Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 7:10 - ಕನ್ನಡ ಸತ್ಯವೇದವು J.V. (BSI)

10 ಅಲ್ಲಿಂದ ಹೊರಟು ಊರುಬಾಗಲಿಗೆ ಬಂದು ಕಾಯುವವರಿಗೆ - ನಾವು ಅರಾಮ್ಯರ ಪಾಳೆಯಕ್ಕೆ ಹೋಗಿದ್ದೆವು. ಅಲ್ಲಿ ನಮಗೆ ಯಾರೂ ಕಾಣಿಸಲಿಲ್ಲ, ಮನುಷ್ಯ ಶಬ್ದವೇ ಕೇಳಿಸಲಿಲ್ಲ. ಕತ್ತೆಕುದುರೆಗಳು ಅಲ್ಲಲ್ಲಿ ಕಟ್ಟಲ್ಪಟ್ಟಿರುತ್ತವೆ, ಡೇರೆಗಳು ಇದ್ದ ಹಾಗೆಯೇ ಇರುತ್ತವೆ ಎಂದು ಕೂಗಿ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಊರಬಾಗಿಲಿಗೆ ಬಂದು ಕಾವಲುಗಾರರಿಗೆ, “ನಾವು ಅರಾಮ್ಯರ ಪಾಳೆಯಕ್ಕೆ ಹೋಗಿದ್ದೆವು. ಅಲ್ಲಿ ನಮಗೆ ಯಾರೂ ಕಾಣಿಸಲಿಲ್ಲ, ಮನುಷ್ಯರ ಶಬ್ದವೇ ಕೇಳಿಸಲಿಲ್ಲ. ಕತ್ತೆ ಕುದುರೆಗಳನ್ನು ಅಲ್ಲಲ್ಲಿ ಕಟ್ಟಿಹಾಕಲಾಗಿತ್ತು ಡೇರೆಗಳು ಇದ್ದ ಹಾಗೆಯೇ ಇವೆ” ಎಂದು ಕೂಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅಲ್ಲಿಂದ ಹೊರಟು ಊರಬಾಗಿಲಿಗೆ ಬಂದು, ಕಾವಲುಗಾರರಿಗೆ, “ನಾವು ಸಿರಿಯಾದವರ ಪಾಳೆಯಕ್ಕೆ ಹೋಗಿದ್ದೆವು; ಅಲ್ಲಿ ನಮಗೆ ಯಾರೂ ಕಾಣಿಸಲಿಲ್ಲ, ಮನುಷ್ಯಶಬ್ದವೇ ಕೇಳಿಸಲಿಲ್ಲ. ಕತ್ತೆಕುದುರೆಗಳನ್ನು ಅಲ್ಲಲ್ಲಿ ಕಟ್ಟಲಾಗಿದೆ. ಡೇರೆಗಳು ಇದ್ದ ಹಾಗೆಯೇ ಇರುತ್ತವೆ,” ಎಂದು ಕೂಗಿ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಈ ಕುಷ್ಠರೋಗಿಗಳು ನಗರದ ಬಾಗಿಲಿಗೆ ಬಂದು ದ್ವಾರಪಾಲಕರನ್ನು ಕರೆದು, “ನಾವು ಅರಾಮ್ಯರ ಪಾಳೆಯಕ್ಕೆ ಹೋಗಿದ್ದೆವು. ಆದರೆ ನಾವು ಜನರ ಧ್ವನಿಯನ್ನು ಕೇಳಲೇ ಇಲ್ಲ. ಅಲ್ಲಿ ಜನರ ಸುಳಿವಿಲ್ಲ. ಕುದುರೆಗಳು ಮತ್ತು ಹೇಸರಕತ್ತೆಗಳು ಕಟ್ಟಿಹಾಕಿದಂತೆಯೇ ಇವೆ. ಗುಡಾರಗಳಿನ್ನೂ ಯಥಾಸ್ಥಿತಿಯಲ್ಲಿವೆ. ಆದರೆ ಸೈನಿಕರೆಲ್ಲರೂ ಹೊರಟುಹೋಗಿದ್ದಾರೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಹಾಗೆಯೇ ಅವರು ಬಂದು ಪಟ್ಟಣದ ಬಾಗಿಲು ಕಾಯುವವನನ್ನು ಕರೆದು ಅವನಿಗೆ, “ನಾವು ಅರಾಮ್ಯರ ಪಾಳೆಯಕ್ಕೆ ಹೋಗಿ ಬಂದೆವು, ಅಲ್ಲಿ ಯಾರೂ ಕಾಣಿಸಲಿಲ್ಲ, ಮನುಷ್ಯರ ಶಬ್ದವೇ ಕೇಳಿಸಲಿಲ್ಲ. ಕತ್ತೆ ಕುದುರೆಗಳನ್ನು ಅಲ್ಲಲ್ಲಿ ಕಟ್ಟಿಹಾಕಲಾಗಿತ್ತು ಡೇರೆಗಳು ಇದ್ದ ಹಾಗೆಯೇ ಇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 7:10
9 ತಿಳಿವುಗಳ ಹೋಲಿಕೆ  

ಯೆಹೋವನು ಮನೇ ಕಟ್ಟದಿದ್ದರೆ ಅದನ್ನು ಕಟ್ಟುವವರು ಕಷ್ಟಪಡುವದು ವ್ಯರ್ಥ; ಯೆಹೋವನು ಪಟ್ಟಣವನ್ನು ಕಾಯದಿದ್ದರೆ ಕಾವಲುಗಾರರು ಅದನ್ನು ಕಾಯುವದು ವ್ಯರ್ಥ.


ಬಾಗಲು ಕಾಯುವವರು ಕೂಡಲೆ ಅರಮನೆಯವರನ್ನು ಕೂಗಿ ಅವರಿಗೆ ಈ ವರ್ತಮಾನವನ್ನು ಮುಟ್ಟಿಸಿದರು.


ಅಷ್ಟರಲ್ಲಿ ಕಾವಲುಗಾರನು ಓಡುತ್ತಾ ಬರುವ ಇನ್ನೊಬ್ಬನನ್ನು ಕಂಡು ದ್ವಾರಪಾಲಕನ ಮುಖಾಂತರ - ಇಗೋ, ಇನ್ನೊಬ್ಬನು ಒಂಟಿಗನಾಗಿ ಬರುತ್ತಿದ್ದಾನೆ ಎಂದು ಅರಸನಿಗೆ ತಿಳಿಸಿದನು. ಅರಸನು - ಹಾಗಾದರೆ ಅವನೂ ಸಮಾಚಾರ ತರುವವನು ಎಂದು ಹೇಳಿದನು.


ಅನಂತರ ಅವರು - ಇದು ಶುಭವಾರ್ತೆಯ ದಿವಸವಾಗಿದೆ; ನಾವು ಇದನ್ನು ಪ್ರಕಟಿಸದಿರುವದು ಒಳ್ಳೇದಲ್ಲ. ಬೆಳಗಾಗುವವರೆಗೆ ತಡಮಾಡಿದರೆ ಶಿಕ್ಷೆಗೆ ಪಾತ್ರರಾದೇವು. ಆದದರಿಂದ ಹೋಗಿ ಅರಮನೆಯವರಿಗೆ ಈ ಸಂಗತಿಯನ್ನು ತಿಳಿಸೋಣ ಎಂದು ಮಾತಾಡಿಕೊಂಡು


ತಮ್ಮ ಸಹೋದರರೊಳಗೆ ಎರಡನೆಯ ತರಗತಿಯವರಾದ ಜೆಕರ್ಯ, ಬೇನ್, ಯಾಜೀಯೇಲ್, ಶೆಮೀರಾಮೋತ್, ಯೆಹೀಯೇಲ್, ಉನ್ನೀ, ಎಲೀಯಾಬ್, ಬೆನಾಯ, ಮಾಸೇಯ, ಮತ್ತಿತ್ಯ, ಎಲೀಫೆಲೇಹು, ವಿುಕ್ನೇಯ, ದ್ವಾರಪಾಲಕರಾದ ಓಬೇದೆದೋಮ್ ಯೆಗೀಯೇಲರು ಇವರನ್ನು ನೇವಿುಸಿದರು.


ಬಾಗಲುಕಾಯುವದಕ್ಕೋಸ್ಕರ ಯೆದುತೂನನ ಮಗನಾದ ಓಬೇದೆದೋಮ್ ಹೋಸ ಇವರನ್ನೂ ಇವರ ಅರುವತ್ತೆಂಟು ಮಂದಿ ಸಹೋದರರನ್ನೂ ಅಲ್ಲೇ ಇರಿಸಿದನು.


ಯಾವ ವಿಷಯದಲ್ಲಾದರೂ ಅಶುದ್ಧನಾದವನು ಯೆಹೋವನ ಆಲಯದಲ್ಲಿ ಸೇರದಂತೆ ಯೆಹೋಯಾದನು ಆಯಾ ಬಾಗಲುಗಳಲ್ಲಿ ದ್ವಾರಪಾಲಕರನ್ನಿರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು