Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 7:16 - ಕನ್ನಡ ಸತ್ಯವೇದವು J.V. (BSI)

16 ಆಗ ಜನರು ಹೊರಗೆ ಹೋಗಿ ಅರಾಮ್ಯರ ಪಾಳೆಯವನ್ನು ಸೂರೆಮಾಡಿಬಿಟ್ಟರು. ಯೆಹೋವನ ಮಾತಿನಂತೆ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಗ ಜನರು ಹೊರಗೆ ಹೋಗಿ ಅರಾಮ್ಯರ ಪಾಳೆಯವನ್ನು ಸೂರೆಮಾಡಿಬಿಟ್ಟರು. ಯೆಹೋವನ ಮಾತಿನಂತೆ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ, ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆಗ ಜನರು ಹೊರಗೆ ಹೋಗಿ, ಸಿರಿಯಾದವರ ಪಾಳೆಯವನ್ನು ಸೂರೆಮಾಡಿಬಿಟ್ಟರು. ಸರ್ವೇಶ್ವರನ ಮಾತಿನಂತೆ ಗೋದಿಹಿಟ್ಟು ನಾಣ್ಯಕ್ಕೆ ಮೂರು ಕಿಲೋಗ್ರಾಂನಂತೆಯೂ ಜವೆಗೋದಿಯು ನಾಣ್ಯಕ್ಕೆ ಆರು ಕಿಲೋಗ್ರಾಂನಂತೆಯೂ ಮಾರಲಾಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆಗ ಜನರು ಅರಾಮ್ಯರ ಪಾಳೆಯಕ್ಕೆ ಓಡುತ್ತಾ ಹೋಗಿ, ಅಲ್ಲಿನ ಬೆಲೆಬಾಳುವ ವಸ್ತುಗಳನ್ನು ತೆಗೆದುಕೊಂಡರು. ಪ್ರತಿಯೊಬ್ಬರಿಗೂ ಹೇರಳವಾಗಿ ದೊರೆಯಿತು. ಯೆಹೋವನು ಹೇಳಿದಂತೆಯೇ ಇದಾಯಿತು. ಒಬ್ಬನು ಉತ್ತಮವಾದ ಒಂದು ಬುಟ್ಟಿ ಹಿಟ್ಟನ್ನು ಮತ್ತು ಎರಡು ಬುಟ್ಟಿ ಜವೆಗೋಧಿಯನ್ನು ಕೇವಲ ಒಂದು ರೂಪಾಯಿಗೆ ಕೊಳ್ಳಬಹುದಾಗಿತ್ತು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ಜನರು ಹೊರಟುಹೋಗಿ ಅರಾಮ್ಯರ ಡೇರೆಗಳನ್ನು ಸುಲಿದುಕೊಂಡರು. ಆದ್ದರಿಂದ ಯೆಹೋವ ದೇವರ ವಾಕ್ಯದ ಪ್ರಕಾರವೇ ಮೂರು ಕಿಲೋಗ್ರಾಂ ನಯವಾದ ಗೋಧಿಹಿಟ್ಟು ಒಂದು ಬೆಳ್ಳಿ ನಾಣ್ಯಕ್ಕೂ, ಆರು ಕಿಲೋಗ್ರಾಂ ಜವೆಗೋಧಿಯು ಒಂದು ಬೆಳ್ಳಿ ನಾಣ್ಯಕ್ಕೂ ಮಾರಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 7:16
14 ತಿಳಿವುಗಳ ಹೋಲಿಕೆ  

ಆಗ ಎಲೀಷನು ಅವನಿಗೆ - ಯೆಹೋವನ ವಾಕ್ಯವನ್ನು ಕೇಳು; ಆತನು - ನಾಳೆ ಇಷ್ಟು ಹೊತ್ತಿಗೆ ಸಮಾರ್ಯ ಪಟ್ಟಣದ ಬಾಗಲಿನಲ್ಲಿ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಡುವವು ಅನ್ನುತ್ತಾನೆ ಎಂದು ಹೇಳಿದನು.


ನಿನ್ನ ಹಗ್ಗಗಳು ಸಡಲಿ ಸ್ತಂಭದ ಪಾದವನ್ನು ಸ್ಥಿರಪಡಿಸಿಕೊಳ್ಳಲಾರದೆ ಹೋದವು, ಪಠವನ್ನು ಮುದುರದಂತೆ ಹಿಡಿದಿರಲಿಕ್ಕೂ ಆಗಲಿಲ್ಲ; ಆಗ ದೊಡ್ಡ ಸೂರೆಯು ಕೊಳ್ಳೆಯಾಗಿ ಹಂಚುವದಕ್ಕೆ ಆಸ್ಪದವಾಯಿತು. ಕುಂಟರೂ ಸುಲಿಗೆಮಾಡಿದರು.


ನೀವು ಕೊಳ್ಳೆಹೊಡೆದದ್ದನ್ನು ಇತರರು ವಿುಡತೆಗಳಂತೆ ಕೊಳ್ಳೆಮಾಡುವರು; ಶಲಭಗಳಂತೆ ಅದರ ಮೇಲೆ ಹಾರಿಬೀಳುವರು;


ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ.


ನನ್ನ ಸೇವಕನ ಮಾತನ್ನು ಸ್ಥಾಪಿಸಿ ನನ್ನ ದೂತರ ಮಂತ್ರಾಲೋಚನೆಯನ್ನು ನೆರವೇರಿಸುವವನಾಗಿದ್ದೇನೆ; ಯೆರೂಸಲೇಮು ಜನನಿವಾಸವಾಗುವದು, ಯೆಹೂದದ ಪಟ್ಟಣಗಳು ತಿರಿಗಿ ಕಟ್ಟಲ್ಪಡುವವು, ಅಲ್ಲಿನ ಹಾಳನ್ನು ಹಸನುಮಾಡುವೆನು ಎಂದು ನಾನು ಮುಂತಿಳಿಸಿ


ಸೂರೆಯಾಗದಿದ್ದರೂ ಸೂರೆಮಾಡಿದಿ, ಬಾಧೆಪಡದಿದ್ದರೂ ಬಾಧಿಸಿದಿ; ನಿನ್ನ ಗತಿಯನ್ನು ಏನು ಹೇಳಲಿ; ನೀನು ಸೂರೆಮಾಡಿ ಬಿಟ್ಟ ಮೇಲೆ ನೀನೂ ಸೂರೆಯಾಗುವಿ! ಬಾಧಿಸಿ ಬಿಟ್ಟ ಮೇಲೆ ನಿನ್ನನ್ನೂ ಬಾಧಿಸುವರು.


ಓಡಿ ಹೋಗುತ್ತಾರೆ; ಸೈನ್ಯದೊಡನೆ ಅರಸುಗಳು ಓಡಿ ಹೋಗುತ್ತಾರೆ; ಮನೆಯಲ್ಲಿದ್ದ ಸ್ತ್ರೀಯರು ಕೊಳ್ಳೆಯನ್ನು ಹಂಚುತ್ತಾರೆ.


ಯೆಹೋಷಾಫಾಟನೂ ಅವನ ಜನರೂ ಸುಲಿಗೆಮಾಡುವದಕ್ಕೋಸ್ಕರ ಅಲ್ಲಿಗೆ ಹೋಗಲು ಅವರಿಗೆ ದ್ರವ್ಯ ವಸ್ತ್ರ ಶ್ರೇಷ್ಠಾಯುಧ ಇವುಗಳು ರಾಶಿರಾಶಿಯಾಗಿ ಸಿಕ್ಕಿದವು. ಅವರು ಹೊರಲಾರದಷ್ಟು ಸುಲುಕೊಂಡರು. ಕೊಳ್ಳೆಯು ಬಲುಹೆಚ್ಚಾಗಿದ್ದದರಿಂದ ಅವರು ಮೂರು ದಿನಗಳವರೆಗೂ ಕೂಡಿಸುತ್ತಿದ್ದರು.


ಅನಂತರ ಇಸ್ರಾಯೇಲ್ಯರು ಹಿಂದಿರುಗಿ ಬಂದು ಫಿಲಿಷ್ಟಿಯರ ಪಾಳೆಯವನ್ನು ಸೂರೆಮಾಡಿದರು.


ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ; ಮಾನವನಂತೆ ಮನಸ್ಸನ್ನು ಬೇರೆ ಮಾಡಿಕೊಳ್ಳುವವನಲ್ಲ. ತಾನು ಹೇಳಿದ ಮೇರೆಗೆ ನಡೆಯುವದಿಲ್ಲವೋ; ಮಾತು ಕೊಟ್ಟನಂತರ ನೆರವೇರಿಸುವದಿಲ್ಲವೋ.


ಅವರು ಯೊರ್ದನ್‍ಹೊಳೆಯವರೆಗೂ ಹೋಗಿ ಅವಸರದಿಂದ ಓಡಿಹೋದ ಅರಾಮ್ಯರು ದಾರಿಯಲ್ಲೆಲ್ಲಾ ತಮ್ಮ ಬಟ್ಟೆಗಳನ್ನೂ ಸಾಮಾನುಗಳನ್ನೂ ಬಿಸಾಡಿದ್ದನ್ನು ಕಂಡು ಹಿಂದಿರುಗಿ ಬಂದು ಅರಸನಿಗೆ ತಿಳಿಸಿದರು.


ನೀವು ಕುರಿಹಟ್ಟಿಗಳಲ್ಲಿ ಮಲಗಿಕೊಂಡಿರುವದೇನು? ಪಾರಿವಾಳದ ರೆಕ್ಕೆಗಳು ಬೆಳ್ಳಿಯಿಂದಲೂ ಅದರ ಗರಿಗಳು ಬಂಗಾರದಿಂದಲೂ ಥಳಥಳಿಸುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು