Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 5:11 - ಕನ್ನಡ ಸತ್ಯವೇದವು J.V. (BSI)

11 ನಾಮಾನನು ಇದನ್ನು ಕೇಳಿ ಕೋಪಗೊಂಡು - ಇದೇನು! ಅವನು ಹೇಗೂ ಹೊರಗೆ ಬಂದು ನಿಂತು ತನ್ನ ದೇವರಾದ ಯೆಹೋವನ ಹೆಸರು ಹೇಳಿ ಕುಷ್ಠದ ಮೇಲೆ ಕೈಯಾಡಿಸಿ ವಾಸಿಮಾಡುವನೆಂದು ನೆನಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಾಮಾನನು ಇದನ್ನು ಕೇಳಿ ಕೋಪಗೊಂಡು, “ಇದೇನು? ಅವನು ಹೊರಗೆ ಬಂದು ತನ್ನ ದೇವರಾದ ಯೆಹೋವನ ಹೆಸರನ್ನು ಹೇಳಿ ನನ್ನ ಕುಷ್ಠದ ಮೇಲೆ ಕೈಯಾಡಿಸಿ ವಾಸಿಮಾಡುವನೆಂದು ನೆನಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನಾಮಾನನು ಇದನ್ನು ಕೇಳಿ ಕೋಪಗೊಂಡನು . “ಇದೇನು ! ಇವನು ಖಂಡಿತ ವಾಗಿ ಹೊರಗೆಬಂದು ನಿಂತು, ತನ್ನ ದೇವರಾದ ಸರ್ವೇಶ್ವರ ನ ಹೆಸರು ಹೇಳಿ, ನನ್ನ ಚರ್ಮ ದ ಮೇಲೆ ಕೈಯಾಡಿಸಿ , ರೋಗ ವಾಸಿ ಮಾಡುವನೆಂದು ನೆನಸಿದೆ .

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಾಮಾನನು ಕೋಪಗೊಂಡು, “ಎಲೀಷನು ಕೊನೆಯ ಪಕ್ಷ ಬಂದು, ನನ್ನೆದುರು ನಿಂತು, ತನ್ನ ದೇವರಾದ ಯೆಹೋವನ ಹೆಸರಿನಲ್ಲಿ ನನ್ನನ್ನು ಕರೆಯುತ್ತಿದ್ದನೆಂದು ನಾನು ಭಾವಿಸಿದ್ದೆನು. ಅವನು ತನ್ನ ಕೈಗಳನ್ನು ನನ್ನ ದೇಹದ ಮೇಲೆ ಸವರಿ, ನನ್ನ ಕುಷ್ಠರೋಗವನ್ನು ಗುಣಪಡಿಸುವನೆಂದು ನಾನು ಭಾವಿಸಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ನಾಮಾನನು ಕೋಪಗೊಂಡು ಹೊರಟುಹೋಗಿ, “ಅವನು ನಿಶ್ಚಯವಾಗಿ ನನ್ನ ಬಳಿಗೆ ಹೊರಟುಬಂದು, ತನ್ನ ದೇವರಾದ ಯೆಹೋವ ದೇವರ ಹೆಸರನ್ನು ಕರೆದು, ನನ್ನ ಚರ್ಮದ ಮೇಲೆ ತನ್ನ ಕೈಯನ್ನಾಡಿಸಿ, ಕುಷ್ಠರೋಗವನ್ನು ವಾಸಿಮಾಡುವನೆಂದು, ನಾನು ನೆನಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 5:11
19 ತಿಳಿವುಗಳ ಹೋಲಿಕೆ  

ನೀವು ಮಾತಾಡುತ್ತಿರುವಾತನ ಮಾತನ್ನು ಕೇಳಲೊಲ್ಲೆವೆಂದು ಹೇಳಬಾರದು. ಭೂವಿುಯ ಮೇಲೆ ದೈವೋಕ್ತಿಗಳನ್ನಾಡಿದವನಿಗೆ ಕಿವಿಗೊಡ ಮನಸ್ಸಿಲ್ಲದೆ ಇದ್ದ ಇಸ್ರಾಯೇಲ್ಯರು ದಂಡನೆಗೆ ತಪ್ಪಿಸಿಕೊಳ್ಳದಿದ್ದರೆ ಪರಲೋಕದಿಂದ ಮಾತಾಡುವವನಿಗೆ ನಾವು ಕಿವಿಗೊಡ ಮನಸ್ಸಿಲ್ಲದೆ ತೊಲಗಿದರೆ ಹೇಗೆ ತಪ್ಪಿಸಿಕೊಂಡೇವು?


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನಾನು ಕಳುಹಿಸಿಕೊಟ್ಟವನನ್ನು ಅಂಗೀಕರಿಸುವವನು ನನ್ನನ್ನು ಅಂಗೀಕರಿಸುವವನಾಗಿದ್ದಾನೆ; ನನ್ನನ್ನು ಅಂಗೀಕರಿಸುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನು ಅಂಗೀಕರಿಸುವವನಾಗಿದ್ದಾನೆ.


ಯೇಸು ಅವನಿಗೆ - ನೀವು ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ನೋಡದಿದ್ದರೆ ನಂಬುವದೇ ಇಲ್ಲವೆಂದು ಹೇಳಿದನು.


ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.


ಆ ಯೌವನಸ್ಥನು ಬಹಳ ಆಸ್ತಿಯುಳ್ಳವನಾಗಿದ್ದದರಿಂದ ಈ ಮಾತನ್ನು ಕೇಳಿ ದುಃಖದಿಂದ ಹೊರಟುಹೋದನು.


ಆಕೆ - ಸ್ವಾಮೀ, ಆ ಮಾತು ನಿಜವೇ; ನಾಯಿಮರಿಗಳಂತೂ ತಮ್ಮ ಯಜಮಾನರ ಮೇಜಿನಿಂದ ಬೀಳುವ ರೊಟ್ಟಿಯ ತುಂಡುಗಳನ್ನು ತಿನ್ನುತ್ತವಲ್ಲಾ ಅಂದಳು.


ಆ ಶತಾಧಿಪತಿಯು - ಪ್ರಭುವೇ, ನೀನು ನನ್ನ ಮನೆಗೆ ಬರತಕ್ಕಷ್ಟು ಯೋಗ್ಯತೆ ನನ್ನಲ್ಲಿಲ್ಲ; ನೀನು ಒಂದು ಮಾತು ಹೇಳಿದರೆ ಸಾಕು, ನನ್ನ ಆಳಿಗೆ ಗುಣವಾಗುವದು.


ಹೆಮ್ಮೆಯ ಫಲವು ಕಲಹವೇ; ಬುದ್ಧಿವಾದಕ್ಕೆ ಕಿವಿಗೊಡುವವರಲ್ಲಿ ಜ್ಞಾನ.


ನೀನೇ ಬುದ್ಧಿವಂತನು ಎಂದೆಣಿಸದೆ ಯೆಹೋವನಿಗೆ ಭಯಪಟ್ಟು ಕೆಟ್ಟದ್ದನ್ನು ತೊರೆದುಬಿಡು.


ಮೂಢರು ತಮ್ಮ ಉದಾಸೀನತೆಯಿಂದಲೇ ಹತರಾಗುವರು, ಜ್ಞಾನಹೀನರು ತಮ್ಮ ನಿಶ್ಚಿಂತೆಯಿಂದಲೇ ನಾಶವಾಗುವರು.


ಹೀಗಿರುವಲ್ಲಿ ಆ ಮನುಷ್ಯನ ಹೆಂಡತಿಯನ್ನು ತಿರಿಗಿ ಅವನಿಗೆ ಒಪ್ಪಿಸಿ ಬಿಡು. ಅವನು ಪ್ರವಾದಿ, ನಿನಗೋಸ್ಕರ ನನಗೆ ಪ್ರಾರ್ಥಿಸುವನು, ಮತ್ತು ನೀನು ಬದುಕುವಿ. ಆಕೆಯನ್ನು ಒಪ್ಪಿಸುವದಿಲ್ಲವೆಂದರೆ ನೀನೂ ನಿನ್ನವರೆಲ್ಲರೂ ಸತ್ತೇ ಸಾಯುವಿರೆಂದು ತಿಳಿದುಕೋ ಎಂದು ಕನಸಿನಲ್ಲಿ ಹೇಳಿದನು.


ಎಲೀಷನು ಅವನಿಗೆ - ಹೋಗಿ ಯೊರ್ದನ್ ಹೊಳೆಯಲ್ಲಿ ಏಳು ಸಾರಿ ಸ್ನಾನಮಾಡು; ಆಗ ನಿನ್ನ ದೇಹವು ಮುಂಚಿನಂತಾಗುವದು; ನೀನು ಶುದ್ಧನಾಗುವಿ ಎಂದು ಹೇಳಿಕಳುಹಿಸಿದನು.


ದಮಸ್ಕದ ಅಬಾನಾ, ಪರ್ಪರ್ ಎಂಬ ಹೊಳೆಗಳು ಇಸ್ರಾಯೇಲ್ಯರ ಎಲ್ಲಾ ಹೊಳೆಹಳ್ಳಗಳಿಗಿಂತ ಉತ್ತಮವಾಗಿವೆಯಲ್ಲವೋ? ಸ್ನಾನದಿಂದ ವಾಸಿಯಾಗುವ ಹಾಗಿದ್ದರೆ ನಾನು ಅವುಗಳಲ್ಲಿಯೇ ಸ್ನಾನಮಾಡಬಹುದಲ್ಲವೇ ಎಂದು ಹೇಳಿ ಬಲು ಸಿಟ್ಟಿನಿಂದ ಹೊರಟುಹೋದನು.


ಆಕೆಯು ಹೋಗಿ ಮಕ್ಕಳನ್ನು ಒಳಗೆ ಕರಕೊಂಡು ಬಾಗಲನ್ನು ಮುಚ್ಚಿ ಅವರು ಮುಂದಿಟ್ಟ ಪಾತ್ರೆಗಳಲ್ಲೆಲ್ಲಾ ಎಣ್ಣೆ ಹೊಯ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು