Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 7:13 - ಕನ್ನಡ ಸತ್ಯವೇದವು J.V. (BSI)

13 ಆಗ ಅವರಲ್ಲೊಬ್ಬನು ಅರಸನಿಗೆ - ರಾಹುತರು ಪಟ್ಟಣದಲ್ಲುಳಿದಿರುವ ಕುದುರೆಗಳಲ್ಲಿ ನಾಲ್ಕೈದು ಕುದುರೆಗಳನ್ನು ತೆಗೆದುಕೊಂಡು ನೋಡುವದಕ್ಕೆ ಹೋಗಲಿ; ಅವರಿಗೆ ಪಟ್ಟಣದಲ್ಲುಳಿದಿರುವ ಇಸ್ರಾಯೇಲ್ಯರ ಗತಿಯಾಗಲಿ ಸತ್ತುಹೋದವರ ಗತಿಯಾಗಲಿ ಸಂಭವಿಸುವದಷ್ಟೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ಅವರಲ್ಲೊಬ್ಬನು ಅರಸನಿಗೆ, “ರಾಹುತರು ಪಟ್ಟಣದಲ್ಲಿ ಉಳಿದಿರುವ ಕುದುರೆಗಳಲ್ಲಿ ನಾಲ್ಕೈದು ಕುದುರೆಗಳನ್ನು ತೆಗೆದುಕೊಂಡು ನೋಡುವುದಕ್ಕೆ ಹೋಗಲಿ; ಅವರಿಗೆ ಪಟ್ಟಣದಲ್ಲಿ ಉಳಿದಿರುವ ಇಸ್ರಾಯೇಲರ ಗತಿಯಾಗಲಿ, ಸತ್ತುಹೋದವರ ಗತಿಯಾಗಲಿ, ಸಂಭವಿಸುವುದಷ್ಟೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಗ ಅವರಲ್ಲೊಬ್ಬನು ಅರಸನಿಗೆ, “ರಾಹುತರು ಪಟ್ಟಣದಲ್ಲುಳಿದಿರುವ ಕುದುರೆಗಳಲ್ಲಿ ನಾಲ್ಕೈದು ಕುದುರೆಗಳನ್ನು ತೆಗೆದುಕೊಂಡು ನೋಡುವುದಕ್ಕೆ ಹೋಗಲಿ; ಅವರಿಗೆ ಪಟ್ಟಣದಲ್ಲಿ ಉಳಿದಿರುವ ಇಸ್ರಯೇಲರ ಗತಿಯಾಗಲಿ ಅಥವಾ ಸತ್ತುಹೋದವರ ಗತಿಯಾಗಲಿ ಸಂಬವಿಸುವದಷ್ಟೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ರಾಜನ ಅಧಿಕಾರಿಗಳಲ್ಲಿ ಒಬ್ಬನು, “ನಮ್ಮಲ್ಲಿ ಕೆಲವರು ನಗರದಲ್ಲಿ ಉಳಿದಿರುವ ಐದು ಕುದುರೆಗಳನ್ನು ತೆಗೆದುಕೊಳ್ಳೋಣ. ನಗರದಲ್ಲಿ ಉಳಿದಿರುವ ಇಸ್ರೇಲಿನ ಜನರಂತೆ ಹೇಗಾದರೂ ಈ ಕುದುರೆಗಳೂ ಬಹುಬೇಗ ಸತ್ತುಹೋಗುತ್ತವೆ. ಈ ಜನರನ್ನು ಕಳುಹಿಸಿ ಅಲ್ಲಿ ಏನು ನಡೆದಿದೆಯೆಂಬುದನ್ನು ನಾವು ತಿಳಿದುಕೊಳ್ಳೋಣ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ಅವನ ಸೇವಕರಲ್ಲಿ ಒಬ್ಬನು ಉತ್ತರವಾಗಿ, “ಪಟ್ಟಣದಲ್ಲಿ ಉಳಿದಿರುವ ಕುದುರೆಗಳಲ್ಲಿ ಐದು ಕುದುರೆಗಳನ್ನು ಕೆಲವರು ತೆಗೆದುಕೊಂಡು ಹೋಗಲಿ. ಅವು ಇಸ್ರಾಯೇಲಿನ ಸಮಸ್ತ ಸಮೂಹದಲ್ಲಿ ಉಳಿದವುಗಳ ಹಾಗೆ ಇವೆ. ಅಂದರೆ ಇಸ್ರಾಯೇಲಿನ ಸಮಸ್ತ ಗುಂಪಿನಲ್ಲಿ ನಾಶವಾಗದೆ ಉಳಿದವುಗಳಂತಿವೆ, ನಾವು ಕಳುಹಿಸಿ ನೋಡೋಣ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 7:13
7 ತಿಳಿವುಗಳ ಹೋಲಿಕೆ  

ಹಸಿವೆಯಿಂದ ಹತರಾದವರ ಗತಿಗಿಂತಲೂ ಖಡ್ಗದಿಂದ ಹತರಾದವರ ಗತಿಯೇ ಲೇಸು; ಭೂಫಲಗಳಿಲ್ಲದೆ ಕ್ಷಾಮದ ಪೆಟ್ಟನ್ನು ತಿಂದವರು ಕ್ಷಯಿಸುತ್ತಾ ಬರುತ್ತಾರಲ್ಲಾ.


ನಾನು ಊರಹೊರಗೆ ಹೋದರೆ ಇಗೋ, ಖಡ್ಗದಿಂದ ಹತರಾದವರು; ಊರೊಳಗೆ ಬಂದರೆ ಇಗೋ, ಕ್ಷಾಮದಿಂದ ಕೊರಗುವವರು! ಪ್ರವಾದಿಗಳೂ ಯಾಜಕರೂ ತಮಗೆ ಗೊತ್ತಿಲ್ಲದ ದೇಶಕ್ಕೆ ಗಡೀಪಾರಾಗಿದ್ದಾರೆ.


ಪಟ್ಟಣದೊಳಗೆ ಬರವಿರುವದರಿಂದ ಅಲ್ಲಿ ಹೋದರೂ ಸಾಯಬೇಕು. ಇಲ್ಲಿಯೇ ಕೂತಿದ್ದರೂ ಸಾಯಬೇಕು. ಆದದರಿಂದ ಹೊರಟುಹೋಗಿ ಅರಾಮ್ಯರ ಪಾಳೆಯವನ್ನು ಸೇರೋಣ. ಅವರು ನಮ್ಮನ್ನು ಉಳಿಸುವದಾದರೆ ಉಳಿಸಲಿ, ಕೊಲ್ಲುವದಾದರೆ ಕೊಲ್ಲಲಿ ಎಂದು ಮಾತಾಡಿಕೊಂಡು


ಅವನು ಅವರೊಡನೆ ಮಾತಾಡುತ್ತಿರುವಾಗಲೇ ಆಳೂ [ಅವನ ಹಿಂದಿನಿಂದ ಅರಸನೂ] ಅಲ್ಲಿಗೆ ಬಂದರು. ಅರಸನು ಎಲೀಷನಿಗೆ - ನೋಡು, ಈ ಆಪತ್ತು ಯೆಹೋವನಿಂದಲೇ ಬಂದದ್ದು. ಇನ್ನು ಮುಂದೆ ನಾನೇಕೆ ಆತನನ್ನು ನಿರೀಕ್ಷಿಸಿಕೊಂಡಿರಬೇಕು ಅಂದನು.


ಆಗ ಅವನ ಸೇವಕರು ಹತ್ತಿರ ಬಂದು ಅವನಿಗೆ - ಅಪ್ಪನವರೇ, ಪ್ರವಾದಿಯು ಒಂದು ಕಠಿಣವಾದ ಕೆಲಸವನ್ನು ಹೇಳಿದ್ದರೆ ಅದನ್ನು ಮಾಡುತ್ತಿದ್ದಿರಲ್ಲಾ; ಹಾಗಾದರೆ ಸ್ನಾನಮಾಡಿ ಶುದ್ಧನಾಗು ಎಂದು ಹೇಳಿದರೆ ಯಾಕೆ ಅದರಂತೆ ಮಾಡಬಾರದು ಅಂದರು.


ಅರಸನು ರಾತ್ರಿಯಲ್ಲೇ ಎದ್ದು ತನ್ನ ಪರಿವಾರದವರಿಗೆ - ಅರಾಮ್ಯರ ಹಂಚಿಕೆಯನ್ನು ಹೇಳುತ್ತೇನೆ ಕೇಳಿರಿ; ನಾವು ಹಸಿವೆಯಿಂದ ಸಾಯುವವರಾಗಿದ್ದೇವೆಂಬದನ್ನು ಅವರು ಬಲ್ಲರು. ಆದದರಿಂದ ಪಾಳೆಯವನ್ನು ಬಿಟ್ಟು ಹೋಗಿ ಅಡವಿಯಲ್ಲಿ ಅಡಗಿಕೊಂಡಿದ್ದಾರೆ; ನಾವು ಪಟ್ಟಣದಿಂದ ಹೊರಗೆ ಹೋದ ಕೂಡಲೆ ನಮ್ಮನ್ನು ಸಜೀವಿಗಳನ್ನಾಗಿಯೇ ಹಿಡಿದು ಪಟ್ಟಣವನ್ನು ಪ್ರವೇಶಿಸಬೇಕೆಂದಿದ್ದಾರೆ ಅಂದನು.


ಕೂಡಲೆ ಅರಸನು ಎರಡು ಜೋಡಿ ಕುದುರೆಗಳನ್ನು ತರಿಸಿ ಅರಾಮ್ಯರ ಸೈನ್ಯವೆಲ್ಲಿರುತ್ತದೆಂಬದನ್ನು ನೋಡಿ ಬರುವದಕ್ಕಾಗಿ ರಾಹುತರನ್ನು ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು