Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 7:4 - ಕನ್ನಡ ಸತ್ಯವೇದವು J.V. (BSI)

4 ಪಟ್ಟಣದೊಳಗೆ ಬರವಿರುವದರಿಂದ ಅಲ್ಲಿ ಹೋದರೂ ಸಾಯಬೇಕು. ಇಲ್ಲಿಯೇ ಕೂತಿದ್ದರೂ ಸಾಯಬೇಕು. ಆದದರಿಂದ ಹೊರಟುಹೋಗಿ ಅರಾಮ್ಯರ ಪಾಳೆಯವನ್ನು ಸೇರೋಣ. ಅವರು ನಮ್ಮನ್ನು ಉಳಿಸುವದಾದರೆ ಉಳಿಸಲಿ, ಕೊಲ್ಲುವದಾದರೆ ಕೊಲ್ಲಲಿ ಎಂದು ಮಾತಾಡಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಪಟ್ಟಣದೊಳಗೆ ಬರವಿರುವುದರಿಂದ ಅಲ್ಲಿ ಹೋದರೂ ಸಾಯಬೇಕು, ಇಲ್ಲಿಯೇ ಕುಳಿತಿದ್ದರೂ ಸಾಯಬೇಕು. ಆದುದರಿಂದ ಹೊರಟುಹೋಗಿ ಅರಾಮ್ಯರ ಪಾಳೆಯವನ್ನು ಸೇರೋಣ. ಅವರು ನಮ್ಮನ್ನು ಉಳಿಸುವುದಾದರೆ ಉಳಿಸಲಿ, ಕೊಲ್ಲುವುದಾದರೆ ಕೊಲ್ಲಲಿ” ಎಂದು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಪಟ್ಟಣದೊಳಗೆ ಕ್ಷಾಮ ಇರುವುದರಿಂದ ಅಲ್ಲಿಗೆ ಹೋದರೂ ಸಾಯಬೇಕು. ಇಲ್ಲಿಯೇ ಕುಳಿತಿದ್ದರೂ ಸಾಯಬೇಕು. ಆದುದರಿಂದ ಹೊರಟುಹೋಗಿ ಸಿರಿಯಾದವರ ಪಾಳೆಯವನ್ನು ಸೇರೋಣ. ಅವರು ನಮ್ಮನ್ನು ಉಳಿಸುವುದಾದರೆ ಉಳಿಸಲಿ, ಕೊಲ್ಲುವುದಾದರೆ ಕೊಲ್ಲಲಿ,” ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಸಮಾರ್ಯದಲ್ಲಿ ಆಹಾರವು ಇಲ್ಲವೇ ಇಲ್ಲ. ನಾವು ನಗರದ ಒಳಗೆ ಹೋದರೆ, ನಾವು ಅಲ್ಲೇ ಸಾಯುತ್ತೇವೆ. ನಾವು ಇಲ್ಲೇ ಕುಳಿತಿದ್ದರೂ, ಸಾಯುವುದು ನಿಶ್ಚಿತ. ಆದ್ದರಿಂದ ನಾವು ಅರಾಮ್ಯರ ಪಾಳೆಯಕ್ಕೆ ಹೋಗೋಣ. ಅವರು ನಮ್ಮನ್ನು ಬದುಕಿಸಿದರೆ ನಾವು ಬದುಕೋಣ. ಅವರು ನಮ್ಮನ್ನು ಕೊಂದರೆ ಸಾಯೋಣ” ಎಂದು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಾವು ಇಲ್ಲಿಯೇ ಇದ್ದರೆ, ಪಟ್ಟಣದಲ್ಲಿ ಬರವಿರುವುದರಿಂದ ಅಲ್ಲಿ ಸಾಯುತ್ತೇವೆ. ಇಲ್ಲಿ ನಾವು ಕುಳಿತಿದ್ದರೂ ಹಾಗೆಯೇ ಸಾಯುತ್ತೇವೆ. ಆದ್ದರಿಂದ ನಾವು ಅರಾಮ್ಯರ ಪಾಳೆಯಕ್ಕೆ ಹೋಗಿ ಅವರಿಗೆ ಶರಣಾಗೋಣ. ಅವರು ನಮ್ಮನ್ನು ಬದುಕಿಸಿದರೆ ಬದುಕುವೆವು, ಅವರು ನಮ್ಮನ್ನು ಕೊಲ್ಲುವುದಾದರೆ ಕೊಲ್ಲಲಿ,” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 7:4
11 ತಿಳಿವುಗಳ ಹೋಲಿಕೆ  

ನಾನು ಊರಹೊರಗೆ ಹೋದರೆ ಇಗೋ, ಖಡ್ಗದಿಂದ ಹತರಾದವರು; ಊರೊಳಗೆ ಬಂದರೆ ಇಗೋ, ಕ್ಷಾಮದಿಂದ ಕೊರಗುವವರು! ಪ್ರವಾದಿಗಳೂ ಯಾಜಕರೂ ತಮಗೆ ಗೊತ್ತಿಲ್ಲದ ದೇಶಕ್ಕೆ ಗಡೀಪಾರಾಗಿದ್ದಾರೆ.


ದೇವರು ಒಂದು ವೇಳೆ ಮನಮರುಗಿ ಹಿಂದಿರುಗಿ ತನ್ನ ಉಗ್ರಕೋಪವನ್ನು ತೊಲಗಿಸಾನು, ನಾವು ನಾಶವಾಗದೆ ಉಳಿದೇವು ಎಂಬದನ್ನು ನಿನೆವೆಯಲ್ಲೆಲ್ಲಾ ಸಾರಿಸಿದನು.


[ಆ ಕಾಲದಲ್ಲಿ ಜನರು ಹೀಗನ್ನುವರು - ] ಸುಮ್ಮನೆ ಕೂತಿರುವದೇಕೆ? ಕೂಡಿಕೊಳ್ಳಿರಿ, ಕೋಟೆಕೊತ್ತಲಗಳ ಪಟ್ಟಣಗಳಲ್ಲಿ ಸೇರಿ ಅಲ್ಲೇ ನಾಶವಾಗೋಣ; ನಾವು ನಮ್ಮ ದೇವರಾದ ಯೆಹೋವನಿಗೆ ಪಾಪಮಾಡಿದ್ದರಿಂದ ಆತನು ನಮ್ಮನ್ನು ನಾಶನಕ್ಕೆ ಗುರಿಮಾಡಿ ಕಹಿಯಾದ ನೀರನ್ನು ಕುಡಿಸಿದ್ದಾನಷ್ಟೆ.


ನಾವು ಸಾಯುವವರು; ನೆಲದ ಮೇಲೆ ಚೆಲ್ಲಲ್ಪಟ್ಟು ತಿರಿಗಿ ಕೂಡಿಸಲ್ಪಡಲಾರದ ನೀರಿನಂತಿದ್ದೇವೆ. ಮನುಷ್ಯರ ಪ್ರಾಣವನ್ನು ತೆಗೆಯುವದಕ್ಕೆ ದೇವರಿಗೆ ಇಷ್ಟವಿಲ್ಲ; ತಳ್ಳಲ್ಪಟ್ಟವನು ತಿರಿಗಿ ತನ್ನ ಬಳಿಗೆ ಬರುವ ಹಾಗೆ ಆತನು ಸದುಪಾಯಗಳನ್ನು ಕಲ್ಪಿಸುವವನಾಗಿರುತ್ತಾನೆ.


ಒಂದೇ ಸಾರಿ ಸಾಯುವದೂ ಆಮೇಲೆ ನ್ಯಾಯತೀರ್ಪೂ ಮನುಷ್ಯರಿಗೆ ಹೇಗೆ ನೇಮಕವಾಗಿದೆಯೋ ಹಾಗೆಯೇ ಕ್ರಿಸ್ತನು ಸಹ ಬಹುಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತನಾದನು,


ಸೌಲನಿಗೆ ವಿರುದ್ಧವಾಗಿ ಯುದ್ಧಕ್ಕೆ ಹೋಗುವ ಫಿಲಿಷ್ಟಿಯರ ಜೊತೆಯಲ್ಲಿ ದಾವೀದನೂ ಹೋಗುತ್ತಿರುವಾಗ ಕೆಲವು ಮಂದಿ ಮನಸ್ಸೆಯವರು ಬಂದು ಅವನನ್ನು ಕೂಡಿಕೊಂಡರು. ದಾವೀದನು ನಿಜವಾಗಿ ಫಿಲಿಷ್ಟಿಯರಿಗೆ ಸಹಾಯಕನಾಗಲಿಲ್ಲ; ಅವರ ಪ್ರಭುಗಳು - ಇವನು ನಮ್ಮ ತಲೆಗಳನ್ನು ಕಡಿದು ತಿರಿಗಿ ತನ್ನ ಯಜಮಾನನಾದ ಸೌಲನೊಂದಿಗೆ ಸೇರಿಕೊಂಡಾನು ಎಂಬದಾಗಿ ಆಲೋಚಿಸಿ ಅವನನ್ನು ಹಿಂದಕ್ಕೆ ಕಳುಹಿಸಿದರು.


ಆಮೇಲೆ ಅರಾಮ್ಯರ ಅರಸನಾದ ಬೆನ್ಹದದನು ತನ್ನ ಎಲ್ಲಾ ಸೈನ್ಯವನ್ನು ಕೂಡಿಸಿಕೊಂಡು ಬಂದು ಸಮಾರ್ಯಕ್ಕೆ ಮುತ್ತಿಗೆಹಾಕಿದನು.


ಸಾಯಂಕಾಲವಾಗಲು ಅರಾಮ್ಯರ ಪಾಳೆಯಕ್ಕೆ ಹೊರಟರು. ಅವರು ಪಾಳೆಯದ ಅಂಚಿಗೆ ಬಂದಾಗ ಅಲ್ಲಿ ಒಬ್ಬನೂ ಕಾಣಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು