Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 8:19 - ಕನ್ನಡ ಸತ್ಯವೇದವು J.V. (BSI)

19 ಆದರೂ ಯೆಹೋವನು ಯೆಹೂದರಾಜ್ಯವನ್ನು ನಾಶಮಾಡಲಿಲ್ಲ. ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವದಿಲ್ಲ ಎಂಬದಾಗಿ ತನ್ನ ಸೇವಕನಾದ ದಾವೀದನಿಗೆ ಮಾಡಿದ ಪ್ರಮಾಣವನ್ನು ನೆನಸಿ ಅದನ್ನು ಉಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆದರೂ, ಯೆಹೋವನು ಯೆಹೂದ ರಾಜ್ಯವನ್ನು ನಾಶಮಾಡಲಿಲ್ಲ. ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ ಎಂಬುದಾಗಿ ತನ್ನ ಸೇವಕನಾದ ದಾವೀದನಿಗೆ ಮಾಡಿದ ವಾಗ್ದಾನವನ್ನು ಸ್ಮರಿಸಿ ಅದನ್ನು ಉಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆದರೂ ಸರ್ವೇಶ್ವರ ಜುದೇಯದ ರಾಜ್ಯವನ್ನು ನಾಶಮಾಡಲಿಲ್ಲ. “ನಿನ್ನನ್ನು ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ,” ಎಂಬುದಾಗಿ ತಮ್ಮ ದಾಸ ದಾವೀದನಿಗೆ ಮಾಡಿದ ಪ್ರಮಾಣವನ್ನು ಸ್ಮರಿಸಿ ಅದನ್ನು ಉಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆದರೆ ಯೆಹೋವನು ತನ್ನ ಸೇವಕನಾದ ದಾವೀದನಿಗೆ ವಾಗ್ದಾನ ಮಾಡಿದ್ದುದರಿಂದ ಯೆಹೂದವನ್ನು ನಾಶಗೊಳಿಸಲಿಲ್ಲ. ಯಾವಾಗಲೂ ದಾವೀದನ ಕುಟುಂಬದ ಒಬ್ಬನು ರಾಜನಾಗಿರುತ್ತಾನೆಂದು ಯೆಹೋವನು ವಾಗ್ದಾನ ಮಾಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದರೂ ಯೆಹೋವ ದೇವರು ಯೆಹೂದದ ರಾಜ್ಯವನ್ನು ನಾಶಮಾಡಲಿಲ್ಲ. “ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ,” ಎಂಬುದಾಗಿ ತಮ್ಮ ದಾಸನಾದ ದಾವೀದನಿಗೆ ಪ್ರಮಾಣ ಮಾಡಿದ ಕಾರಣ ಉಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 8:19
18 ತಿಳಿವುಗಳ ಹೋಲಿಕೆ  

ನಾನು ನನ್ನ ಹೆಸರಿಗೋಸ್ಕರ ಆರಿಸಿಕೊಂಡ ಯೆರೂಸಲೇಮ್‍ಪಟ್ಟಣದಲ್ಲಿ ನನ್ನ ಸೇವಕನಾದ ದಾವೀದನ ದೀಪವು ನನ್ನ ಸನ್ನಿಧಿಯಲ್ಲಿ ಉರಿಯುತ್ತಲೇ ಇರುವಂತೆ ಅವನ ಮಗನಿಗೆ ಒಂದು ಕುಲವನ್ನು ಉಳಿಸುವೆನು.


ನನ್ನ ಉಗ್ರಕೋಪವನ್ನು ತೀರಿಸೆನು, ಎಫ್ರಾಯೀಮನ್ನು ನಾಶಮಾಡಲು ತಿರಿಗಿಕೊಳ್ಳೆನು; ನಾನು ಮನುಷ್ಯನಲ್ಲ, ದೇವರೇ; ನಾನು ನಿಮ್ಮಲ್ಲಿ ನೆಲೆಯಾಗಿರುವ ಸದಮಲಸ್ವಾವಿು, ನಾನು ರೋಷದಿಂದ ಬಾರೆನು.


ನನಗೋಸ್ಕರವಾಗಿಯೂ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಇದನ್ನು ಉಳಿಸಿ ಕಾಪಾಡುವೆನು ಎಂದು ಹೇಳುತ್ತಾನೆ ಎಂಬದೇ.


ಆದರೂ ನನ್ನ ಕೃಪೆಯು ಸೌಲನನ್ನು ಬಿಟ್ಟುಹೊದ ಹಾಗೆ ಅವನನ್ನು ಬಿಟ್ಟುಹೋಗುವದಿಲ್ಲ. ನಾನು ಸೌಲನನ್ನು ನಿನ್ನೆದುರಿನಿಂದ ಹೊರಡಿಸಿಬಿಟ್ಟೆನಲ್ಲಾ!


ಇದರಿಂದ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವಳು.


ಆದರೂ ಯೆಹೋವನು ದಾವೀದನಿಗೆ - ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವದಿಲ್ಲ ಎಂದು ಪ್ರಮಾಣಮಾಡಿ ಹೇಳಿದ್ದದರಿಂದ ದಾವೀದನ ಮನೆತನದವರನ್ನು ನಾಶಮಾಡುವದಕ್ಕೆ ಇಷ್ಟಪಡಲಿಲ್ಲ.


ನನಗೋಸ್ಕರವಾಗಿಯೂ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಇದನ್ನು ಉಳಿಸಿ ಕಾಪಾಡುವೆನು ಎಂದು ಹೇಳುತ್ತಾನೆ ಎಂಬದೇ.


ಚೆರೂಯಳ ಮಗನಾದ ಅಬೀಷೈಯು ದಾವೀದನ ಸಹಾಯಕ್ಕೆ ಬಂದು ಫಿಲಿಷ್ಟಿಯನನ್ನು ಕೊಂದುಹಾಕಿದನು. ಆಗ ಜನರು ದಾವೀದನಿಗೆ - ಇಸ್ರಾಯೇಲ್ಯರ ದೀಪವು ಆರಿಹೋಗದಂತೆ ನೀನು ಇನ್ನು ಮುಂದೆ ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು ಎಂದು ಖಂಡಿತವಾಗಿ ಹೇಳಿದರು.


ಇಲ್ಲಿಯೇ ದಾವೀದನ ಕೊಂಬು ಚಿಗುರುವಂತೆ ಮಾಡುವೆನು; ನನ್ನ ಅಭಿಷಿಕ್ತನ ದೀಪವು ಉರಿಯುತ್ತಲೇ ಇರಬೇಕೆಂದು ನೇವಿುಸಿದ್ದೇನೆ.


ನಿನ್ನ ಮನೆಯೂ ಅರಸುತನವೂ ಸದಾಕಾಲ ಸ್ಥಿರವಾಗಿರುವವು; ನಿನ್ನ ಸಿಂಹಾಸನವು ಶಾಶ್ವತವಾಗಿರುವದು ಎಂಬದೇ.


ಆದರೂ ನಾನು ನಿನ್ನ ತಂದೆಯಾದ ದಾವೀದನನ್ನು ನೆನಸಿ ನಿನ್ನ ಕಾಲದಲ್ಲಿ ಇದನ್ನು ಮಾಡುವದಿಲ್ಲ.


ನಿನ್ನ ಮಗನ ಕೈಯಿಂದ ಅದನ್ನು ಕಿತ್ತುಕೊಳ್ಳುವೆನು. ಆದರೆ ರಾಜ್ಯವನ್ನೆಲ್ಲಾ ಕಿತ್ತು ಕೊಳ್ಳುವದಿಲ್ಲ; ನನ್ನ ಸೇವಕನಾದ ದಾವೀದನಿಗೋಸ್ಕರವೂ ನಾನು ಆರಿಸಿಕೊಂಡ ಯೆರೂಸಲೇಮ್‍ಪಟ್ಟಣಕ್ಕೋಸ್ಕರವೂ ನಿನ್ನ ಮಗನಿಗೆ ಒಂದು ಕುಲವನ್ನು ಉಳಿಸುವೆನು ಎಂದು ಹೇಳಿದನು.


ಆದರೆ ಅರಸನಾದ ಯೆಹೋರಾಮನ ಮಗಳೂ ಅಹಜ್ಯನ ತಂಗಿಯೂ ಆದ ಯೆಹೋಷೆಬಳೆಂಬಾಕೆಯು ಯಾರಿಗೂ ತಿಳಿಯದಂತೆ ತನ್ನ ಅಣ್ಣನ ಮಗನಾದ ಯೆಹೋವಾಷನನ್ನು ಹತವಾಗುವದಕ್ಕಿದ್ದ ರಾಜಪುತ್ರರ ಮಧ್ಯದಿಂದ ಅವನ ದಾದಿಯೊಡನೆ ತೆಗೆದುಕೊಂಡು ಹೋಗಿ ಮಲಗುವ ಕೋಣೆಯಲ್ಲಿ ಅಡಗಿಸಿಟ್ಟಳು.


ನಿನ್ನ ಸೇವಕನಾದ ದಾವೀದನನ್ನು ನೆನಪುಮಾಡಿಕೋ; ನಿನ್ನ ಅಭಿಷಿಕ್ತನನ್ನು ತಳ್ಳಿಬಿಡಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು