2 ಅರಸುಗಳು 5:27 - ಕನ್ನಡ ಸತ್ಯವೇದವು J.V. (BSI)27 ನಾಮಾನನ ಕುಷ್ಠವು ನಿನ್ನನ್ನೂ ನಿನ್ನ ಸಂತಾನದವರನ್ನೂ ಸದಾಕಾಲ ಹಿಡಿದಿರುವದು ಅಂದನು. ಕೂಡಲೆ ಅವನಿಗೆ ಕುಷ್ಠ ಹತ್ತಿತು. ಅವನು ಹಿಮದಂತೆ ಬಿಳುಪಾಗಿ ಅವನ ಸನ್ನಿಧಿಯಿಂದ ಹೊರಟುಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ನಾಮಾನನ ಕುಷ್ಠವು ನಿನ್ನನ್ನೂ, ನಿನ್ನ ಸಂತಾನದವರನ್ನೂ ಸದಾಕಾಲ ಹಿಡಿದಿರುವುದು” ಎಂದನು. ಕೂಡಲೆ ಅವನಿಗೆ ಕುಷ್ಠ ಹತ್ತಿತು. ಗೇಹಜಿ ಹಿಮದಂತೆ ಬಿಳುಪಾಗಿ ಎಲೀಷನ ಸನ್ನಿಧಿಯಿಂದ ಹೊರಟುಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ನಾಮಾನನ ಚರ್ಮರೋಗವು ನಿನ್ನನ್ನೂ ನಿನ್ನ ಸಂತಾನದವರನ್ನೂ ಸದಾಕಾಲ ಬಾಧಿಸುವುದು,” ಎಂದನು. ಕೂಡಲೆ ಅವನಿಗೆ ಆ ರೋಗ ಹತ್ತಿತು. ಅವನು ಹಿಮದಂತೆ ಬಿಳುಪಾಗಿ, ಅಲ್ಲಿಂದ ಹೊರಟುಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಈಗ, ನಿನ್ನನ್ನೂ ನಿನ್ನ ಸಂತಾನದವರನ್ನೂ ಸದಾಕಾಲ ನಾಮಾನನ ರೋಗವು ಹಿಡಿದುಕೊಳ್ಳುವುದು. ನಿನಗೆ ಎಂದೆಂದಿಗೂ ಕುಷ್ಠರೋಗವಿರುವುದು!” ಎಂದು ಹೇಳಿದನು. ಗೇಹಜಿಯು ಎಲೀಷನನ್ನು ಬಿಟ್ಟುಹೋದಾಗ, ಗೇಹಜಿಯ ಚರ್ಮವು ಮಂಜುಗಡ್ಡೆಯಂತೆ ಬಿಳುಪಾಯಿತು! ಗೇಹಜಿಯು ಕುಷ್ಠರೋಗ ಪೀಡಿತನಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ನಾಮಾನನ ಕುಷ್ಠರೋಗವು ನಿನಗೂ, ನಿನ್ನ ಸಂತಾನಕ್ಕೂ ನಿತ್ಯವಾಗಿ ಇರುವುದು,” ಎಂದನು. ಆಗ ಗೇಹಜಿಯು ಹಿಮದಂತೆ ಬಿಳುಪಾಗಿ, ಕುಷ್ಠರೋಗಿ ಆಗಿ ಎಲೀಷನಿಂದ ಹೊರಟುಹೋದನು. ಅಧ್ಯಾಯವನ್ನು ನೋಡಿ |