Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 5:9 - ಕನ್ನಡ ಸತ್ಯವೇದವು J.V. (BSI)

9 ನಾಮಾನನು ರಥರಥಾಶ್ವಗಳೊಡನೆ ಎಲೀಷನ ಮನೆಗೆ ಹೋಗಿ ಬಾಗಲಿನ ಮುಂದೆ ನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾಮಾನನು ರಥಾಶ್ವಗಳೊಡನೆ ಎಲೀಷನ ಮನೆಗೆ ಹೋಗಿ ಬಾಗಿಲಿನ ಮುಂದೆ ನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಾಮಾನನು ರಥರಥಾಶ್ವಗಳೊಡನೆ ಎಲೀಷನ ಮನೆಗೆ ಹೋಗಿ ಬಾಗಿಲಿನ ಮುಂದೆ ನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಾಮಾನನು ತನ್ನ ಕುದುರೆಗಳೊಂದಿಗೆ ಮತ್ತು ರಥಗಳೊಂದಿಗೆ ಎಲೀಷನ ಮನೆಗೆ ಬಂದು, ಬಾಗಿಲಿನ ಹೊರಗಡೆ ನಿಂತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಹಾಗೆಯೇ ನಾಮಾನನು ತನ್ನ ಕುದುರೆಗಳ ಸಂಗಡ, ತನ್ನ ರಥದ ಸಂಗಡ ಬಂದು, ಎಲೀಷನ ಮನೆಯ ಬಾಗಿಲ ಬಳಿಯಲ್ಲಿ ನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 5:9
7 ತಿಳಿವುಗಳ ಹೋಲಿಕೆ  

ನಿನ್ನನ್ನು ಕುಗ್ಗಿಸಿದವರ ಸಂತಾನದವರು ನಿನ್ನ ಬಳಿಗೆ ತಗ್ಗಿಬಗ್ಗಿ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರೂ ನಿನ್ನ ಕಾಲಕೆಳಗೆ ಅಡ್ಡಬಿದ್ದು ನೀನು ಯೆಹೋವನ ಪಟ್ಟಣ, ಇಸ್ರಾಯೇಲಿನ ಸದಮಲಸ್ವಾವಿುಯ ಚೀಯೋನ್ ಎಂದು ಕೊಂಡಾಡುವರು.


ಎಲೀಷನು ಊರಿನ ಹಿರಿಯರೊಡನೆ ತನ್ನ ಮನೆಯಲ್ಲಿ ಕೂತುಕೊಂಡಿದ್ದನು; ಅರಸನು ತನ್ನ ಹತ್ತಿರವಿದ್ದ ಒಬ್ಬ ಆಳನ್ನು ಕಳುಹಿಸಿದನು. ಅವನು ಇನ್ನೂ ದೂರದಲ್ಲಿರುವಾಗಲೇ ಎಲೀಷನು ಹಿರಿಯರಿಗೆ - ನೋಡಿರಿ, ಆ ಕೊಲೆಗಾರನ ಮಗನು ನನ್ನ ತಲೆಯನ್ನು ಹಾರಿಸುವದಕ್ಕೆ ಆಳನ್ನು ಕಳುಹಿಸಿದ್ದಾನೆ. ಆಳು ಇಲ್ಲಿಗೆ ಬಂದ ಕೂಡಲೆ ನೀವು ಬಾಗಲನ್ನು ಮುಚ್ಚಿ ಅವನು ಒಳಗೆ ಬಾರದಂತೆ ಅದನ್ನು ಒತ್ತಿಹಿಡಿಯಿರಿ; ಅವನ ಹಿಂದೆಯೇ ಬರುತ್ತಿರುವ ಅವನೊಡೆಯನ ಕಾಲು ಸಪ್ಪಳವು ಕೇಳಿಸುತ್ತದಲ್ಲಾ ಎಂದು ಹೇಳಿದನು.


ಯೆಹೋಷಾಫಾಟನು - ಅವನು ಹೇಗೂ ಯೆಹೋವನ ಉತ್ತರವನ್ನು ತಿಳಿಸುವನು ಅಂದದರಿಂದ ಇಸ್ರಾಯೇಲ್ ಎದೋಮ್ ರಾಜ್ಯಗಳ ಅರಸರು ಯೆಹೋಷಾಫಾಟನೊಡನೆ ಎಲೀಷನ ಬಳಿಗೆ ಹೋದರು.


ಇಸ್ರಾಯೇಲ್ಯರ ಅರಸನು ತನ್ನ ಬಟ್ಟೆಗಳನ್ನು ಹರಿದುಕೊಂಡನೆಂಬದನ್ನು ದೇವರ ಮನುಷ್ಯನಾದ ಎಲೀಷನು ಕೇಳಿ ದೂತರ ಮುಖಾಂತರವಾಗಿ ಅವನಿಗೆ - ನೀನು ನಿನ್ನ ಬಟ್ಟೆಗಳನ್ನು ಹರಿದುಕೊಂಡದ್ದೇಕೆ? ಅವನನ್ನು ನನ್ನ ಬಳಿಗೆ ಕಳುಹಿಸು; ಇಸ್ರಾಯೇಲ್ಯರಲ್ಲಿ ಒಬ್ಬ ಪ್ರವಾದಿಯಿದ್ದಾನೆಂಬದು ಅವನಿಗೆ ಗೊತ್ತಾಗಲಿ ಎಂದು ಹೇಳಿ ಕಳುಹಿಸಿದನು.


ಎಲೀಷನು ಅವನಿಗೆ - ಹೋಗಿ ಯೊರ್ದನ್ ಹೊಳೆಯಲ್ಲಿ ಏಳು ಸಾರಿ ಸ್ನಾನಮಾಡು; ಆಗ ನಿನ್ನ ದೇಹವು ಮುಂಚಿನಂತಾಗುವದು; ನೀನು ಶುದ್ಧನಾಗುವಿ ಎಂದು ಹೇಳಿಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು