Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 4:31 - ಕನ್ನಡ ಸತ್ಯವೇದವು J.V. (BSI)

31 ಅವರ ಮುಂದಾಗಿ ಹೋದ ಗೇಹಜಿಯು ಕೋಲನ್ನು ಹುಡುಗನ ಮುಖದ ಮೇಲಿಟ್ಟರೂ ಶಬ್ದವಿಲ್ಲ, ಜೀವದ ಲಕ್ಷಣವಿಲ್ಲ. ಆದದರಿಂದ ಅವನು ಹಿಂದಿರುಗಿ ಹೋಗಿ ಎಲೀಷನನ್ನು ಎದುರುಗೊಂಡು ಅವನಿಗೆ - ಹುಡುಗನು ಎಚ್ಚರವಾಗಲಿಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅವರ ಮುಂದಾಗಿ ಹೋದ ಗೇಹಜಿಯು ಕೋಲನ್ನು ಹುಡುಗನ ಮುಖದ ಮೇಲಿಟ್ಟರೂ ಹುಡುಗನು ಮಾತನಾಡಲಿಲ್ಲ, ಎಚ್ಚರಗೊಳ್ಳಲೂ ಇಲ್ಲ. ಆದುದರಿಂದ ಅವನು ಹಿಂದಿರುಗಿ ಹೋಗಿ ಎಲೀಷನನ್ನು ಎದುರುಗೊಂಡು ಅವನಿಗೆ, “ಹುಡುಗನು ಎಚ್ಚರವಾಗಲಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಅವರ ಮುಂದಾಗಿ ಹೋದ ಗೇಹಜಿಯು ಕೋಲನ್ನು ಹುಡುಗನ ಮುಖದ ಮೇಲಿಟ್ಟರೂ ಶಬ್ದವಿರಲಿಲ್ಲ, ಜೀವದ ಲಕ್ಷಣವಿರಲಿಲ್ಲ. ಆದುದರಿಂದ ಅವನು ಹಿಂದಿರುಗಿ ಬಂದು ಎಲೀಷನನ್ನು ಎದುರುಗೊಂಡು, “ಹುಡುಗನು ಎಚ್ಚರವಾಗಲಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಶೂನೇಮಿನ ಆ ಸ್ತ್ರೀಯ ಮನೆಗೆ, ಎಲೀಷನು ಮತ್ತು ಶೂನೇಮಿನ ಸ್ತ್ರೀಯು ಬರುವುದಕ್ಕೆ ಮುಂಚೆಯೇ ಗೇಹಜಿಯು ಬಂದನು. ಗೇಹಜಿಯು ಮಗುವಿನ ಮುಖದ ಮೇಲೆ ಆ ಕೋಲನ್ನಿಟ್ಟನು. ಆದರೆ ಆ ಮಗು ಮಾತನಾಡಲಿಲ್ಲ; ಅಲುಗಾಡಲಿಲ್ಲ. ಆಗ ಗೇಹಜಿಯು ಎಲೀಷನನ್ನು ಸಂಧಿಸಲು ಹಿಂದಿರುಗಿ ಬಂದು ಎಲೀಷನಿಗೆ, “ಮಗು ಎಚ್ಚರಗೊಳ್ಳಲಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಗೇಹಜಿಯು ಅವರಿಗೆ ಮುಂದಾಗಿ ಹೋಗಿ, ಆ ಕೋಲನ್ನು ಆ ಹುಡುಗನ ಮುಖದ ಮೇಲೆ ಇಟ್ಟನು. ಆದರೆ ಶಬ್ದವಾದರೂ, ಆಲೈಸುವುದಾದರೂ ಇರಲಿಲ್ಲ. ಆದ್ದರಿಂದ ಗೇಹಜಿಯು ಎಲೀಷನನ್ನು ಎದುರುಗೊಳ್ಳಲು ತಿರುಗಿ ಹೋಗಿ ಅವನಿಗೆ, “ಹುಡುಗನು ಎಚ್ಚರವಾಗಲಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 4:31
17 ತಿಳಿವುಗಳ ಹೋಲಿಕೆ  

ಈ ಮಾತುಗಳನ್ನು ಹೇಳಿದ ಮೇಲೆ ಅವರಿಗೆ - ನಮ್ಮ ವಿುತ್ರನಾದ ಲಾಜರನು ನಿದ್ರೆಮಾಡುತ್ತಾನೆ; ನಾನು ಅವನನ್ನು ನಿದ್ರೆಯಿಂದ ಎಬ್ಬಿಸುವದಕ್ಕಾಗಿ ಹೋಗುತ್ತೇನೆ ಎಂದು ಹೇಳಿದನು.


ಆದದರಿಂದ - ನಿದ್ರೆ ಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಏಳು! ಕ್ರಿಸ್ತನು ನಿನಗೆ ಪ್ರಕಾಶ ಕೊಡುವನು ಎಂದು ಹೇಳಿಯದೆ.


ಆತನು ಒಳಕ್ಕೆ ಹೋಗಿ - ನೀವು ಗದ್ದಲ ಮಾಡುವದೂ ಅಳುವದೂ ಯಾಕೆ? ಹುಡುಗಿ ಸತ್ತಿಲ್ಲ;


ಧೂಳಿನ ನೆಲದೊಳಗೆ ದೀರ್ಘನಿದ್ರೆಮಾಡುವವರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನು, ಕೆಲವರು ನಿಂದನ ನಿತ್ಯತಿರಸ್ಕಾರಗಳನ್ನು ಅನುಭವಿಸುವರು.


ನರಪುತ್ರನೇ, ಇವರು ತಮ್ಮ ಬೊಂಬೆಗಳನ್ನು ಮನಸ್ಸಿನಲ್ಲಿ ನೆಲೆಗೊಳಿಸಿ ತಮಗೆ ಪಾಪಕಾರಿಯಾದ ವಿಘ್ನವನ್ನು ತಮ್ಮ ಮುಂದೆ ಇಟ್ಟುಕೊಂಡಿದ್ದಾರೆ; ಇಂಥವರಿಗೆ ನಾನು ದೈವೋತ್ತರವನ್ನು ದಯಪಾಲಿಸುವದು ಯುಕ್ತವೋ? ಎಂದಿಗೂ ಅಲ್ಲ.


ಮನುಷ್ಯರು ಮಲಗಿಕೊಂಡು ಏಳದೇ ಇರುವರು; ಆಕಾಶವು ಅಳಿದುಹೋಗುವ ತನಕ ಅವರು ನಿದ್ರೆತಿಳಿಯುವದಿಲ್ಲ, ಎಬ್ಬಿಸಲ್ಪಡುವದಿಲ್ಲ.


ಮಧ್ಯಾಹ್ನದಿಂದ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಪರವಶರಾಗಿ ಕೂಗುತ್ತಾ ಇದ್ದರು. ಆದರೂ ಆಕಾಶವಾಣಿಯಾಗಲಿಲ್ಲ; ಯಾವನೂ ಅವರಿಗೆ ಉತ್ತರಕೊಡಲಿಲ್ಲ, ಅವರನ್ನು ಲಕ್ಷಿಸಲಿಲ್ಲ.


ಅವರು ತರಲ್ಪಟ್ಟ ಹೋರಿಗಳಲ್ಲೊಂದನ್ನು ತೆಗೆದುಕೊಂಡು ಸಿದ್ಧಪಡಿಸಿ ತಮ್ಮ ದೇವರಾದ ಬಾಳನ ಹೆಸರು ಹೇಳಿ - ಬಾಳನೇ, ನಮಗೆ ಕಿವಿಗೊಡು ಎಂದು ಹೊತ್ತಾರೆಯಿಂದ ಮಧ್ಯಾಹ್ನದವರೆಗೆ ಕೂಗಿದರೂ ಆಕಾಶವಾಣಿಯಾಗಲಿಲ್ಲ; ಅವರು ವೇದಿಯ ಸುತ್ತಲು ಕುಣಿದಾಡಿದರೂ ಯಾರೂ ಉತ್ತರ ದಯಪಾಲಿಸಲಿಲ್ಲ.


ಅವನು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಿದರೂ ಆತನು ಅವನಿಗೆ ಕನಸುಗಳಿಂದಾಗಲಿ ಊರೀವಿುನಿಂದಾಗಲಿ ಪ್ರವಾದಿಗಳಿಂದಾಗಲಿ ಉತ್ತರಕೊಡಲೇ ಇಲ್ಲ.


ದೇವಾ, ನಾವು ಫಿಲಿಷ್ಟಿಯರನ್ನು ಬೆನ್ನಟ್ಟಬಹುದೋ? ನೀನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿಕೊಡುವಿಯೋ ಎಂದು ಕೇಳಿಕೊಂಡರೂ ಆತನು ಅವನಿಗೆ ಆ ದಿವಸ ಉತ್ತರ ಕೊಡಲೇ ಇಲ್ಲ.


ಎಲೀಷನು ಆ ಮನೆಯನ್ನು ಮುಟ್ಟಿದಾಗ ಸತ್ತ ಹುಡುಗನು ತನ್ನ ಮಂಚದ ಮೇಲೆ ಇಡಲ್ಪಟ್ಟಿರುವದನ್ನು ಕಂಡು


ನಾಮಾನನು ಸ್ವಲ್ಪದೂರಕ್ಕೆ ಹೋದನಂತರ ದೇವರ ಮನುಷ್ಯನಾದ ಎಲೀಷನ ಸೇವಕ ಗೇಹಜಿಯು ಮನಸ್ಸಿನಲ್ಲಿ - ನನ್ನ ಯಜಮಾನನು ಆ ಅರಾಮ್ಯನಾದ ನಾಮಾನನಿಂದ ಏನೂ ತೆಗೆದುಕೊಳ್ಳದೆ ಅವನನ್ನು ಹಾಗೆಯೇ ಕಳುಹಿಸಿಬಿಟ್ಟನಲ್ಲಾ; ಯೆಹೋವನಾಣೆ, ನಾನು ಅವನ ಹಿಂದೆ ಓಡುತ್ತಾ ಹೋಗಿ ಅವನಿಂದ ಸ್ವಲ್ಪವನ್ನಾದರೂ ಬಾಚಿಕೊಂಡು ಬರುವೆನು ಅಂದುಕೊಂಡು ಹೊರಟನು.


ಎಲೀಷನು ತಾನು ಬದುಕಿಸಿದ ಹುಡುಗನ ತಾಯಿಗೆ - ಯೆಹೋವನು ಈ ದೇಶಕ್ಕೆ ಏಳು ವರುಷಗಳ ಬರವನ್ನು ಕಳುಹಿಸುವದಕ್ಕಿರುತ್ತಾನೆ. ಆದದರಿಂದ ನೀನು ನಿನ್ನ ಮನೆಯವರೊಡನೆ ಯಾವದಾದರೊಂದು ಪರದೇಶಕ್ಕೆ ಹೋಗಿ ಅಲ್ಲಿ ವಾಸಿಸು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು