2 ಅರಸುಗಳು 8:5 - ಕನ್ನಡ ಸತ್ಯವೇದವು J.V. (BSI)5 ಎಲೀಷನು ಸತ್ತ ಹುಡುಗನಿಗೆ ಜೀವದಾನಮಾಡಿದ ಸಂಗತಿಯನ್ನು ಗೇಹಜಿಯು ವಿವರಿಸುತ್ತಿರುವಾಗಲೇ ಜೀವದಾನಹೊಂದಿದ ಹುಡುಗನ ತಾಯಿಯು ತನ್ನ ಹೊಲಮನೆಗಳಿಗಾಗಿ ಮೊರೆಯಿಡುವದಕ್ಕೋಸ್ಕರ ಅರಸನ ಬಳಿಗೆ ಬಂದಳು. ಕೂಡಲೆ ಗೇಹಜಿಯು - ಅರಸನೇ, ನನ್ನ ಒಡೆಯನೇ, ಎಲೀಷನು ಬದುಕಿಸಿದ ಹುಡುಗನು ಇವನೇ; ಈಕೆಯು ಇವನ ತಾಯಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಎಲೀಷನು ಸತ್ತ ಹುಡುಗನಿಗೆ ಜೀವದಾನಮಾಡಿದ ಸಂಗತಿಯನ್ನು ಗೇಹಜಿಯು ಅರಸನಿಗೆ ವಿವರಿಸುತ್ತಿರುವಾಗಲೇ ಜೀವದಾನಹೊಂದಿದ ಹುಡುಗನ ತಾಯಿಯು ತನ್ನ ಹೊಲಮನೆಗಳಿಗಾಗಿ ಮೊರೆಯಿಡುವುದಕ್ಕೋಸ್ಕರ ಅರಸನ ಬಳಿಗೆ ಬಂದಳು. ಕೂಡಲೇ ಗೇಹಜಿಯು, “ನನ್ನ ಒಡೆಯನೇ, ಎಲೀಷನು ಬದುಕಿಸಿದ ಹುಡುಗನು ಇವನೇ; ಈಕೆಯು ಇವನ ತಾಯಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಎಲೀಷನು ಸತ್ತ ಹುಡುಗನಿಗೆ ಜೀವದಾನಮಾಡಿದ ಸಂಗತಿಯನ್ನು ಗೇಹಜಿಯು ವಿವರಿಸುತ್ತಿರುವಾಗಲೇ, ಜೀವದಾನಹೊಂದಿದ ಹುಡುಗನ ತಾಯಿ ತನ್ನ ಹೊಲಮನೆಗಳಿಗಾಗಿ ಮೊರೆಯಿಡಲು ಅರಸನ ಬಳಿಗೆ ಬಂದಳು. ಕೂಡಲೆ ಗೇಹಜಿಯು, “ಅರಸರೇ, ನನ್ನ ಒಡೆಯರೇ, ಎಲೀಷನು ಬದುಕಿಸಿದ ಹುಡುಗನು ಇವನೇ; ಈಕೆ ಇವನ ತಾಯಿ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಎಲೀಷನು ಸತ್ತಬಾಲಕನಿಗೆ ಮತ್ತೆ ಜೀವವನ್ನು ಬರುವಂತೆ ಮಾಡಿದ್ದರ ಬಗ್ಗೆ ಗೇಹಜಿಯು ರಾಜನಿಗೆ ಹೇಳುತ್ತಿದ್ದನು. ಎಲೀಷನು ಮರಳಿ ಜೀವಬರಿಸಿದ ಬಾಲಕನ ತಾಯಿಯು ಆ ಸಮಯದಲ್ಲಿ ರಾಜನ ಬಳಿಗೆ ಹೋದಳು. ತನ್ನ ಮನೆಯನ್ನು ಮತ್ತು ಭೂಮಿಯನ್ನು ತನಗೆ ಕೊಡಿಸಬೇಕೆಂದು ಕೇಳಿಕೊಳ್ಳಲು ಆಕೆ ಬಂದಿದ್ದಳು. ಗೇಹಜಿಯು, “ನನ್ನ ಒಡೆಯನೇ, ರಾಜನೇ, ಇವಳೇ ಆ ಸ್ತ್ರೀಯು! ಎಲೀಷನು ಮರಳಿ ಜೀವಬರಿಸಿದ ಬಾಲಕನು ಇವನೇ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಗೇಹಜಿಯು ಸತ್ತ ಹುಡುಗನನ್ನು ಹೇಗೆ ಎಲೀಷನು ಬದುಕಿಸಿದನೆಂದು ಅರಸನಿಗೆ ವಿವರವಾಗಿ ಹೇಳುತ್ತಿರುವಾಗಲೇ, ಎಲೀಷನು ಬದುಕಿಸಿದ ಹುಡುಗನ ತಾಯಿಯು ತನ್ನ ಹೊಲಮನೆಗೋಸ್ಕರ, ಮೊರೆಯಿಡಲು ಅರಸನ ಬಳಿಗೆ ಬಂದಳು. ಕೂಡಲೆ ಗೇಹಜಿಯು, “ನನ್ನ ಒಡೆಯನೇ, ಅರಸನೇ, ಇವಳೇ ಆ ಸ್ತ್ರೀಯು, ಎಲೀಷನು ಬದುಕಿಸಿದ ಆ ಹುಡುಗನು ಇವನೇ,” ಎಂದನು. ಅಧ್ಯಾಯವನ್ನು ನೋಡಿ |