Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 4:6 - ಕನ್ನಡ ಸತ್ಯವೇದವು J.V. (BSI)

6 ಪಾತ್ರೆಗಳು ತುಂಬಿದಾಗ ಆಕೆಯು ಮಗನಿಗೆ - ಇನ್ನೊಂದು ಪಾತ್ರೆಯನ್ನು ತಂದಿಡು ಅನ್ನಲು ಅವನು - ಪಾತ್ರೆಗಳು ತೀರಿದವೆಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಪಾತ್ರೆಗಳೆಲ್ಲಾ ತುಂಬಿದಾಗ ಆಕೆಯು ಮಗನಿಗೆ, “ಇನ್ನೊಂದು ಪಾತ್ರೆಯನ್ನು ತಂದಿಡು” ಎನ್ನಲು ಅವನು, “ಪಾತ್ರೆಗಳೆಲ್ಲ ಮುಗಿದು ಹೋದವು” ಎಂದು ಉತ್ತರಕೊಟ್ಟನು. ಕೂಡಲೇ ಎಣ್ಣೆ ಉಕ್ಕುವುದು ನಿಂತುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಪಾತ್ರೆಗಳು ತುಂಬಿದಾಗ, ಆಕೆ ತನ್ನ ಮಗನಿಗೆ, “ಇನ್ನೊಂದು ಪಾತ್ರೆಯನ್ನು ತಂದಿಡು,” ಅನ್ನಲು ಅವನು, “ಪಾತ್ರೆಗಳು ತೀರಿಹೋದುವು,” ಎಂದು ಉತ್ತರಕೊಟ್ಟನು. ಕೂಡಲೆ ಎಣ್ಣೆ ಉಕ್ಕುವುದೂ ನಿಂತುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವಳು ಅನೇಕ ಪಾತ್ರೆಗಳನ್ನು ತುಂಬಿಸಿಟ್ಟು ತನ್ನ ಮಗನಿಗೆ, “ಇನ್ನೊಂದು ಪಾತ್ರೆಯನ್ನು ನನ್ನ ಬಳಿಗೆ ತೆಗೆದುಕೊಂಡು ಬಾ” ಎಂದಳು. ಆದರೆ ಎಲ್ಲಾ ಪಾತ್ರೆಗಳು ತುಂಬಿಹೋಗಿದ್ದವು. ಅವಳ ಮಕ್ಕಳಲ್ಲಿ ಒಬ್ಬನು, “ಇಲ್ಲಿ ಯಾವ ಪಾತ್ರೆಗಳೂ ಇಲ್ಲ” ಎಂದು ಹೇಳಿದನು. ಆ ಸಮಯಕ್ಕೆ ಸರಿಯಾಗಿ ಪಾತ್ರೆಯಲ್ಲಿದ್ದ ಎಣ್ಣೆಯು ಮುಗಿದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆ ಪಾತ್ರೆಗಳು ತುಂಬಿದ ತರುವಾಯ ಅವಳು ತನ್ನ ಮಗನಿಗೆ, “ಇನ್ನೊಂದು ಪಾತ್ರೆಯನ್ನು ನನ್ನ ಬಳಿಗೆ ತೆಗೆದುಕೊಂಡು ಬಾ,” ಎಂದಳು. ಮಗನು ಅವಳಿಗೆ, “ಇನ್ನೊಂದು ಪಾತ್ರೆ ಇಲ್ಲ,” ಎಂದನು. ಆಗ ಎಣ್ಣೆಯು ನಿಂತುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 4:6
12 ತಿಳಿವುಗಳ ಹೋಲಿಕೆ  

ಅವರೆಲ್ಲರೂ ಊಟಮಾಡಿ ತೃಪ್ತರಾದರು. ವಿುಕ್ಕ ತುಂಡುಗಳನ್ನು ಕೂಡಿಸಲಾಗಿ ಹನ್ನೆರಡು ಪುಟ್ಟಿ ತುಂಬಿತು.


ಆಗ ದೇವರ ಮನುಷ್ಯನು ಅವನ ಮೇಲೆ ಕೋಪಗೊಂಡು - ನೀನು ಐದಾರು ಸಾರಿ ಹೊಡೆಯಬೇಕಾಗಿತ್ತು. ಹಾಗೆ ಮಾಡಿದ್ದರೆ ಅರಾಮ್ಯರು ನಿರ್ನಾಮವಾಗಿ ಹೋಗುವವರೆಗೂ ಅವರ ಮೇಲೆ ನಿನಗೆ ಜಯದೊರಕುತ್ತಿತ್ತು. ನೀನು ಮೂರೇ ಸಾರಿ ಹೊಡೆದದರಿಂದ ಅವರನ್ನು ಮೂರು ಸಾರಿ ಮಾತ್ರ ಸೋಲಿಸುವಿ ಎಂದು ಹೇಳಿದನು.


ಮತ್ತು ಆತನಿಂದ ಶಕ್ತಿ ಹೊರಟು ಎಲ್ಲರನ್ನು ವಾಸಿಮಾಡುತ್ತಿದ್ದದರಿಂದ ಆ ಗುಂಪಿನ ಜನರೆಲ್ಲಾ ಆತನನ್ನು ಮುಟ್ಟುವದಕ್ಕೆ ಪ್ರಯತ್ನಮಾಡಿದರು.


ಅವರಿಗೆ ತೃಪ್ತಿಯಾದ ಮೇಲೆ ಯೇಸು ತನ್ನ ಶಿಷ್ಯರಿಗೆ - ವಿುಕ್ಕತುಂಡುಗಳನ್ನು ಕೂಡಿಸಿರಿ; ಇದರಲ್ಲಿ ಯಾವದೂ ವ್ಯರ್ಥವಾಗಬಾರದು ಎಂದು ಹೇಳಿದನು.


ಎಲ್ಲರೂ ಊಟಮಾಡಿ ತೃಪ್ತರಾದರು. ವಿುಕ್ಕ ತುಂಡುಗಳನ್ನು ಕೂಡಿಸಲಾಗಿ ಏಳು ಹೆಡಿಗೆ ತುಂಬಿದವು.


ಅವರು ಆತನನ್ನು ನಂಬದೆ ಹೋದದರಿಂದ ಆತನು ಅಲ್ಲಿ ಅನೇಕ ಮಹತ್ಕಾರ್ಯಗಳನ್ನು ಮಾಡಲಿಲ್ಲ.


ಆಗ ಆತನು ಅವರ ಕಣ್ಣುಗಳನ್ನು ಮುಟ್ಟಿ - ನೀವು ನಂಬಿದಂತೆ ನಿಮಗೆ ಆಗಲಿ ಅಂದನು.


ಇಸ್ರಾಯೇಲ್ ದೇವರಾದ ಯೆಹೋವನು ನಿನಗೆ - ನಾನು ದೇಶಕ್ಕೆ ಮಳೆಯನ್ನು ಕಳುಹಿಸುವವರೆಗೆ ನಿನ್ನ ಮಡಕೆಯಲ್ಲಿರುವ ಹಿಟ್ಟು ತೀರುವದಿಲ್ಲ, ಮೊಗೆಯಲ್ಲಿರುವ ಎಣ್ಣೆಯು ಮುಗಿದುಹೋಗುವದಿಲ್ಲ ಎಂದು ಹೇಳುತ್ತಾನೆ ಅಂದನು.


ಆ ದೇಶದ ಹುಟ್ಟುವಳಿಯನ್ನು ಊಟಮಾಡಿದ ಮರುದಿವಸವೇ ಮನ್ನವು ನಿಂತುಹೋಯಿತು. ಅದು ಅವರಿಗೆ ತಿರಿಗಿ ಸಿಕ್ಕಲೇ ಇಲ್ಲ. ಇಸ್ರಾಯೇಲ್ಯರು ಆ ವರುಷದಲ್ಲೆಲ್ಲಾ ಕಾನಾನ್ ದೇಶದ ಉತ್ಪನ್ನವನ್ನು ಅನುಭವಿಸುತ್ತಿದ್ದರು.


ಆಕೆಯು ಹೋಗಿ ಮಕ್ಕಳನ್ನು ಒಳಗೆ ಕರಕೊಂಡು ಬಾಗಲನ್ನು ಮುಚ್ಚಿ ಅವರು ಮುಂದಿಟ್ಟ ಪಾತ್ರೆಗಳಲ್ಲೆಲ್ಲಾ ಎಣ್ಣೆ ಹೊಯ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು