2 ಅರಸುಗಳು 7:1 - ಕನ್ನಡ ಸತ್ಯವೇದವು J.V. (BSI)1 ಆಗ ಎಲೀಷನು ಅವನಿಗೆ - ಯೆಹೋವನ ವಾಕ್ಯವನ್ನು ಕೇಳು; ಆತನು - ನಾಳೆ ಇಷ್ಟು ಹೊತ್ತಿಗೆ ಸಮಾರ್ಯ ಪಟ್ಟಣದ ಬಾಗಲಿನಲ್ಲಿ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಡುವವು ಅನ್ನುತ್ತಾನೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆಗ ಎಲೀಷನು ಅವನಿಗೆ, “ಯೆಹೋವನ ವಾಕ್ಯವನ್ನು ಕೇಳು, ಆತನು, ‘ನಾಳೆ ಈ ಹೊತ್ತಿಗೆ ಸಮಾರ್ಯ ಪಟ್ಟಣದ ಬಾಗಿಲಿನಲ್ಲಿ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ, ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಡುವುದು’” ಎನ್ನುತ್ತಾನೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಆಗ ಎಲೀಷನು, “ಸರ್ವೇಶ್ವರಸ್ವಾಮಿಯ ಈ ವಾಕ್ಯವನ್ನು ಕೇಳು: ‘ನಾಳೆ ಇಷ್ಟೇಹೊತ್ತಿಗೆ ಸಮಾರಿಯಪಟ್ಟಣದ ಬಾಗಿಲಿನಲ್ಲಿ ಗೋದಿಹಿಟ್ಟು ನಾಣ್ಯಕ್ಕೆ ಮೂರು ಕಿಲೋಗ್ರಾಂನಂತೆಯೂ ಜವೆಗೋದಿಯು ನಾಣ್ಯಕ್ಕೆ ಆರು ಕಿಲೋಗ್ರಾಂನಂತೆಯೂ ಮಾರಲಾಗುವುದು’ ಎನ್ನುತ್ತಾರೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಎಲೀಷನು ಅವನಿಗೆ, “ಯೆಹೋವನ ಸಂದೇಶವನ್ನು ಕೇಳು: ‘ನಾಳೆ ಇದೇ ಸಮಯಕ್ಕೆ, ಅಧಿಕವಾದ ಆಹಾರವು ಬಹಳ ಕಡಿಮೆ ಬೆಲೆಗೆ ಸಿಗುತ್ತದೆ. ಒಂದು ರೂಪಾಯಿಗೆ ಒಂದು ಬುಟ್ಟಿ ಹಿಟ್ಟನ್ನೂ ಎರಡು ಬುಟ್ಟಿ ಜವೆಗೋಧಿಯನ್ನೂ ಸಮಾರ್ಯನಗರದ ಊರ ಬಾಗಿಲಿನಲ್ಲಿರುವ ಮಾರುಕಟ್ಟೆಯಲ್ಲಿ ಮಾರಲಾಗುವುದು’” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆಗ ಎಲೀಷನು, “ನೀವು ಯೆಹೋವ ದೇವರ ವಾಕ್ಯವನ್ನು ಕೇಳಿರಿ. ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾಳೆ ಹೆಚ್ಚು ಕಡಿಮೆ ಇಷ್ಟು ಹೊತ್ತಿಗೆ ಸಮಾರ್ಯದ ಬಾಗಿಲಲ್ಲಿ ಮೂರು ಕಿಲೋಗ್ರಾಂ ನಯವಾದ ಗೋಧಿಹಿಟ್ಟು ಒಂದು ಬೆಳ್ಳಿ ನಾಣ್ಯಕ್ಕೆ ಮತ್ತು ಆರು ಕಿಲೋಗ್ರಾಂ ಜವೆಗೋಧಿ ಒಂದು ಬೆಳ್ಳಿ ನಾಣ್ಯಕ್ಕೆ ಮಾರಲಾಗುವುದು,” ಎಂದನು. ಅಧ್ಯಾಯವನ್ನು ನೋಡಿ |