Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 7:5 - ಕನ್ನಡ ಸತ್ಯವೇದವು J.V. (BSI)

5 ಸಾಯಂಕಾಲವಾಗಲು ಅರಾಮ್ಯರ ಪಾಳೆಯಕ್ಕೆ ಹೊರಟರು. ಅವರು ಪಾಳೆಯದ ಅಂಚಿಗೆ ಬಂದಾಗ ಅಲ್ಲಿ ಒಬ್ಬನೂ ಕಾಣಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವರು ಸಾಯಂಕಾಲವಾಗಲು ಅರಾಮ್ಯರ ಪಾಳೆಯಕ್ಕೆ ಹೊರಟರು. ಅವರು ಪಾಳೆಯದ ಅಂಚಿಗೆ ಬಂದಾಗ ಅಲ್ಲಿ ಒಬ್ಬನೂ ಕಾಣಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸಾಯಂಕಾಲವಾದಾಗ ಅವರು ಸಿರಿಯಾದವರ ಪಾಳೆಯಕ್ಕೆ ಹೊರಟರು; ಪಾಳೆಯದ ಅಂಚಿಗೆ ಬಂದಾಗ ಅಲ್ಲಿ ಒಬ್ಬನೂ ಕಾಣಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅಂದು ಸಂಜೆ ಆ ನಾಲ್ವರು ಕುಷ್ಠರೋಗಿಗಳು ಅರಾಮ್ಯರ ಪಾಳೆಯಕ್ಕೆ ಹೋದರು. ಅವರು ಪಾಳೆಯದ ಹೊರ ಅಂಚಿಗೆ ಬಂದರು. ಅಲ್ಲಿ ಜನರೇ ಇರಲಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಹಾಗೆಯೇ ಸಂಜೆಯಲ್ಲಿ ಎದ್ದು, ಅರಾಮ್ಯರ ಪಾಳೆಯಕ್ಕೆ ಹೋಗಲು ಅವರು ಅರಾಮ್ಯರ ಪಾಳೆಯದ ಅಂಚಿಗೆ ಬಂದಾಗ, ಅಲ್ಲಿ ಯಾರೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 7:5
10 ತಿಳಿವುಗಳ ಹೋಲಿಕೆ  

ನಿಮ್ಮ ಮೇಲೆ ಬರುವ ಶತ್ರುಗಳು ನಿಮ್ಮಿಂದ ಸೋತುಹೋಗುವಂತೆ ಯೆಹೋವನು ಮಾಡುವನು. ಅವರು ಒಂದೇ ದಾರಿಯಿಂದ ನಿಮ್ಮ ಮೇಲೆ ಬಂದರೂ ಏಳು ದಾರಿಗಳಿಂದ ಓಡಿಹೋಗುವರು.


ಅವರಲ್ಲಿನ ಪ್ರಭುವು ಹೆಗಲಮೇಲೆ ಹೊರೆಯನ್ನು ಹೊತ್ತುಕೊಂಡು ಕತ್ತಲಲ್ಲಿ ಹೊರಟುಹೋಗುವನು; ಅವರು ಗೋಡೆಯನ್ನು ತೋಡಿ ಕಂಡಿಯ ಮೂಲಕ ತಮ್ಮ ಸಾಮಾನನ್ನು ಆಚೆಗೆ ಸಾಗಿಸುವರು; ಅವನು ಮೋರೆಯನ್ನು ಮುಚ್ಚಿಕೊಳ್ಳುವನು, ಭೂವಿುಯು ಅವನ ಕಣ್ಣಿಗೆ ಕಾಣಿಸದು.


ದಾವೀದನು ಮರುದಿನ ಹೊತ್ತಾರೆಯಿಂದ ಸೂರ್ಯಾಸ್ತಮಾನದವರೆಗೂ ಅವರನ್ನು ಸಂಹರಿಸಿದನು. ಒಂಟೆಗಳನ್ನು ಹತ್ತಿ ಓಡಿಹೋದ ನಾನೂರು ಮಂದಿ ಪ್ರಾಯಸ್ಥರ ಹೊರತು ಬೇರೆ ಯಾರೂ ತಪ್ಪಿಸಿಕೊಳ್ಳಲಿಲ್ಲ.


ಅವರ ಶರಣನು ಅವರನ್ನು ಶತ್ರುಗಳಿಗೆ ಒಪ್ಪಿಸಿಕೊಡದಿದ್ದರೆ ಒಬ್ಬನಿಂದ ಸಾವಿರ ಮಂದಿ ಸೋತುಹೋಗುತ್ತಿದ್ದರೋ? ಯೆಹೋವನು ಕೈಬಿಡದಿದ್ದರೆ ಇಬ್ಬರಿಗೆ ಹೆದರಿ ಹತ್ತುಸಾವಿರ ಮಂದಿ ಓಡಿಹೋಗುತ್ತಿದ್ದರೋ?


ಮನೆಯ ಹೊರಗೆ ಕತ್ತಿಯೂ ಒಳಗೆ ಭಯವೂ ಇರುವವು. ಯೌವನಸ್ಥರು, ಕನ್ಯೆಯರು, ಮೊಲೆಕೂಸುಗಳು, ನರೇತಲೆಯವರು ಇವರೆಲ್ಲರೂ ಕತ್ತಿಯಿಂದ ಕೊಲ್ಲಲ್ಪಡುವರು.


[ಶುದ್ಧ] ಪಶುವಿನಲ್ಲಿ ಚೊಚ್ಚಲಾಗಿ ಹುಟ್ಟಿದ್ದು ಯೆಹೋವನದಾಗಿರುವದರಿಂದ ಅದನ್ನು ಯಾರೂ ಹರಕೆಯಾಗಿ ಕೊಡಕೂಡದು; ಹೋರಿಯಾಗಿದ್ದರೂ ಆಡುಕುರಿಯಾಗಿದ್ದರೂ ಅದು ಯೆಹೋವನ ಸೊತ್ತೇ.


ಯಾವನಾದರೂ ಬಡವನಾಗಿ ನೇಮಕವಾದ ಹಣವನ್ನು ಕೊಡಲಾರದೆ ಹೋದರೆ ಅವನು ಹರಕೆಮಾಡಿ ಪ್ರತಿಷ್ಠಿಸಿದ ಮನುಷ್ಯನನ್ನು ಯಾಜಕನ ಮುಂದೆ ನಿಲ್ಲಿಸಬೇಕು. ಯಾಜಕನು ಹರಕೆಮಾಡಿದವನ ಸ್ಥಿತಿಗತಿಗೆ ತಕ್ಕಂತೆ ಅವನು ಕೊಡಬೇಕಾದ ಹಣ ಇಷ್ಟೆಂದು ನಿರ್ಣಯಿಸಬೇಕು.


ಪಟ್ಟಣದೊಳಗೆ ಬರವಿರುವದರಿಂದ ಅಲ್ಲಿ ಹೋದರೂ ಸಾಯಬೇಕು. ಇಲ್ಲಿಯೇ ಕೂತಿದ್ದರೂ ಸಾಯಬೇಕು. ಆದದರಿಂದ ಹೊರಟುಹೋಗಿ ಅರಾಮ್ಯರ ಪಾಳೆಯವನ್ನು ಸೇರೋಣ. ಅವರು ನಮ್ಮನ್ನು ಉಳಿಸುವದಾದರೆ ಉಳಿಸಲಿ, ಕೊಲ್ಲುವದಾದರೆ ಕೊಲ್ಲಲಿ ಎಂದು ಮಾತಾಡಿಕೊಂಡು


ಕರ್ತನು ಅರಾಮ್ಯರ ಪಾಳೆಯದವರಿಗೆ ರಥರಥಾಶ್ವಸಹಿತವಾದ ಮಹಾಸೈನ್ಯ ಘೋಷವು ಕೇಳಿಸುವಂತೆ ಮಾಡಿದ್ದರಿಂದ ಅವರು - ಇಸ್ರಾಯೇಲ್ಯರ ಅರಸನು ಹಿತ್ತಿಯ, ಐಗುಪ್ತ ಇವುಗಳ ಅರಸರಿಗೆ ಹಣಕೊಟ್ಟು ಅವರನ್ನು ನಮಗೆ ವಿರೋಧವಾಗಿ ಕರತಂದಿದ್ದಾನೆ ಅಂದುಕೊಂಡು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು