18 ಅವನು ಅರಸನಿಗೆ - ನಾಳೆ ಇಷ್ಟು ಹೊತ್ತಿಗೆ ಸಮಾರ್ಯ ಪಟ್ಟಣದ ಬಾಗಲಿನಲ್ಲಿ ಜವೆಗೋದಿಯು ರೂಪಾಯಿಗೆ ಇಪ್ಪತ್ತನಾಲ್ಕು ಸೇರಿನಂತೆಯೂ ಗೋದಿಹಿಟ್ಟು ಹನ್ನೆರಡು ಸೇರಿನಂತೆಯೂ ಮಾರಲ್ಪಡುವವು ಎಂದು ಹೇಳಿದಾಗ ಆ ಸರದಾರನು -
18 ದೇವರ ಮನುಷ್ಯನು ಅರಸನಿಗೆ, “ನಾಳೆ ಇಷ್ಟು ಹೊತ್ತಿಗೆ ಸಮಾರ್ಯ ಪಟ್ಟಣದ ಬಾಗಿಲಿನಲ್ಲಿ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಡುವವು” ಎಂದು ಹೇಳಿದನು.
18 ಅವನು ಅರಸನಿಗೆ, “ನಾಳೆ ಇಷ್ಟು ಹೊತ್ತಿಗೆ ಸಮಾರಿಯ ಪಟ್ಟಣದ ಬಾಗಿಲಿನಲ್ಲಿ ಜವೆಗೋದಿ ನಾಣ್ಯಕ್ಕೆ ಆರು ಕಿಲೋಗ್ರಾಂನಂತೆಯೂ ಗೋದಿಹಿಟ್ಟು ನಾಣ್ಯಕ್ಕೆ ಮೂರು ಕಿಲೋಗ್ರಾಂನಂತೆಯೂ ಮಾರಲಾಗುವುದು,” ಎಂದು ಹೇಳಿದಾಗ
18 ಎಲೀಷನು, “ಒಂದು ರೂಪಾಯಿಗೆ ಒಂದು ಬುಟ್ಟಿ ಹಿಟ್ಟನ್ನೂ ಎರಡು ಬುಟ್ಟಿ ಜವೆಗೋಧಿಯನ್ನೂ ಸಮಾರ್ಯನಗರದ ಊರು ಬಾಗಿಲಿನಲ್ಲಿರುವ ಮಾರುಕಟ್ಟೆಯ ಸ್ಥಳದಲ್ಲಿ ಮಾರಲ್ಪಡುವುದು” ಎಂದು ಮೊದಲೇ ಹೇಳಿದ್ದನು.
18 ಹಾಗೆಯೇ, “ಆರು ಕಿಲೋಗ್ರಾಂ ನಯವಾದ ಗೋಧಿಹಿಟ್ಟು ಒಂದು ಬೆಳ್ಳಿ ನಾಣ್ಯಕ್ಕೆ ಮತ್ತು ಜವೆಗೋಧಿ ಹನ್ನೆರಡು ಕಿಲೋಗ್ರಾಂ ಒಂದು ಬೆಳ್ಳಿ ನಾಣ್ಯಕ್ಕೆ ನಾಳೆ ಇಷ್ಟು ಹೊತ್ತಿಗೆ ಸಮಾರ್ಯ ಪಟ್ಟಣದ ಬಾಗಿಲಿನಲ್ಲಿ ಮಾರಲಾಗುವುದು,” ಎಂದು ದೇವರ ಮನುಷ್ಯನು ಅರಸನಿಗೆ ಹೇಳಿದ ಪ್ರಕಾರವೇ ಸಂಭವಿಸಿತು.
ಎಲೀಷನು ಊರಿನ ಹಿರಿಯರೊಡನೆ ತನ್ನ ಮನೆಯಲ್ಲಿ ಕೂತುಕೊಂಡಿದ್ದನು; ಅರಸನು ತನ್ನ ಹತ್ತಿರವಿದ್ದ ಒಬ್ಬ ಆಳನ್ನು ಕಳುಹಿಸಿದನು. ಅವನು ಇನ್ನೂ ದೂರದಲ್ಲಿರುವಾಗಲೇ ಎಲೀಷನು ಹಿರಿಯರಿಗೆ - ನೋಡಿರಿ, ಆ ಕೊಲೆಗಾರನ ಮಗನು ನನ್ನ ತಲೆಯನ್ನು ಹಾರಿಸುವದಕ್ಕೆ ಆಳನ್ನು ಕಳುಹಿಸಿದ್ದಾನೆ. ಆಳು ಇಲ್ಲಿಗೆ ಬಂದ ಕೂಡಲೆ ನೀವು ಬಾಗಲನ್ನು ಮುಚ್ಚಿ ಅವನು ಒಳಗೆ ಬಾರದಂತೆ ಅದನ್ನು ಒತ್ತಿಹಿಡಿಯಿರಿ; ಅವನ ಹಿಂದೆಯೇ ಬರುತ್ತಿರುವ ಅವನೊಡೆಯನ ಕಾಲು ಸಪ್ಪಳವು ಕೇಳಿಸುತ್ತದಲ್ಲಾ ಎಂದು ಹೇಳಿದನು.
ಯೆಹೋವನು ಆಕಾಶದಲ್ಲಿ ದ್ವಾರಗಳನ್ನು ಮಾಡಿದರೂ ಇದು ಸಂಭವಿಸಲಾರದು ಅಂದದರಿಂದ ದೇವರ ಮನುಷ್ಯನು ಅವನಿಗೆ - ನೀನು ಅದನ್ನು ಕಣ್ಣಾರೆ ಕಾಣುವಿ; ಆದರೆ ಅನುಭವಿಸುವದಿಲ್ಲ ಎಂದು ನುಡಿದಿದ್ದನು.
ನನ್ನ ಸೇವಕನ ಮಾತನ್ನು ಸ್ಥಾಪಿಸಿ ನನ್ನ ದೂತರ ಮಂತ್ರಾಲೋಚನೆಯನ್ನು ನೆರವೇರಿಸುವವನಾಗಿದ್ದೇನೆ; ಯೆರೂಸಲೇಮು ಜನನಿವಾಸವಾಗುವದು, ಯೆಹೂದದ ಪಟ್ಟಣಗಳು ತಿರಿಗಿ ಕಟ್ಟಲ್ಪಡುವವು, ಅಲ್ಲಿನ ಹಾಳನ್ನು ಹಸನುಮಾಡುವೆನು ಎಂದು ನಾನು ಮುಂತಿಳಿಸಿ