Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 7:8 - ಕನ್ನಡ ಸತ್ಯವೇದವು J.V. (BSI)

8 ಆ ಕುಷ್ಠರೋಗಿಗಳು ಪಾಳೆಯದ ಅಂಚಿಗೆ ಬಂದಾಗ ಮೊದಲನೆಯ ಡೇರೆಯನ್ನು ಹೊಕ್ಕು ಉಂಡು ಕುಡಿದು ಅದರಲ್ಲಿದ್ದ ಬೆಳ್ಳಿಬಂಗಾರವನ್ನೂ ಬಟ್ಟೆಗಳನ್ನೂ ತೆಗೆದುಕೊಂಡು ಅಡಗಿಸಿಟ್ಟರು. ಇನ್ನೊಂದು ಡೇರೆಯನ್ನು ಹೊಕ್ಕು ಅಲ್ಲಿಂದಲೂ ತೆಗೆದುಕೊಂಡು ಅಡಗಿಸಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆ ಕುಷ್ಠರೋಗಿಗಳು ಪಾಳೆಯದ ಅಂಚಿಗೆ ಬಂದಾಗ ಮೊದಲನೆಯ ಡೇರೆಯನ್ನು ಹೊಕ್ಕು ಉಂಡು, ಕುಡಿದು ಅದರಲ್ಲಿದ್ದ ಬೆಳ್ಳಿ ಬಂಗಾರವನ್ನೂ, ಬಟ್ಟೆಗಳನ್ನೂ ತೆಗೆದುಕೊಂಡು ಅಡಗಿಸಿಟ್ಟರು. ಇನ್ನೊಂದು ಡೇರೆಯನ್ನು ಹೊಕ್ಕು ಅಲ್ಲಿಂದಲೂ ತೆಗೆದುಕೊಂಡು ಅಡಗಿಸಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆ ಕುಷ್ಠರೋಗಿಗಳು ಪಾಳೆಯದ ಅಂಚಿಗೆ ಬಂದಾಗ ಮೊದಲನೆಯ ಡೇರೆಯನ್ನು ಹೊಕ್ಕು ಉಂಡು, ಕುಡಿದು ಅದರಲ್ಲಿದ್ದ ಬೆಳ್ಳಿ ಬಂಗಾರವನ್ನೂ ಬಟ್ಟೆಗಳನ್ನೂ ತೆಗೆದುಕೊಂಡು ಬಚ್ಚಿಟ್ಟರು. ಇನ್ನೊಂದು ಡೇರೆಯನ್ನು ಹೊಕ್ಕು ಅಲ್ಲಿಂದಲೂ ತೆಗೆದುಕೊಂಡು ಅಡಗಿಸಿ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಈ ಕುಷ್ಠರೋಗಿಗಳು ಪಾಳೆಯವು ಆರಂಭವಾಗಿದ್ದಲ್ಲಿಗೆ ಬಂದು, ಒಂದು ಗುಡಾರದೊಳಕ್ಕೆ ಹೋದರು. ಅವರು ಅಲ್ಲಿ ತಿಂದರು ಮತ್ತು ಕುಡಿದರು. ನಂತರ ಈ ನಾಲ್ವರು ಬೆಳ್ಳಿಬಂಗಾರಗಳನ್ನು ಮತ್ತು ಬಟ್ಟೆಗಳನ್ನು ಪಾಳೆಯದಿಂದ ಹೊರಗೆ ತೆಗೆದುಕೊಂಡು ಹೋದರು. ಅವರು ಬೆಳ್ಳಿಬಂಗಾರಗಳನ್ನು ಮತ್ತು ಬಟ್ಟೆಗಳನ್ನು ಅಡಗಿಸಿಟ್ಟರು. ನಂತರ ಅವರು ಹಿಂದಿರುಗಿ ಬಂದು, ಮತ್ತೊಂದು ಗುಡಾರವನ್ನು ಪ್ರವೇಶಿಸಿದರು. ಆ ಗುಡಾರದಿಂದಲೂ ಅವರು ವಸ್ತುಗಳನ್ನು ಕೊಂಡೊಯ್ದರು. ಅವರು ಹೊರಗೆ ಹೋಗಿ ಅವುಗಳನ್ನು ಅಡಗಿಸಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆ ಕುಷ್ಠರೋಗಿಗಳು ದಂಡಿನ ಅಂಚಿನವರೆಗೂ ಬಂದು ಒಂದು ಡೇರೆಯಲ್ಲಿ ಪ್ರವೇಶಿಸಿ, ಅಲ್ಲಿ ತಿಂದು ಕುಡಿದು ಅಲ್ಲಿದ್ದ ಬೆಳ್ಳಿಬಂಗಾರವನ್ನೂ, ವಸ್ತ್ರಗಳನ್ನೂ ತೆಗೆದುಕೊಂಡುಹೋಗಿ ಬಚ್ಚಿಟ್ಟರು. ತಿರುಗಿಬಂದು ಮತ್ತೊಂದು ಡೇರೆಯಲ್ಲಿ ಪ್ರವೇಶಿಸಿ, ಅಲ್ಲಿಂದಲೂ ಹಾಗೆಯೇ ತೆಗೆದುಕೊಂಡುಹೋಗಿ ಬಚ್ಚಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 7:8
7 ತಿಳಿವುಗಳ ಹೋಲಿಕೆ  

ಪರಲೋಕರಾಜ್ಯವು ಹೊಲದಲ್ಲಿ ಹೂಳಿಟ್ಟ ದ್ರವ್ಯಕ್ಕೆ ಹೋಲಿಕೆಯಾಗಿದೆ. ಒಬ್ಬನು ಅದನ್ನು ಕಂಡುಕೊಂಡು ಮುಚ್ಚಿಬಿಟ್ಟು ಅದರಿಂದಾದ ಸಂತೋಷದಿಂದ ತನ್ನ ಬದುಕನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಂಡನು.


ಆದರೆ ಒಂದು ತಲಾಂತು ಹೊಂದಿದವನು ಹೋಗಿ ಭೂವಿುಯನ್ನು ಅಗೆದು ತನ್ನ ದಣಿಯ ಹಣವನ್ನು ಬಚ್ಚಿಟ್ಟನು.


ಆದರೆ ಆ ಎಂಭತ್ತು ಮಂದಿಯಲ್ಲಿ ಹತ್ತು ಜನರು ಇಷ್ಮಾಯೇಲನಿಗೆ - ನಮ್ಮನ್ನು ಕೊಲ್ಲಬೇಡ; ಗೋದಿ, ಜವೆಗೋದಿ, ಎಣ್ಣೆ, ಜೇನುತುಪ್ಪ, ಇವುಗಳನ್ನು ಕಾಡಿನಲ್ಲಿ ಬಹಳವಾಗಿ ಬಚ್ಚಿಟ್ಟಿದ್ದೇವೆ ಎಂದು ಬಿನ್ನೈಸಲು ಅವನು ಅವರನ್ನು ಅವರ ಜೊತೆಯವರಂತೆ ಕೊಲ್ಲದೆ ಬಿಟ್ಟನು.


ಗುಡ್ಡವನ್ನು ಮುಟ್ಟಿದಾಗ ಗೇಹಜಿಯು ಅವುಗಳನ್ನು ತೆಗೆದುಕೊಂಡು ಮನೆಯಲ್ಲಿ ಅಡಗಿಸಿಟ್ಟು ಆಳುಗಳನ್ನು ಕಳುಹಿಸಿಬಿಟ್ಟನು.


ಅನಂತರ ಅವರು - ಇದು ಶುಭವಾರ್ತೆಯ ದಿವಸವಾಗಿದೆ; ನಾವು ಇದನ್ನು ಪ್ರಕಟಿಸದಿರುವದು ಒಳ್ಳೇದಲ್ಲ. ಬೆಳಗಾಗುವವರೆಗೆ ತಡಮಾಡಿದರೆ ಶಿಕ್ಷೆಗೆ ಪಾತ್ರರಾದೇವು. ಆದದರಿಂದ ಹೋಗಿ ಅರಮನೆಯವರಿಗೆ ಈ ಸಂಗತಿಯನ್ನು ತಿಳಿಸೋಣ ಎಂದು ಮಾತಾಡಿಕೊಂಡು


ನಿನ್ನ ಹಗ್ಗಗಳು ಸಡಲಿ ಸ್ತಂಭದ ಪಾದವನ್ನು ಸ್ಥಿರಪಡಿಸಿಕೊಳ್ಳಲಾರದೆ ಹೋದವು, ಪಠವನ್ನು ಮುದುರದಂತೆ ಹಿಡಿದಿರಲಿಕ್ಕೂ ಆಗಲಿಲ್ಲ; ಆಗ ದೊಡ್ಡ ಸೂರೆಯು ಕೊಳ್ಳೆಯಾಗಿ ಹಂಚುವದಕ್ಕೆ ಆಸ್ಪದವಾಯಿತು. ಕುಂಟರೂ ಸುಲಿಗೆಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು