2 ಅರಸುಗಳು 5:3 - ಕನ್ನಡ ಸತ್ಯವೇದವು J.V. (BSI)3 ಆಕೆಯು ಒಂದು ದಿವಸ ತನ್ನ ಯಜಮಾನಿಗೆ - ನಮ್ಮ ದಣಿಯು ಸಮಾರ್ಯದಲ್ಲಿರುವ ಪ್ರವಾದಿಯ ಹತ್ತಿರ ಇರುತ್ತಿದ್ದರೆ ಎಷ್ಟೋ ಒಳ್ಳೇದಾಗುತ್ತಿತ್ತು. ಅವನು ಇವನನ್ನು ಕುಷ್ಠರೋಗದಿಂದ ವಾಸಿಮಾಡುತ್ತಿದ್ದನು ಎಂದು ಹೇಳಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಕೆಯು ಒಂದು ದಿನ ತನ್ನ ಯಜಮಾನಿಯ ಬಳಿ, “ನಮ್ಮ ದಣಿಯು ಸಮಾರ್ಯದಲ್ಲಿರುವ ಪ್ರವಾದಿಯ ಹತ್ತಿರ ಇದ್ದಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು. ಅವನು ನನ್ನ ಯಜಮಾನನನ್ನು ಕುಷ್ಠರೋಗದಿಂದ ವಾಸಿಮಾಡುತ್ತಿದ್ದನು” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಒಂದು ದಿನ ಆಕೆ ತನ್ನ ಯಜಮಾನಿಗೆ, “ನಮ್ಮ ದಣಿಯವರು ಸಮಾರಿಯದಲ್ಲಿರುವ ಪ್ರವಾದಿಯ ಹತ್ತಿರ ಇದ್ದಿದ್ದರೆ ಎಷ್ಟೋ ಒಳ್ಳೇದಾಗುತ್ತಿತ್ತು; ಅವರು ಇವರನ್ನು ಈ ಚರ್ಮರೋಗದಿಂದ ಗುಣಪಡಿಸುತ್ತಿದ್ದರು,” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಈ ಹುಡುಗಿಯು ನಾಮಾನನ ಪತ್ನಿಗೆ, “ನನ್ನ ಒಡೆಯನಾದ ನಾಮಾನನು ಸಮಾರ್ಯದಲ್ಲಿ ವಾಸಿಸುವ ಪ್ರವಾದಿಯಾದ ಎಲೀಷನನ್ನು ಭೇಟಿಮಾಡಬೇಕೆಂದು ನಾನು ಆಶಿಸುತ್ತೇನೆ. ಆ ಪ್ರವಾದಿಯು ನಾಮಾನನ ಕುಷ್ಠರೋಗವನ್ನು ಗುಣಪಡಿಸಬಲ್ಲನು” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವಳು ತನ್ನ ಯಜಮಾನನಿಗೆ, “ನನ್ನ ಧಣಿಯು ಸಮಾರ್ಯದಲ್ಲಿರುವ ಪ್ರವಾದಿಯ ಬಳಿಯಲ್ಲಿರುತ್ತಿದ್ದರೆ, ಅವನು ಧಣಿಯ ಕುಷ್ಠರೋಗವನ್ನು ವಾಸಿಮಾಡುತ್ತಿದ್ದನು,” ಎಂದಳು. ಅಧ್ಯಾಯವನ್ನು ನೋಡಿ |