2 ಅರಸುಗಳು 6:6 - ಕನ್ನಡ ಸತ್ಯವೇದವು J.V. (BSI)6 ದೇವರ ಮನುಷ್ಯನು ಅವನನ್ನು - ಅದು ಎಲ್ಲಿ ಬಿದ್ದಿತು ಎಂದು ಕೇಳಲು ಅದು ಬಿದ್ದ ಸ್ಥಳವನ್ನು ಅವನು ತೋರಿಸಿದನು. ಆಗ ದೇವರ ಮನುಷ್ಯನು ಮರದಿಂದ ಒಂದು ತುಂಡು ಕಟ್ಟಿಗೆಯನ್ನು ಕಡಿದು ಅಲ್ಲಿ ಹಾಕಿದನು; ಕೂಡಲೆ ಕೊಡಲಿಯು ತೇಲಾಡಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ದೇವರ ಮನುಷ್ಯನು ಅವನಿಗೆ, “ಅದು ಎಲ್ಲಿ ಬಿದ್ದಿತು?” ಎಂದು ಕೇಳಲು, ಅದು ಬಿದ್ದ ಸ್ಥಳವನ್ನು ಅವನು ತೋರಿಸಿದನು. ಆಗ ದೇವರ ಮನುಷ್ಯನು ಮರದಿಂದ ಒಂದು ತುಂಡು ಕಟ್ಟಿಗೆಯನ್ನು ಮುರಿದು ಅಲ್ಲಿ ಹಾಕಿದನು, ಕೂಡಲೆ ಕೊಡಲಿಯು ಮೇಲಕ್ಕೆ ಬಂದು ತೇಲಾಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ದೈವಪುರುಷನು, “ಅದು ಎಲ್ಲಿ ಬಿದ್ದಿತು?” ಎಂದು ಕೇಳಿದನು; ಅದು ಬಿದ್ದ ಸ್ಥಳವನ್ನು ಅವನು ತೋರಿಸಿದನು. ಆಗ ದೈವಪುರುಷನು ಆ ಮರದಿಂದ ಒಂದು ತುಂಡು ಕಟ್ಟಿಗೆಯನ್ನು ಕಡಿದು ಅಲ್ಲಿ ಹಾಕಿದನು; ಕೂಡಲೆ ಆ ಕೊಡಲಿ ತೇಲಾಡಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ದೇವಮನುಷ್ಯನು, “ಅದು ಎಲ್ಲಿ ಬಿದ್ದಿತು?” ಎಂದು ಕೇಳಿದನು. ಆ ಮನುಷ್ಯನು ಕೊಡಲಿಯು ಬಿದ್ದ ಸ್ಥಳವನ್ನು ಎಲೀಷನಿಗೆ ತೋರಿಸಿದನು. ಆಗ ಎಲೀಷನು ಒಂದು ಕಡ್ಡಿಯನ್ನು ಮುರಿದು ಅದನ್ನು ನೀರಿನೊಳಕ್ಕೆ ಎಸೆದನು. ಆ ಕಡ್ಡಿಯು ಕಬ್ಬಿಣದ ಕೊಡಲಿಯನ್ನು ತೇಲುವಂತೆ ಮಾಡಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ದೇವರ ಮನುಷ್ಯನು, “ಅದು ಎಲ್ಲಿ ಬಿತ್ತು?” ಎಂದನು. ಅವನು ಎಲೀಷನಿಗೆ ಸ್ಥಳವನ್ನು ತೋರಿಸಿದ ತರುವಾಯ, ಎಲೀಷನು ಒಂದು ಕಟ್ಟಿಗೆಯನ್ನು ಕಡಿದು ಅಲ್ಲಿ ಹಾಕಿದ್ದರಿಂದ ಆ ಕಬ್ಬಿಣವು ತೇಲಿತು. ಅಧ್ಯಾಯವನ್ನು ನೋಡಿ |