2 ಅರಸುಗಳು 5:7 - ಕನ್ನಡ ಸತ್ಯವೇದವು J.V. (BSI)7 ಇಸ್ರಾಯೇಲ್ಯರ ಅರಸನು ಪತ್ರವನ್ನು ಓದಿದ ಕೂಡಲೆ ಬಟ್ಟೆಗಳನ್ನು ಹರಿದುಕೊಂಡು ತನ್ನ ಪರಿವಾರದವರಿಗೆ - ತಾನು ಕಳುಹಿಸಿದ ಮನುಷ್ಯನನ್ನು ಕುಷ್ಠರೋಗದಿಂದ ವಾಸಿಮಾಡಬೇಕಂತೆ; ಇದು ಎಂಥ ಅಪ್ಪಣೆ! ನಾನೇನು ದೇವರೋ? ಜೀವದಾನ ಮಾಡುವದಕ್ಕಾಗಲಿ ಸಾಯಿಸುವದಕ್ಕಾಗಲಿ ನನಗೆ ಸಾಮರ್ಥ್ಯವುಂಟೋ? ಇವನು ನನ್ನೊಡನೆ ಜಗಳವಾಡುವದಕ್ಕೆ ಕಾರಣ ಹುಡುಕುತ್ತಾನಲ್ಲದೆ ಮತ್ತೇನು? ನೀವೇ ಆಲೋಚಿಸಿ ನೋಡಿರಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಇಸ್ರಾಯೇಲರ ಅರಸನು ಪತ್ರವನ್ನು ಓದಿದ ಕೂಡಲೆ ಬಟ್ಟೆಗಳನ್ನು ಹರಿದುಕೊಂಡು, ತನ್ನ ಪರಿವಾರದವರಿಗೆ, “ಅವನು ಕಳುಹಿಸಿದ ಮನುಷ್ಯನನ್ನು ಕುಷ್ಠರೋಗದಿಂದ ವಾಸಿಮಾಡಬೇಕಂತೆ. ಇದು ಎಂಥ ಅಪ್ಪಣೆ! ನಾನೇನು ದೇವರೋ? ಜೀವದಾನಮಾಡುವುದಕ್ಕಾಗಲಿ, ಸಾಯಿಸುವುದಕ್ಕಾಗಲಿ ನನಗೆ ಸಾಮರ್ಥ್ಯ ಉಂಟೋ? ಇವನು ನನ್ನೊಡನೆ ಜಗಳವಾಡುವುದಕ್ಕೆ ಕಾರಣ ಹುಡುಕುತ್ತಿದ್ದಾನಲ್ಲವೇ ನೀವೇ ಆಲೋಚಿಸಿ ನೋಡಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಇಸ್ರಯೇಲರ ಅರಸನು ಈ ಪತ್ರವನ್ನು ಓದಿದ ಕೂಡಲೆ, ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, ತನ್ನ ಪರಿವಾರದವರಿಗೆ, “ತಾನು ಕಳುಹಿಸಿದ ವ್ಯಕ್ತಿಯನ್ನು ಚರ್ಮರೋಗದಿಂದ ನಾನು ವಾಸಿಮಾಡಬೇಕಂತೆ! ಇದು ಎಂಥ ಅಪ್ಪಣೆ; ನಾನೇನು ದೇವರೋ? ಜೀವದಾನ ಮಾಡುವುದಕ್ಕಾಗಲಿ ಜೀವಹರಣ ಮಾಡುವುದಕ್ಕಾಗಲಿ ನನಗೆ ಸಾಮರ್ಥ್ಯವುಂಟೇ? ಇವನು ನನ್ನೊಡನೆ ಯುದ್ಧಮಾಡುವುದಕ್ಕೆ ನೆಪ ಹುಡುಕುತ್ತಾನಲ್ಲದೆ ಮತ್ತೇನು? ನೀವೇ ಆಲೋಚಿಸಿ ನೋಡಿ,” ಎಂದು ಹೇಳೀದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಇಸ್ರೇಲಿನ ರಾಜನು ಪತ್ರವನ್ನು ಓದಿದಾಗ, ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು, “ನಾನು ದೇವರೇನು? ಇಲ್ಲ! ಹುಟ್ಟು ಮತ್ತು ಸಾವುಗಳ ಮೇಲೆ ನನಗೆ ಯಾವ ಶಕ್ತಿಯೂ ಇಲ್ಲ. ಹೀಗಿರುವಾಗ ಅರಾಮ್ಯರ ರಾಜನು ಕುಷ್ಠರೋಗಪೀಡಿತನಾದ ಮನುಷ್ಯನನ್ನು ನನ್ನ ಬಳಿಗೆ ಗುಣಪಡಿಸಲು ಏಕೆ ಕಳುಹಿಸಿದನು? ಇದರ ಬಗ್ಗೆ ನೀವೇ ಯೋಚಿಸಿರಿ. ಇದು ಒಂದು ಕುತಂತ್ರವೆಂಬುದು ನಿಮಗೇ ತಿಳಿಯುತ್ತದೆ. ಅರಾಮ್ಯರ ರಾಜನು ಯುದ್ಧವನ್ನು ಆರಂಭಿಸಲು ಪ್ರಯತ್ನಿಸುತ್ತಿದ್ದಾನೆ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಇಸ್ರಾಯೇಲಿನ ಅರಸನು ಆ ಪತ್ರವನ್ನು ಓದಿದ ಮೇಲೆ ತನ್ನ ವಸ್ತ್ರಗಳನ್ನು ಹರಿದುಕೊಂಡು, “ಕೊಲ್ಲುವುದಕ್ಕೂ, ಬದುಕಿಸುವುದಕ್ಕೂ ನಾನು ದೇವರೋ? ಇವನ ಕುಷ್ಠರೋಗವನ್ನು ವಾಸಿ ಮಾಡುವುದಕ್ಕೆ ನನ್ನ ಬಳಿಗೆ ಕಳುಹಿಸಿದ್ದೇನು? ಇವನು ನನಗೆ ವಿರೋಧವಾಗಿ ಜಗಳಕ್ಕೆ ಕಾರಣ ಹುಡುಕುವುದನ್ನು ನೀವೇ ನೋಡಿರಿ,” ಎಂದನು. ಅಧ್ಯಾಯವನ್ನು ನೋಡಿ |