Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 6:25 - ಕನ್ನಡ ಸತ್ಯವೇದವು J.V. (BSI)

25 ಆಗ ಸಮಾರ್ಯ ಪಟ್ಟಣದಲ್ಲಿ ಘೋರವಾದ ಬರವಿದ್ದಿತು. ಮುತ್ತಿಗೆಯ ದೆಸೆಯಿಂದ ಅದು ಮತ್ತಷ್ಟು ಘೋರವಾಗಿ ಕತ್ತೆಯ ತಲೆಯು ಎಂಭತ್ತು ರೂಪಾಯಿಗಳಿಗೂ ಅರೆಸೇರು ಪಾರಿವಾಳದ ಮಲವು ಐದು ರೂಪಾಯಿಗಳಿಗೂ ಮಾರಲ್ಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆಗ ಸಮಾರ್ಯ ಪಟ್ಟಣದಲ್ಲಿ ಘೋರವಾದ ಬರವಿದ್ದಿತು. ಮುತ್ತಿಗೆಯ ದೆಸೆಯಿಂದ ಅದು ಮತ್ತಷ್ಟು ಘೋರವಾಗಿದ್ದುದರಿಂದ ಒಂದು ಕತ್ತೆಯ ತಲೆಗೆ ಎಂಭತ್ತು ರೂಪಾಯಿಗಳೂ, ಅರ್ಧ ಸೇರು ಪಾರಿವಾಳದ ಮಲವು ಐದು ರೂಪಾಯಿಗಳಿಗೂ ಮಾರಲ್ಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆಗ ಸಮಾರಿಯ ಪಟ್ಟಣದಲ್ಲಿ ಘೋರ ಕ್ಷಾಮವಿತ್ತು. ಮುತ್ತಿಗೆಯ ನಿಮಿತ್ತ ಅದು ಮತ್ತಷ್ಟು ಘೋರವಾಗಿ ಒಂದು ಕತ್ತೆಯ ತಲೆಯನ್ನು ಒಂಬತ್ತು ಬೆಳ್ಳಿ ನಾಣ್ಯಗಳಿಗೂ, ಇನ್ನೂರು ಗ್ರಾಂ ಕಾಡು ಈರುಳ್ಳಿಯನ್ನು ಐದು ಬೆಳ್ಳಿ ನಾಣ್ಯಗಳಿಗೂ ಮಾರಲಾಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಜನರು ನಗರದೊಳಕ್ಕೆ ಆಹಾರವನ್ನು ತರಲು ಸೈನಿಕರು ಅವಕಾಶ ಕೊಡಲಿಲ್ಲ. ಆದ್ದರಿಂದ ಸಮಾರ್ಯದಲ್ಲಿ ಭೀಕರ ಬರಗಾಲವು ಆ ಕಾಲದಲ್ಲಾಯಿತು. ಸಮಾರ್ಯದಲ್ಲಿ ಒಂದು ಹೇಸರಕತ್ತೆಯ ತಲೆಯು ಎಂಭತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಾಟವಾಗುವಷ್ಟು ಕೆಟ್ಟ ಪರಿಸ್ಥಿತಿಯಿತ್ತು. ಅರ್ಧಸೇರು ಪಾರಿವಾಳದ ಮಲದ ಲದ್ದಿಯು ಐದು ಬೆಳ್ಳಿನಾಣ್ಯಗಳಿಗೆ ಮಾರಾಟವಾಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಗ ಸಮಾರ್ಯದಲ್ಲಿ ದೊಡ್ಡ ಬರವಿತ್ತು. ಒಂದು ಕತ್ತೆಯ ತಲೆಯು ಎಂಬತ್ತು ಶೆಕೆಲ್ ಬೆಳ್ಳಿಗೆ, ಸುಮಾರು ನೂರು ಗ್ರಾಂ ಪಾರಿವಾಳದ ಗೊಬ್ಬರವನ್ನು ಐದು ಶೆಕೆಲ್ ಬೆಳ್ಳಿಗೆ ಮಾರಲಾಗುವವರೆಗೂ ಅದನ್ನು ಮುತ್ತಿಗೆಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 6:25
14 ತಿಳಿವುಗಳ ಹೋಲಿಕೆ  

ಘೋರಕ್ಷಾಮದ ದೆಸೆಯಿಂದ ಪಟ್ಟಣದಲ್ಲಿರುವವರಿಗೆ ಆಹಾರ ಸಿಕ್ಕದೆಹೋಯಿತು. ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದ ಕಸ್ದೀಯರು ಹನ್ನೊಂದನೆಯ ವರುಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿವಸ


ನಾನು ಊರಹೊರಗೆ ಹೋದರೆ ಇಗೋ, ಖಡ್ಗದಿಂದ ಹತರಾದವರು; ಊರೊಳಗೆ ಬಂದರೆ ಇಗೋ, ಕ್ಷಾಮದಿಂದ ಕೊರಗುವವರು! ಪ್ರವಾದಿಗಳೂ ಯಾಜಕರೂ ತಮಗೆ ಗೊತ್ತಿಲ್ಲದ ದೇಶಕ್ಕೆ ಗಡೀಪಾರಾಗಿದ್ದಾರೆ.


ಇಗೋ, ಮುತ್ತಿಗೆಯ ದಿಬ್ಬಗಳು, ಪಟ್ಟಣವನ್ನು ಆಕ್ರವಿುಸುವದಕ್ಕೆ ಬಂದಿದ್ದಾರೆ; ಪಟ್ಟಣವು ಖಡ್ಗಕ್ಷಾಮವ್ಯಾಧಿಗಳಿಂದ ಕ್ಷೀಣವಾಗಿ ವಿರೋಧಿಗಳಾದ ಕಸ್ದೀಯರ ಕೈಗೆ ಸಿಕ್ಕಿದೆ; ನೀನು ನುಡಿದದ್ದು ನೆರವೇರಿದೆ, ಇಗೋ, ನೋಡುತ್ತಿದ್ದೀ.


ಘೋರಕ್ಷಾಮದ ದೆಸೆಯಿಂದ ಪಟ್ಟಣದಲ್ಲಿರುವವರಿಗೆ ಆಹಾರಸಿಕ್ಕದೆ ಹೋಯಿತು. ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದ ಕಸ್ದೀಯರು ಹನ್ನೊಂದನೆಯ ವರುಷದ ನಾಲ್ಕನೆಯ ತಿಂಗಳಿನ


ಪಟ್ಟಣದೊಳಗೆ ಬರವಿರುವದರಿಂದ ಅಲ್ಲಿ ಹೋದರೂ ಸಾಯಬೇಕು. ಇಲ್ಲಿಯೇ ಕೂತಿದ್ದರೂ ಸಾಯಬೇಕು. ಆದದರಿಂದ ಹೊರಟುಹೋಗಿ ಅರಾಮ್ಯರ ಪಾಳೆಯವನ್ನು ಸೇರೋಣ. ಅವರು ನಮ್ಮನ್ನು ಉಳಿಸುವದಾದರೆ ಉಳಿಸಲಿ, ಕೊಲ್ಲುವದಾದರೆ ಕೊಲ್ಲಲಿ ಎಂದು ಮಾತಾಡಿಕೊಂಡು


ಎಲೀಯನು ಅಹಾಬನನ್ನು ನೋಡುವದಕ್ಕೆ ಹೊರಟನು. ಆಗ ಸಮಾರ್ಯದಲ್ಲಿ ಬರವು ಬಹುಘೋರವಾಗಿದ್ದದರಿಂದ


ನಾನು ನಿಮ್ಮ ಜೀವನಾಧಾರವನ್ನು ತೆಗೆದುಬಿಟ್ಟಾಗ ಹತ್ತು ಮಂದಿ ಹೆಂಗಸರು ಒಂದೇ ಒಲೆಯಲ್ಲಿ ರೊಟ್ಟಿ ಸುಟ್ಟು ಅದನ್ನು ತೂಕದ ಪ್ರಕಾರ ಹಂಚಿಕೊಡುವರು; ನೀವು ಅದನ್ನು ಉಂಡಾಗ ತೃಪ್ತಿಹೊಂದುವದಿಲ್ಲ.


ಒಂದು ದಿವಸ ಇಸ್ರಾಯೇಲ್ಯರ ಅರಸನು ಪೌಳಿಗೋಡೆಯ ಮೇಲೆ ಹಾದುಹೋಗುತ್ತಿರುವಾಗ ಒಬ್ಬ ಸ್ತ್ರೀಯು - ಅರಸೇ, ನನ್ನ ಒಡೆಯನೇ, ನನ್ನನ್ನು ರಕ್ಷಿಸು ಎಂದು ಮೊರೆಯಿಟ್ಟಳು.


ಅರಸನು ರಾತ್ರಿಯಲ್ಲೇ ಎದ್ದು ತನ್ನ ಪರಿವಾರದವರಿಗೆ - ಅರಾಮ್ಯರ ಹಂಚಿಕೆಯನ್ನು ಹೇಳುತ್ತೇನೆ ಕೇಳಿರಿ; ನಾವು ಹಸಿವೆಯಿಂದ ಸಾಯುವವರಾಗಿದ್ದೇವೆಂಬದನ್ನು ಅವರು ಬಲ್ಲರು. ಆದದರಿಂದ ಪಾಳೆಯವನ್ನು ಬಿಟ್ಟು ಹೋಗಿ ಅಡವಿಯಲ್ಲಿ ಅಡಗಿಕೊಂಡಿದ್ದಾರೆ; ನಾವು ಪಟ್ಟಣದಿಂದ ಹೊರಗೆ ಹೋದ ಕೂಡಲೆ ನಮ್ಮನ್ನು ಸಜೀವಿಗಳನ್ನಾಗಿಯೇ ಹಿಡಿದು ಪಟ್ಟಣವನ್ನು ಪ್ರವೇಶಿಸಬೇಕೆಂದಿದ್ದಾರೆ ಅಂದನು.


ಐಗುಪ್ತದೇಶಕ್ಕೆಲ್ಲಾ ಬರಬಂದಾಗ ಪ್ರಜೆಗಳು ಆಹಾರಬೇಕೆಂದು ಫರೋಹನಿಗೆ ಮೊರೆಯಿಟ್ಟುಕೊಂಡರು. ಅವನು ಅವರಿಗೆ - ಯೋಸೇಫನ ಬಳಿಗೆ ಹೋಗಿರಿ, ಅವನ ಮಾತಿನ ಮೇರೆಗೆ ಮಾಡಿರಿ ಎಂದು ಹೇಳಿದನು.


ಅವರಲ್ಲಿ ಪ್ರತಿಯೊಬ್ಬರೂ ಅನ್ನನೀರಿನ ಕೊರತೆಗೊಳಪಟ್ಟು ಸ್ತಬ್ಧರಾಗಿ ತಮ್ಮ ಅಧರ್ಮದಿಂದ ಕ್ಷಯಿಸಿಹೋಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು