Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 6:3 - ಕನ್ನಡ ಸತ್ಯವೇದವು J.V. (BSI)

3 ದಯವಿಟ್ಟು ನೀನೂ ನಿನ್ನ ಸೇವಕರಾದ ನಮ್ಮ ಜೊತೆಯಲ್ಲಿ ಬರಬೇಕು ಎಂದು ಬೇಡಿಕೊಂಡನು. ಎಲೀಷನು - ಬರುತ್ತೇನೆ ಎಂದು ಹೇಳಿ ಅವರೊಡನೆ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರಲ್ಲೊಬ್ಬನು, “ದಯವಿಟ್ಟು ನೀನೂ, ನಿನ್ನ ಸೇವಕರು ನಮ್ಮ ಜೊತೆಯಲ್ಲಿ ಬರಬೇಕು” ಎಂದು ಬೇಡಿಕೊಂಡನು. ಅದಕ್ಕೆ ಎಲೀಷನು, “ಬರುತ್ತೇನೆ” ಎಂದು ಹೇಳಿ ಅವರೊಡನೆ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವರಲ್ಲೊಬ್ಬನು, “ದಯವಿಟ್ಟು ತಾವೂ ತಮ್ಮ ಸೇವಕರಾದ ನಮ್ಮ ಜೊತೆಯಲ್ಲಿ ಬರಬೇಕು,” ಎಂದು ಬೇಡಿಕೊಂಡನು. ಎಲೀಷನು, “ಬರುತ್ತೇನೆ,” ಎಂದು ಹೇಳಿ ಅವರೊಡನೆ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಒಬ್ಬ ವ್ಯಕ್ತಿಯು, “ದಯವಿಟ್ಟು ನಮ್ಮ ಜೊತೆಯಲ್ಲಿ ನೀನೂ ಬಾ” ಎಂದನು. ಎಲೀಷನು, “ಸರಿ, ನಾನೂ ನಿಮ್ಮ ಜೊತೆಯಲ್ಲಿ ಬರುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಅವರಲ್ಲಿ ಒಬ್ಬನು ಎಲೀಷನಿಗೆ, “ನೀವು ದಯಮಾಡಿ ನಿಮ್ಮ ಸೇವಕರ ಸಂಗಡ ಬರುವಿರಾ?” ಎಂದನು. ಅದಕ್ಕವನು, “ನಾನು ಬರುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 6:3
8 ತಿಳಿವುಗಳ ಹೋಲಿಕೆ  

ಈಗ ದಯಮಾಡಿ ನನ್ನನ್ನು ನೋಡಿರಿ, ನಿಮ್ಮ ಮುಖದೆದುರಿಗೆ ನಾನು ಸುಳ್ಳಾಡುವೆನೋ?


ನಾಮಾನನು - ಎರಡು ತಲಾಂತನ್ನಾದರೂ ತೆಗೆದುಕೊಳ್ಳಬಾರದೇ ಎಂದು ಅವನನ್ನು ಒತ್ತಾಯಪಡಿಸಿ ಅದನ್ನು ಎರಡು ಚೀಲಗಳಲ್ಲಿ ಹಾಕಿಸಿ ಆ ಚೀಲಗಳನ್ನೂ ಎರಡು ದುಸ್ತುಬಟ್ಟೆಗಳನ್ನೂ ಇಬ್ಬರು ಸೇವಕರ ಮೇಲೆ ಹೊರಿಸಿ ಅವರನ್ನು ಗೇಹಜಿಯ ಸಂಗಡ ಕಳುಹಿಸಿದನು. ಅವರು ಹೊತ್ತುಕೊಂಡು ಇವನ ಮುಂದೆ ನಡೆದರು.


ಅವರಿಬ್ಬರೂ ಕೂತು ಅನ್ನಪಾನಗಳನ್ನು ತೆಗೆದುಕೊಂಡರು. ಊಟವಾದ ಮೇಲೆ ಆ ಸ್ತ್ರೀಯ ತಂದೆಯು ತಿರಿಗಿ ಅವನಿಗೆ - ದಯವಿಟ್ಟು ಈ ಹೊತ್ತಿನ ರಾತ್ರಿ ಇಲ್ಲೇ ಇದ್ದು ಸಂತೋಷಪಡು ಎಂದು ಹೇಳಿದರೂ ಅವನು ಹೊರಡುವದಕ್ಕಿದ್ದನು;


ಬಾರಾಕನು ಆಕೆಗೆ - ನೀನು ನನ್ನ ಸಂಗಡ ಬರುವದಾದರೆ ಹೋಗುವೆನು; ಇಲ್ಲವಾದರೆ ಹೋಗುವದಿಲ್ಲ ಅನ್ನಲು


ಆದದರಿಂದ ನಾವು ಯೊರ್ದನಿಗೆ ಹೋಗಿ ಅಲ್ಲಿ ಪ್ರತಿಯೊಬ್ಬನೂ ಒಂದೊಂದು ತೊಲೆಯನ್ನು ಕಡಿದುಕೊಂಡು ಬಂದು ನಮಗೋಸ್ಕರ ಒಂದು ಮನೆಯನ್ನು ಮಾಡಿಕೊಳ್ಳೋಣ ಅಂದರು; ಅವನು ಅವರಿಗೆ ಹೋಗಬಹುದು ಎಂದು ಹೇಳಲು ಅವರಲ್ಲೊಬ್ಬನು -


ಅವರು ಯೊರ್ದನನ್ನು ಮುಟ್ಟಿ ಮರಗಳನ್ನು ಕಡಿಯುತ್ತಿರುವಾಗ


ಅದಕ್ಕೆ ಮೋಶೆ - ನೀನೇ ನಮ್ಮಸಂಗಡ ಬಾರದೆ ಹೋದರೆ ನಮ್ಮನ್ನು ಇಲ್ಲಿಂದ ಹೋಗಗೊಡಿಸಬಾರದು.


ಆದರೂ ಹುಡುಗನ ತಾಯಿ - ಯೆಹೋವನಾಣೆ, ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಟ್ಟು ಹೋಗುವದಿಲ್ಲ ಎಂದು ಹೇಳಿದ್ದರಿಂದ ಎಲೀಷನು ಆಕೆಯ ಜೊತೆಯಲ್ಲಿ ಹೊರಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು