊರತು ಬೇರೆ ಗತಿಯಿಲ್ಲ ಎಂದು ಉತ್ತರಕೊಟ್ಟಳು.
ನನ್ನ ಪ್ರಿಯ ಸಹೋದರರೇ, ಕೇಳಿರಿ, ದೇವರು ಲೌಕಿಕ ವಿಷಯದಲ್ಲಿ ಬಡವರಾಗಿರುವವರನ್ನು ಆದುಕೊಂಡು ಅವರು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ನೇವಿುಸಲಿಲ್ಲವೋ?
ಅವರು ಆಚೇದಡಕ್ಕೆ ಸೇರಿದ ಮೇಲೆ ಎಲೀಯನು ಎಲೀಷನನ್ನು - ನಿನ್ನನ್ನು ಬಿಟ್ಟುಹೋಗುವ ಮೊದಲು ನಾನು ನಿನಗೋಸ್ಕರ ಏನು ಮಾಡಬೇಕನ್ನುತ್ತೀ ಹೇಳು ಎಂದು ಕೇಳಿದನು. ಅದಕ್ಕೆ ಎಲೀಷನು - ನಿನಗಿರುವ ಆತ್ಮದಲ್ಲಿ ನನಗೆ ಎರಡು ಪಾಲನ್ನು ಅನುಗ್ರಹಿಸು ಎಂದು ಬೇಡಿಕೊಂಡನು.