2 ಅರಸುಗಳು 5:6 - ಕನ್ನಡ ಸತ್ಯವೇದವು J.V. (BSI)6 ಸಮಾರ್ಯಕ್ಕೆ ಹೊರಟುಹೋಗಿ ಪತ್ರವನ್ನು ಇಸ್ರಾಯೇಲ್ಯರ ಅರಸನಿಗೆ ಕೊಟ್ಟನು. ಅದರಲ್ಲಿ - ನನ್ನ ಸೇವಕನಾದ ನಾಮಾನನನ್ನು ನಿನ್ನ ಬಳಿಗೆ ಕಳುಹಿಸಿದ್ದೇನೆ; ನೀನು ಅವನ ಕುಷ್ಠರೋಗವನ್ನು ವಾಸಿಮಾಡತಕ್ಕದೆಂದು ಈ ಪತ್ರದಿಂದ ತಿಳಿದುಕೋ ಎಂಬದಾಗಿ ಬರೆದಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಪತ್ರವನ್ನು ಇಸ್ರಾಯೇಲರ ಅರಸನಿಗೆ ಕೊಟ್ಟನು. ಅದರಲ್ಲಿ, “ನನ್ನ ಸೇವಕನಾದ ನಾಮಾನನನ್ನು ನಿನ್ನ ಬಳಿಗೆ ಕಳುಹಿಸಿದ್ದೇನೆ, ನೀನು ಅವನ ಕುಷ್ಠರೋಗವನ್ನು ವಾಸಿಮಾಡತಕ್ಕದ್ದೆಂದು ಈ ಪತ್ರದಿಂದ ತಿಳಿದುಕೋ” ಎಂಬುದಾಗಿ ಬರೆದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ತಂದ ಪತ್ರವನ್ನು ಇಸ್ರಯೇಲರ ಅರಸನಿಗೆ ಕೊಟ್ಟನು. ಅದರಲ್ಲಿ, “ನನ್ನ ಸೇವಕ ನಾಮಾನನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ; ನೀವು ಅವನ ಚರ್ಮರೋಗವನ್ನು ವಾಸಿಮಾಡತಕ್ಕದ್ದೆಂದು ಈ ಪತ್ರದಿಂದ ತಿಳಿದುಕೊಳ್ಳಿ,” ಎಂಬುದಾಗಿ ಬರೆದಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನಾಮಾನನು ಅರಾಮ್ಯರ ರಾಜನಿಂದ ಇಸ್ರೇಲ್ ರಾಜನಿಗೆ ಪತ್ರವೊಂದನ್ನು ತೆಗೆದುಕೊಂಡು ಹೋದನು. ಆ ಪತ್ರದಲ್ಲಿ, “…ನನ್ನ ಸೇವಕನಾದ ನಾಮಾನನನ್ನು ನಿಮ್ಮ ಬಳಿಗೆ ನಾನು ಕಳುಹಿಸುತ್ತಿದ್ದೇನೆ. ಅವನ ಕುಷ್ಠರೋಗವನ್ನು ಗುಣಪಡಿಸಿ” ಎಂದು ಬರೆದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅವನು ಇಸ್ರಾಯೇಲಿನ ಅರಸನ ಬಳಿಗೆ ಆ ಪತ್ರವನ್ನು ತೆಗೆದುಕೊಂಡು ಬಂದನು. ಅದರಲ್ಲಿ, “ಈ ಪತ್ರ ನಿನಗೆ ಸೇರುವಾಗ, ನಿನ್ನ ಸೇವಕನಾದ ನಾಮಾನನ ಕುಷ್ಠರೋಗವನ್ನು ವಾಸಿಮಾಡುವ ಹಾಗೆ ನಿನ್ನ ಬಳಿಗೆ ಕಳುಹಿಸಿದ್ದೇನೆ,” ಎಂದು ಬರೆದಿತ್ತು. ಅಧ್ಯಾಯವನ್ನು ನೋಡಿ |
ಇಸ್ರಾಯೇಲ್ಯರ ಅರಸನು ಪತ್ರವನ್ನು ಓದಿದ ಕೂಡಲೆ ಬಟ್ಟೆಗಳನ್ನು ಹರಿದುಕೊಂಡು ತನ್ನ ಪರಿವಾರದವರಿಗೆ - ತಾನು ಕಳುಹಿಸಿದ ಮನುಷ್ಯನನ್ನು ಕುಷ್ಠರೋಗದಿಂದ ವಾಸಿಮಾಡಬೇಕಂತೆ; ಇದು ಎಂಥ ಅಪ್ಪಣೆ! ನಾನೇನು ದೇವರೋ? ಜೀವದಾನ ಮಾಡುವದಕ್ಕಾಗಲಿ ಸಾಯಿಸುವದಕ್ಕಾಗಲಿ ನನಗೆ ಸಾಮರ್ಥ್ಯವುಂಟೋ? ಇವನು ನನ್ನೊಡನೆ ಜಗಳವಾಡುವದಕ್ಕೆ ಕಾರಣ ಹುಡುಕುತ್ತಾನಲ್ಲದೆ ಮತ್ತೇನು? ನೀವೇ ಆಲೋಚಿಸಿ ನೋಡಿರಿ ಎಂದು ಹೇಳಿದನು.