2 ಅರಸುಗಳು 5:14 - ಕನ್ನಡ ಸತ್ಯವೇದವು J.V. (BSI)14 ಅವನು ಯೊರ್ದನಿಗೆ ಹೋಗಿ ಏಳು ಸಾರಿ ಅದರಲ್ಲಿ ಮುಣುಗಿ ಎದ್ದನು. ಕೂಡಲೆ ದೇವರ ಮನುಷ್ಯನ ಮಾತಿಗನುಸಾರವಾಗಿ ಅವನ ದೇಹವು ಕೂಸಿನ ದೇಹದಂತೆ ಶುದ್ಧವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅವನು ಯೊರ್ದನ್ ನದಿಗೆ ಹೋಗಿ ಏಳು ಸಾರಿ ಅದರಲ್ಲಿ ಮುಳುಗಿ ಎದ್ದನು. ಕೂಡಲೆ ದೇವರ ಮನುಷ್ಯನ ಮಾತಿಗನುಸಾರವಾಗಿ ಅವನ ದೇಹವು ಕೂಸಿನ ದೇಹದಂತೆ ಶುದ್ಧವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅವನು ಅಂತೆಯೇ ಜೋರ್ಡನಿಗೆ ಹೋಗಿ, ಏಳು ಸಾರಿ ಅದರಲ್ಲಿ ಮುಳುಗಿ ಎದ್ದನು. ಕೂಡಲೆ ದೈವಪುರುಷನ ಮಾತಿಗನುಸಾರ ಅವನ ದೇಹ ಒಂದು ಮಗುವಿನ ದೇಹದಂತೆ ಶುದ್ಧವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ದೇವಮನುಷ್ಯನು (ಎಲೀಷನು) ಹೇಳಿದಂತೆಯೇ ನಾಮಾನನು ಜೋರ್ಡನ್ ನದಿಯಲ್ಲಿ ಇಳಿದು ಏಳುಸಾರಿ ಮುಳುಗಿ ಮೇಲೆದ್ದನು. ಆಗ ನಾಮಾನನು ಸಂಪೂರ್ಣ ಶುದ್ಧನಾದನು; ಅವನ ಚರ್ಮವು ಮಗುವಿನ ಚರ್ಮದಂತೆ ಕೋಮಲವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಗ ಅವನು ಇಳಿದು ಹೋಗಿ ದೇವರ ಮನುಷ್ಯನ ಮಾತಿನ ಪ್ರಕಾರ ಯೊರ್ದನಿನಲ್ಲಿ ಏಳು ಸಾರಿ ಮುಳುಗಿದನು. ಆಗ ಅವನ ಶರೀರವು ಚಿಕ್ಕ ಮಗುವಿನ ಶರೀರದ ಹಾಗೆ ಮಾರ್ಪಟ್ಟಿತು, ಅವನು ಶುದ್ಧನಾದನು. ಅಧ್ಯಾಯವನ್ನು ನೋಡಿ |