Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 7:7 - ಕನ್ನಡ ಸತ್ಯವೇದವು J.V. (BSI)

7 ತಮ್ಮ ಗುಡಾರಗಳನ್ನೂ ಕತ್ತೆಕುದುರೆಗಳನ್ನೂ ಪಾಳೆಯದಲ್ಲಿದ್ದದ್ದೆಲ್ಲವನ್ನೂ ಬಿಟ್ಟು ತಮ್ಮ ಜೀವರಕ್ಷಣೆಗಾಗಿ ಅದೇ ಸಾಯಂಕಾಲದಲ್ಲಿ ಓಡಿಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ತಮ್ಮ ಗುಡಾರಗಳನ್ನೂ, ಕತ್ತೆ ಕುದುರೆಗಳನ್ನೂ ಪಾಳೆಯದಲ್ಲಿದ್ದುದ್ದೆಲ್ಲವನ್ನೂ ಬಿಟ್ಟು ತಮ್ಮ ಜೀವರಕ್ಷಣೆಗಾಗಿ ಅದೇ ಸಾಯಂಕಾಲದಲ್ಲಿ ಓಡಿಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ತಮ್ಮ ಗುಡಾರಗಳನ್ನೂ ಕತ್ತೆಕುದುರೆಗಳನ್ನೂ ಪಾಳೆಯದಲ್ಲಿದ್ದುದೆಲ್ಲವನ್ನೂ ಬಿಟ್ಟು, ತಮ್ಮ ಪ್ರಾಣರಕ್ಷಣೆಗಾಗಿ, ಅದೇ ಸಾಯಂಕಾಲದಲ್ಲಿ ಓಡಿಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಸಂಜೆಗೆ ಮುಂಚೆಯೇ ಓಡಿಹೋಗಿದ್ದರು. ಅವರು ಎಲ್ಲವನ್ನೂ ಅಲ್ಲಿಯೇ ಬಿಟ್ಟುಹೋಗಿದ್ದರು. ಅವರು ತಮ್ಮ ಗುಡಾರಗಳನ್ನು, ಕುದುರೆಗಳನ್ನು, ಹೇಸರಕತ್ತೆಗಳನ್ನು ಅಲ್ಲಿಯೇ ಬಿಟ್ಟು ತಮ್ಮ ಜೀವರಕ್ಷಣೆಗಾಗಿ ಓಡಿಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರು ಸಂಜೆಯಲ್ಲಿ ಎದ್ದು ಪಾಳೆಯದಲ್ಲಿದ್ದ ಹಾಗೆ ತಮ್ಮ ಗುಡಾರಗಳನ್ನೂ, ತಮ್ಮ ಕುದುರೆಗಳನ್ನೂ, ತಮ್ಮ ಕತ್ತೆಗಳನ್ನೂ ಬಿಟ್ಟುಬಿಟ್ಟು ತಮ್ಮ ಪ್ರಾಣಕ್ಕೋಸ್ಕರ ಓಡಿಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 7:7
18 ತಿಳಿವುಗಳ ಹೋಲಿಕೆ  

ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು; ಶಿಷ್ಟನು ಸಿಂಹದಂತೆ ಧ್ಯೆರ್ಯದಿಂದಿರುವನು.


ಆಶ್ರಯವನ್ನು ಹೊಂದಬೇಕೆಂದು ಓಡಿಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಂಡವರಾದ ನಮಗೆ ಎರಡು ನಿಶ್ಚಲವಾದ ಆಧಾರಗಳು ಇರುವ ಕಾರಣ ಬಲವಾದ ಧೈರ್ಯವುಂಟಾಯಿತು.


ಆ ದಿನದಲ್ಲಿ ಮನುಷ್ಯರು ತಮ್ಮ ಪೂಜೆಗೋಸ್ಕರ ಮಾಡಿಸಿಕೊಂಡ ಬೆಳ್ಳಿಯ ಬೊಂಬೆಗಳನ್ನೂ ಬಂಗಾರದ ವಿಗ್ರಹಗಳನ್ನೂ ಇಲಿಕಣ್ಣು ಕಪಟಗಳಿಗಾಗಿ ಬಿಸಾಟುಬಿಟ್ಟು


ರಾಜನ ಸಂಕಲ್ಪಗಳು ಯೆಹೋವನ ಕೈಯಲ್ಲಿ ನೀರಿನ ಕಾಲುವೆಗಳಂತೆ ಇವೆ; ತನಗೆ ಬೇಕಾದ ಕಡೆಗೆ ತಿರುಗಿಸುತ್ತಾನೆ.


ಬೇಟೆಗಾರನ ಕೈಯಿಂದ ಜಿಂಕೆಯು ಓಡುವಂತೆಯೂ ಪಕ್ಷಿಯು ಹಾರಿಹೋಗುವ ಹಾಗೂ ತಪ್ಪಿಸಿಕೋ.


ಓಡಿ ಹೋಗುತ್ತಾರೆ; ಸೈನ್ಯದೊಡನೆ ಅರಸುಗಳು ಓಡಿ ಹೋಗುತ್ತಾರೆ; ಮನೆಯಲ್ಲಿದ್ದ ಸ್ತ್ರೀಯರು ಕೊಳ್ಳೆಯನ್ನು ಹಂಚುತ್ತಾರೆ.


ಜೀವರಕ್ಷಣೆಗಾಗಿ ಕುದುರೆಯು ಪ್ರಯೋಜನವಿಲ್ಲ; ಅದು ತನ್ನ ವಿಶೇಷಬಲದಿಂದ ಯಾರನ್ನೂ ರಕ್ಷಿಸಲಾರದು.


ಎಲ್ಲಾ ಕಡೆಯಲ್ಲಿಯೂ ಅಪಾಯಗಳು ಅವನನ್ನು ಅಂಜಿಸಿ ಹಿಮ್ಮಡಿತುಳಿಯುತ್ತಾ ಬೆನ್ಹತ್ತುವವು.


ಪಾಳೆಯದ ಸುತ್ತಲೂ ತಮ್ಮ ತಮ್ಮ ಸ್ಥಳದಲ್ಲಿ ನಿಂತರು; ಪಾಳೆಯದವರಾದರೋ ಭ್ರಾಂತರಾಗಿ ಕೂಗುತ್ತಾ ಓಡಿಹೋಗ ಪ್ರಾರಂಭಿಸಿದರು.


ಐಗುಪ್ತದೇಶದಿಂದ ರಥಗಳನ್ನೂ ಕುದುರೆಗಳನ್ನೂ ತರಿಸಬೇಕಾದರೆ ಪ್ರತಿಯೊಂದು ರಥಕ್ಕೆ ಆರುನೂರು ರೂಪಾಯಿಗಳನ್ನೂ ಕುದುರೆಗೆ ನೂರೈವತ್ತು ರೂಪಾಯಿಗಳನ್ನೂ ಕೊಡಬೇಕಾಯಿತು. ಅವು ಹಿತ್ತಿಯರ ಮತ್ತು ಅರಾಮ್ಯರ ಎಲ್ಲಾ ಅರಸರಿಗೆ ಇವರ ಮುಖಾಂತರವಾಗಿಯೇ ಸಿಕ್ಕುತ್ತಿದ್ದವು.


ಇದರಿಂದ ಪಾಳೆಯದಲ್ಲಿದ್ದವರೂ ಕಾವಲುಗಾರರಾಗಿ ಠಾಣದಲ್ಲಿದ್ದವರೂ ಸುಲಿಗೆಗೋಸ್ಕರ ಹೊರಗೆ ಹೋಗಿದ್ದವರೂ ಉಳಿದ ಎಲ್ಲಾ ಜನರೂ ಭಯದಿಂದ ನಡುಗಹತ್ತಿದರು. ಇದಲ್ಲದೆ ದೇವರು ಭೂಕಂಪವನ್ನುಂಟುಮಾಡಿದ್ದರಿಂದ ಜನರಲ್ಲಿ ಮಹಾಭೀತಿಯುಂಟಾಯಿತು.


ಅವರಲ್ಲಿ ಪ್ರತಿಯೊಬ್ಬನು ತನ್ನ ಎದುರಿಗೆ ಬಂದ ವಿರೋಧಿಯನ್ನು ಕೊಲ್ಲುತ್ತಾ ಮುಂದರಿದನು; ಅರಾಮ್ಯರು ಓಡಿಹೋಗಲು ಇಸ್ರಾಯೇಲ್ಯರು ಅವರನ್ನು ಹಿಂದಟ್ಟಿದರು. ಅವರ ಅರಸನಾದ ಬೆನ್ಹದದನೂ ಕೆಲವು ಮಂದಿ ರಾಹುತರೂ ಕುದುರೆಗಳನ್ನೇರಿ ಓಡಿಹೋಗಿ ತಪ್ಪಿಸಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು