Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 5:26 - ಕನ್ನಡ ಸತ್ಯವೇದವು J.V. (BSI)

26 ಆಗ ಎಲೀಷನು ಅವನಿಗೆ - ಒಬ್ಬನು ರಥದಿಂದಿಳಿದು ಬಂದು ನಿನ್ನನ್ನು ಎದುರುಗೊಂಡದು ನನ್ನ ಜ್ಞಾನ ದೃಷ್ಟಿಗೆ ಕಾಣಿಸಲಿಲ್ಲವೆಂದು ನೆನಸುತ್ತೀಯೋ? ದ್ರವ್ಯ, ಬಟ್ಟೆಗಳು, ಎಣ್ಣೇ ಮರದ ತೋಪುಗಳು, ದ್ರಾಕ್ಷೇತೋಟಗಳು, ಕುರಿದನಗಳು, ದಾಸದಾಸೀ ಜನವು ಇವುಗಳನ್ನು ಸಂಪಾದಿಸುವದಕ್ಕೆ ಇದು ಸಮಯವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆಗ ಎಲೀಷನು ಗೇಹಜಿಗೆ, “ಒಬ್ಬನು ರಥದಿಂದ ಇಳಿದು ಬಂದು, ನಿನ್ನನ್ನು ಎದುರುಗೊಂಡದ್ದು ನನ್ನ ಜ್ಞಾನದೃಷ್ಟಿಗೆ ಕಾಣಲಿಲ್ಲವೆಂದು ತಿಳಿದಿರುವೆಯಾ? ದ್ರವ್ಯ, ಬಟ್ಟೆಗಳು, ಎಣ್ಣೇ ಮರದ ತೋಪುಗಳು, ದ್ರಾಕ್ಷಿತೋಟಗಳು, ಕುರಿದನಗಳು, ದಾಸದಾಸಿಯರು, ಜನರೂ ಇವುಗಳನ್ನು ಸಂಪಾದಿಸುವುದಕ್ಕೆ ಇದು ಸಮಯವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಆಗ ಎಲೀಷನು, “ಒಬ್ಬನು ರಥದಿಂದಿಳಿದು ಬಂದು ನಿನ್ನನ್ನು ಎದುರುಗೊಂಡದ್ದು ನನ್ನ ಜ್ಞಾನದೃಷ್ಟಿಗೆ ಕಾಣಿಸಲಿಲ್ಲವೆಂದು ನೆನಸುತ್ತೀಯೋ? ದ್ರವ್ಯ, ಬಟ್ಟೆಗಳು, ಎಣ್ಣೇಮರದ ತೋಪುಗಳು, ದ್ರಾಕ್ಷೀತೋಟಗಳು, ಕುರಿದನಗಳು, ಗಂಡಾಳು, ಹೆಣ್ಣಾಳುಗಳು, ಇವನ್ನು ಸಂಪಾದಿಸುವುದಕ್ಕೆ ಇದು ಸಮಯವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಎಲೀಷನು ಗೇಹಜಿಗೆ, “ಅದು ನಿಜವಲ್ಲ! ನಾಮಾನನು ನಿನ್ನನ್ನು ಸಂಧಿಸಲು ತನ್ನ ರಥದಿಂದ ಹಿಂದಕ್ಕೆ ತಿರುಗಿದಾಗ ನನ್ನ ಹೃದಯವು ನಿನ್ನ ಹತ್ತಿರದಲ್ಲಿಯೇ ಇತ್ತು. ಹಣವನ್ನು, ಬಟ್ಟೆಗಳನ್ನು, ಆಲೀವನ್ನು, ದ್ರಾಕ್ಷಿಯನ್ನು, ಕುರಿಗಳನ್ನು, ಹಸುಗಳನ್ನು ಅಥವಾ ಸೇವಕಸೇವಕಿಯರನ್ನು ತೆಗೆದುಕೊಳ್ಳುವ ಕಾಲ ಇದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆದರೆ ಎಲೀಷನು ಅವನಿಗೆ, “ಆ ಮನುಷ್ಯನು ನಿನ್ನನ್ನು ಎದುರುಗೊಳ್ಳಲು ತನ್ನ ರಥದಿಂದ ಇಳಿದು ನಿನ್ನ ಬಳಿಗೆ ಬಂದಾಗ, ನನ್ನ ಹೃದಯವು ನಿನ್ನ ಸಂಗಡ ಹೋಗಲಿಲ್ಲವೋ? ಹಣವನ್ನೂ, ವಸ್ತ್ರಗಳನ್ನೂ, ದ್ರವ್ಯವನ್ನೂ, ಹಿಪ್ಪೆಯ ತೋಪುಗಳನ್ನೂ, ದ್ರಾಕ್ಷಿಯ ತೋಟಗಳನ್ನೂ, ಕುರಿದನಗಳನ್ನೂ, ದಾಸದಾಸಿಯರನ್ನೂ ಪಡೆದುಕೊಳ್ಳುವುದಕ್ಕೆ ಇದು ಸಮಯವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 5:26
18 ತಿಳಿವುಗಳ ಹೋಲಿಕೆ  

ನಾನು ಶರೀರದಿಂದ ನಿಮ್ಮ ಬಳಿಯಲ್ಲಿ ಇಲ್ಲದಿದ್ದರೂ ಆತ್ಮದಿಂದ ನಿಮ್ಮೊಂದಿಗಿದ್ದು ನೀವು ಕ್ರಮವಾಗಿ ನಡೆಯುವದನ್ನೂ ಕ್ರಿಸ್ತನಂಬಿಕೆಯಲ್ಲಿ ದೃಢವಾಗಿ ನಿಂತಿರುವದನ್ನೂ ನೋಡಿ ಸಂತೋಷಪಡುತ್ತೇನೆ.


ನಾನಂತೂ ದೇಹದಿಂದ ದೂರವಾಗಿದ್ದರೂ ಆತ್ಮದಿಂದ ಹತ್ತರದಲ್ಲಿದ್ದು ಈ ಕಾರ್ಯಮಾಡಿದವನನ್ನು ಕುರಿತು ಆಗಲೇ ಹತ್ತರವಿದ್ದವನಂತೆ ತೀರ್ಪು ಮಾಡಿದ್ದೇನಂದರೆ -


ಆಗ ಅವರಲ್ಲೊಬ್ಬನು ಅವನಿಗೆ - ನನ್ನ ಒಡೆಯನಾದ ಅರಸೇ, ಹಾಗಲ್ಲ; ಇಸ್ರಾಯೇಲ್ಯರಲ್ಲಿ ಎಲೀಷನೆಂಬೊಬ್ಬ ಪ್ರವಾದಿಯಿರುತ್ತಾನೆ; ನೀನು ನಿನ್ನ ಮಲಗುವ ಕೋಣೆಯಲ್ಲಿ ಆಡುವ ಮಾತುಗಳನ್ನು ಸಹ ಅವನು ಅರಿತುಕೊಂಡು ಎಲ್ಲವನ್ನೂ ಇಸ್ರಾಯೇಲ್ಯರ ಅರಸನಿಗೆ ತಿಳಿಸುತ್ತಾನೆ ಅಂದನು.


ಎಲ್ಲಾ ವಿಷಯಗಳಲ್ಲಿ ನಾನು ನಿಮಗೆ ಮಾದರಿ ತೋರಿಸಿದ್ದೇನೆ. ನೀವೂ ಹಾಗೆಯೇ ದುಡಿದು ಬಲವಿಲ್ಲದವರಿಗೆ ಉಪಕಾರಮಾಡಬೇಕು; ಮತ್ತು - ತೆಗೆದುಕೊಳ್ಳುವದಕ್ಕಿಂತ ಕೊಡುವದೇ ಹೆಚ್ಚಿನ ಭಾಗ್ಯವೆಂಬದಾಗಿ ಕರ್ತನಾದ ಯೇಸು ತಾನೇ ಹೇಳಿದ ಮಾತುಗಳನ್ನು ನೆನಪಿನಲ್ಲಿಟ್ಟುಕೊಂಡಿರಬೇಕು ಅಂದನು.


ರೋಗಿಗಳನ್ನು ಸ್ವಸ್ಥಮಾಡಿರಿ, ಸತ್ತವರನ್ನು ಬದುಕಿಸಿರಿ, ಕುಷ್ಠಹತ್ತಿದವರನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ; ಉಚಿತವಾಗಿ ಹೊಂದಿದ್ದೀರಿ, ಉಚಿತವಾಗಿ ಕೊಡಿರಿ.


ಸುಳ್ಳುತುಟಿ ಯೆಹೋವನಿಗೆ ಹೇಸು; ಸತ್ಯವಂತರು ಆತನಿಗೆ ಲೇಸು.


ಸತ್ಯದ ತುಟಿ ಶಾಶ್ವತ; ಸುಳ್ಳಿನ ನಾಲಿಗೆ ಕ್ಷಣಿಕ.


ಅರಸನೋ ದೇವರಲ್ಲಿ ಆನಂದಿಸುವನು. ದೇವರ ಮೇಲೆ ಆಣೆಯಿಡುವವರೆಲ್ಲರು ಸುಳ್ಳುಬಾಯಿ ಮುಚ್ಚಿಹೋಗುವದನ್ನು ಕಂಡು ಹಿಗ್ಗುವರು.


ಅದಕ್ಕೆ ಎಲೀಷನು - ನಾನು ಸನ್ನಿಧಿ ಸೇವೆಮಾಡುತ್ತಿರುವ ಯೆಹೋವನಾಣೆ, ನಿನ್ನಿಂದ ಏನೂ ತೆಗೆದುಕೊಳ್ಳುವದಿಲ್ಲ ಅಂದನು. ನಾಮಾನನು ಎಷ್ಟು ಒತ್ತಾಯಪಡಿಸಿದರೂ ಅವನು ತೆಗೆದುಕೊಳ್ಳಲೇ ಇಲ್ಲ.


ನಾನು ಯಾರ ಬೆಳ್ಳಿಬಂಗಾರವನ್ನಾಗಲಿ ಉಡಿಗೆತೊಡಿಗೆಯನ್ನಾಗಲಿ ಬಯಸಲಿಲ್ಲ.


ಆಗ ಪೇತ್ರನು ಆಕೆಗೆ - ನೀವಿಬ್ಬರೂ ಕರ್ತನ ಆತ್ಮನನ್ನು ಪರೀಕ್ಷಿಸುವದಕ್ಕೆ ಯಾಕೆ ಒಡಂಬಟ್ಟಿರಿ? ಅಗೋ, ನಿನ್ನ ಗಂಡನನ್ನು ಹೂಣಿಟ್ಟವರು ಬಂದು ಬಾಗಿಲಿನಲ್ಲಿ ಕಾಲಿಟ್ಟಿದ್ದಾರೆ, ನಿನ್ನನ್ನೂ ಹೊತ್ತುಕೊಂಡು ಹೋಗುವರು ಎಂದು ಹೇಳಿದನು.


ಮಹಾಪದವಿಯನ್ನು ನಿರೀಕ್ಷಿಸಿಕೊಳ್ಳುತ್ತೀಯೋ? ನಿರೀಕ್ಷಿಸಬೇಡ; ಆಹಾ, ನಾನು ನರಜನ್ಮದವರೆಲ್ಲರಿಗೂ ಕೇಡನ್ನುಂಟುಮಾಡುವೆನು; ಆದರೆ ನೀನು ಎಲ್ಲಿಗೆ ಹೋದರೂ ಪ್ರಾಣವೊಂದನ್ನೇ ಬಾಚಿಕೊಂಡುಹೋಗುವದಕ್ಕೆ ನಿನಗೆ ಅವಕಾಶಕೊಡುವೆನು. ಇದು ಯೆಹೋವನಾದ ನನ್ನ ನುಡಿ.


ಈ ಆಲಯವು ಹಾಳುಬಿದ್ದಿದೆಯಲ್ಲಾ; ನೀವು ಒಳಗೋಡೆಗೆಲ್ಲಾ ಹಲಿಗೆಹೊದಿಸಿಕೊಂಡ ಸ್ವಂತ ಮನೆಗಳಲ್ಲಿ ವಾಸಿಸುವದಕ್ಕೆ ಈ ಸಮಯವು ತಕ್ಕದ್ದೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು