2 ಅರಸುಗಳು 8:4 - ಕನ್ನಡ ಸತ್ಯವೇದವು J.V. (BSI)4 ಆ ಸಮಯದಲ್ಲಿ ಅರಸನು ದೇವರ ಮನುಷ್ಯನ ಸೇವಕನಾದ ಗೇಹಜಿಗೆ - ಎಲೀಷನು ಮಾಡಿದ ಎಲ್ಲಾ ಮಹತ್ಕಾರ್ಯಗಳನ್ನು ನನಗೆ ವಿವರಿಸು ಎಂದು ಆಜ್ಞಾಪಿಸಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆ ಸಮಯದಲ್ಲಿ ಅರಸನು ದೇವರ ಮನುಷ್ಯನ ಸೇವಕನಾದ ಗೇಹಜಿಯೊಂದಿಗೆ ಮಾತನಾಡುತ್ತಾ, “ಎಲೀಷನು ಮಾಡಿದ ಎಲ್ಲಾ ಮಹತ್ಕಾರ್ಯಗಳನ್ನು ನನಗೆ ವಿವರಿಸು” ಎಂದು ಆಜ್ಞಾಪಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆ ಸಮಯದಲ್ಲೇ ಅರಸನು, ದೈವಪುರುಷನ ಸೇವಕನಾದ ಗೇಹಜಿಗೆ, “ಎಲೀಷನು ಮಾಡಿದ ಎಲ್ಲಾ ಅದ್ಭುತಕಾರ್ಯಗಳನ್ನು ನನಗೆ ವಿವರಿಸು,” ಎಂದು ಆಜ್ಞಾಪಿಸಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆ ಸಮಯದಲ್ಲಿ ರಾಜನು ದೇವಮನುಷ್ಯನ ಸೇವಕನಾದ ಗೇಹಜಿಯ ಸಂಗಡ ಮಾತನಾಡುತ್ತಿದ್ದನು. ರಾಜನು ಗೇಹಜಿಗೆ, “ಎಲೀಷನು ಮಾಡಿರುವ ಮಹತ್ಕಾರ್ಯಗಳೆಲ್ಲವುಗಳನ್ನು ನನಗೆ ದಯವಿಟ್ಟು ತಿಳಿಸು” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅರಸನು ದೇವರ ಮನುಷ್ಯನ ಸೇವಕನಾದ ಗೇಹಜಿಯ ಸಂಗಡ ಮಾತನಾಡಿ, “ಎಲೀಷನು ಮಾಡಿದ ಎಲ್ಲಾ ದೊಡ್ಡ ಕ್ರಿಯೆಗಳನ್ನು ನನಗೆ ವಿವರಿಸು,” ಎಂದು ಅವನಿಗೆ ಹೇಳಿದನು. ಅಧ್ಯಾಯವನ್ನು ನೋಡಿ |
ಎಲೀಷನು ಊರಿನ ಹಿರಿಯರೊಡನೆ ತನ್ನ ಮನೆಯಲ್ಲಿ ಕೂತುಕೊಂಡಿದ್ದನು; ಅರಸನು ತನ್ನ ಹತ್ತಿರವಿದ್ದ ಒಬ್ಬ ಆಳನ್ನು ಕಳುಹಿಸಿದನು. ಅವನು ಇನ್ನೂ ದೂರದಲ್ಲಿರುವಾಗಲೇ ಎಲೀಷನು ಹಿರಿಯರಿಗೆ - ನೋಡಿರಿ, ಆ ಕೊಲೆಗಾರನ ಮಗನು ನನ್ನ ತಲೆಯನ್ನು ಹಾರಿಸುವದಕ್ಕೆ ಆಳನ್ನು ಕಳುಹಿಸಿದ್ದಾನೆ. ಆಳು ಇಲ್ಲಿಗೆ ಬಂದ ಕೂಡಲೆ ನೀವು ಬಾಗಲನ್ನು ಮುಚ್ಚಿ ಅವನು ಒಳಗೆ ಬಾರದಂತೆ ಅದನ್ನು ಒತ್ತಿಹಿಡಿಯಿರಿ; ಅವನ ಹಿಂದೆಯೇ ಬರುತ್ತಿರುವ ಅವನೊಡೆಯನ ಕಾಲು ಸಪ್ಪಳವು ಕೇಳಿಸುತ್ತದಲ್ಲಾ ಎಂದು ಹೇಳಿದನು.