Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 5:25 - ಕನ್ನಡ ಸತ್ಯವೇದವು J.V. (BSI)

25 ಅವರು ಹೋದನಂತರ ಇವನು ತನ್ನ ಯಜಮಾನನ ಬಳಿಗೆ ಬಂದನು. ಎಲೀಷನು ಅವನನ್ನು - ಗೇಹಜಿಯೇ, ಎಲ್ಲಿಗೆ ಹೋಗಿ ಬಂದಿ ಎಂದು ಕೇಳಿದನು. ಅದಕ್ಕೆ ಅವನು - ನಿನ್ನ ಸೇವಕನಾದ ನಾನು ಎಲ್ಲಿಯೂ ಹೋಗಲಿಲ್ಲ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನಂತರ ಗೇಹಜಿಯು ತನ್ನ ಯಜಮಾನನ ಬಳಿಗೆ ಬಂದನು. ಎಲೀಷನು ಅವನನ್ನು, “ಗೇಹಜಿಯೇ, ಎಲ್ಲಿಗೆ ಹೋಗಿ ಬಂದಿರುವೆ?” ಎಂದು ಕೇಳಿದನು. ಅದಕ್ಕೆ ಅವನು, “ನಿನ್ನ ಸೇವಕನಾದ ನಾನು ಎಲ್ಲಿಯೂ ಹೋಗಲಿಲ್ಲ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅವರು ಹೋದನಂತರ, ಇವನು ತನ್ನ ಯಜಮಾನನ ಬಳಿಗೆ ಬಂದನು. ಎಲೀಷನು ಅವನನ್ನು, “ಗೇಹಜಿಯೇ, ಎಲ್ಲಿಗೆ ಹೋಗಿ ಬಂದೆ?” ಎಂದು ಕೇಳಿದನು. ಅದಕ್ಕೆ ಅವನು, “ನಿಮ್ಮ ಸೇವಕನಾದ ನಾನು ಎಲ್ಲಿಯೂ ಹೋಗಲಿಲ್ಲ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಗೇಹಜಿಯು ಒಳಗೆ ಬಂದು ತನ್ನ ಒಡೆಯನಾದ ಎಲೀಷನ ಮುಂದೆ ನಿಂತುಕೊಂಡನು. ಎಲೀಷನು ಗೇಹಜಿಗೆ, “ನೀನು ಎಲ್ಲಿಗೆ ಹೋಗಿದ್ದೆ?” ಎಂದು ಕೇಳಿದನು. ಗೇಹಜಿಯು, “ನಾನು ಎಲ್ಲಿಗೂ ಹೋಗಿರಲಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಗ ಗೇಹಜಿಯು ಒಳಗೆ ಪ್ರವೇಶಿಸಿ, ತನ್ನ ಯಜಮಾನನ ಮುಂದೆ ನಿಂತನು. ಎಲೀಷನು ಅವನಿಗೆ, “ಗೇಹಜಿಯೇ, ಎಲ್ಲಿಗೆ ಹೋಗಿ ಬಂದೆ?” ಎಂದನು. ಅದಕ್ಕೆ ಗೇಹಜಿಯು, “ನಿನ್ನ ಸೇವಕನು ಎಲ್ಲಿಗೂ ಹೋಗಲಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 5:25
14 ತಿಳಿವುಗಳ ಹೋಲಿಕೆ  

ಅವನು - ಕ್ಷೇಮ, ಎಫ್ರಾಯೀಮ್ ಪರ್ವತ ಪ್ರದೇಶದಿಂದ ಪ್ರವಾದಿಮಂಡಲಿಯವರಾದ ಇಬ್ಬರು ಯೌವನಸ್ಥರು ಬಂದಿರುತ್ತಾರೆ. ಆದದರಿಂದ ಅವರಿಗೋಸ್ಕರ ಬೇಗನೆ ಒಂದು ತಲಾಂತು ಬೆಳ್ಳಿಯನ್ನೂ ಎರಡು ದುಸ್ತುಬಟ್ಟೆಗಳನ್ನೂ ತೆಗೆದುಕೊಂಡು ಬರಬೇಕೆಂಬದಾಗಿ ನನ್ನ ಯಜಮಾನನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದನು ಎಂದು ಉತ್ತರಕೊಟ್ಟನು.


ಅವರು ಊಟಮಾಡುತ್ತಿರುವಾಗ ಆತನು - ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡುಕೊಡುವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು.


[ಪ್ರಶ್ನೆ ಕೇಳುವದಕ್ಕೆ] ಬರುವ ಜನರಂತೆ ಅವರು ನಿನ್ನ ಬಳಿಗೆ ಬಂದು ನನ್ನ ಭಕ್ತರಾಗಿ ನಿನ್ನ ಮುಂದೆ ಕೂತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಕೊಳ್ಳುವದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೇನೋ ತಾವು ದೋಚಿಕೊಂಡದರ ಮೇಲೆ ಹೋಗುತ್ತದೆ.


ಜಾರಳ ನಡತೆಯು ಹೀಗೆಯೇ ಸರಿ; ಅವಳು ತಿಂದು ಬಾಯಿ ಒರಿಸಿಕೊಂಡು ನಾನು ತಪ್ಪುಮಾಡಲಿಲ್ಲವಲ್ಲವೆ, ಅಂದುಕೊಳ್ಳುವಳು.


ಆಗ ಪ್ರವಾದಿಯಾದ ಯೆಶಾಯನು ಹಿಜ್ಕೀಯನ ಬಳಿಗೆ ಬಂದು ಅವನನ್ನು - ಆ ಮನುಷ್ಯರು ಎಲ್ಲಿಯವರು, ಏನು ಹೇಳಿದರು ಎಂದು ಕೇಳಲು ಅವನು - ಅವರು ಬಹುದೂರ ದೇಶವಾದ ಬಾಬೆಲಿನಿಂದ ಬಂದವರು ಎಂದು ಉತ್ತರ ಕೊಟ್ಟನು.


ಸಾರಯಳ ದಾಸಿಯಾದ ಹಾಗರಳೇ, ಎಲ್ಲಿಂದ ಬಂದಿ? ಎಲ್ಲಿಗೆ ಹೋಗುತ್ತೀ ಎಂದು ಕೇಳಲು ಅವಳು - ನನ್ನ ಯಜಮಾನಿಯಾದ ಸಾರಯಳ ಬಳಿಯಿಂದ ಓಡಿಹೋಗುತ್ತಾ ಇದ್ದೇನೆ ಅಂದಳು.


ಯೆಹೋವನು ಕಾಯಿನನನ್ನು - ನಿನ್ನ ತಮ್ಮನಾದ ಹೇಬೆಲನು ಎಲ್ಲಿ ಎಂದು ಕೇಳಲು ಅವನು - ನಾನರಿಯೆ; ನನ್ನ ತಮ್ಮನನ್ನು ಕಾಯುವವನು ನಾನೋ ಎಂದು ಉತ್ತರಕೊಟ್ಟನು.


ಅವರು ಊಟಕ್ಕೆ ಕೂತುಕೊಂಡಿದ್ದರು; ಅಷ್ಟರೊಳಗೆ ಸೈತಾನನು ಸೀಮೋನನ ಮಗನಾದ ಇಸ್ಕರಿಯೋತ ಯೂದನ ಮನಸ್ಸಿನಲ್ಲಿ ಯೇಸುವನ್ನು ಹಿಡುಕೊಡಬೇಕೆಂಬ ಆಲೋಚನೆಯನ್ನು ಹುಟ್ಟಿಸಿದ್ದನು.


ಧೂಪಹಾಕಬೇಕೆಂದು ಕೈಯಲ್ಲಿ ಧೂಪಾರತಿಯನ್ನು ಹಿಡಿದಿದ್ದ ಉಜ್ಜೀಯನು ಕೋಪವುಳ್ಳವನಾದನು. ಅವನು ಯೆಹೋವನ ಆಲಯದ ಧೂಪವೇದಿಯ ಬಳಿಯಲ್ಲಿ ನಿಂತು ಯಾಜಕರೊಡನೆ ಸಿಟ್ಟಿನಿಂದ ಮಾತಾಡುತ್ತಿರುವಾಗ ಯಾಜಕರ ಸಮಕ್ಷದಲ್ಲೇ ಅವನ ಹಣೆಯಲ್ಲಿ ಕುಷ್ಠ ಹುಟ್ಟಿತು.


ಸೌಲನ ಚಿಕ್ಕಪ್ಪನು ಅವನನ್ನೂ ಅವನ ಸೇವಕನನ್ನೂ - ನೀವು ಎಲ್ಲಿಗೆ ಹೋಗಿದ್ದಿರಿ ಎಂದು ಕೇಳಲು ಅವನು - ಕತ್ತೆಗಳನ್ನು ಹುಡುಕುವದಕ್ಕೆ ಹೋಗಿದ್ದೆವು. ಅವು ಸಿಕ್ಕಲಿಲ್ಲವಾದದರಿಂದ ಸಮುವೇಲನ ಬಳಿಗೆ ಹೋದೆವು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು