Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 9:1 - ಕನ್ನಡ ಸತ್ಯವೇದವು J.V. (BSI)

1 ಪ್ರವಾದಿಯಾದ ಎಲೀಷನು ಪ್ರವಾದಿ ಮಂಡಲಿಯವರಲ್ಲಿ ಒಬ್ಬನನ್ನು ಕರೆದು ಅವನಿಗೆ - ನಡುಕಟ್ಟಿ ಈ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ರಾಮೋತ್ ಗಿಲ್ಯಾದಿಗೆ ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಪ್ರವಾದಿಯಾದ ಎಲೀಷನು ಪ್ರವಾದಿಮಂಡಳಿಯವರಲ್ಲಿ ಒಬ್ಬನನ್ನು ಕರೆದು ಅವನಿಗೆ, “ಈ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ರಾಮೋತ್ ಗಿಲ್ಯಾದಿಗೆ ಹೋಗಲು ಸಿದ್ಧನಾಗು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಪ್ರವಾದಿ ಎಲೀಷನು ಪ್ರವಾದಿಮಂಡಲಿಯವರಲ್ಲಿ ಒಬ್ಬನನ್ನು ಕರೆದು, “ಈ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ರಾಮೋತ್ ಗಿಲ್ಯಾದಿಗೆ ಹೋಗಲು ಸಿದ್ಧನಾಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಪ್ರವಾದಿಯಾದ ಎಲೀಷನು ಪ್ರವಾದಿಗಳ ಗುಂಪಿನಿಂದ ಒಬ್ಬನನ್ನು ಕರೆದು ಅವನಿಗೆ, “ಎಣ್ಣೆಯಿರುವ ಈ ಸಣ್ಣ ಸೀಸೆಯನ್ನು ನಿನ್ನ ಕೈಗಳಲ್ಲಿ ತೆಗೆದುಕೊಂಡು ರಾಮೋತ್‌ಗಿಲ್ಯಾದಿಗೆ ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಪ್ರವಾದಿಯಾದ ಎಲೀಷನು ಪ್ರವಾದಿಗಳ ಮಂಡಳಿಯಲ್ಲಿ ಒಬ್ಬನನ್ನು ಕರೆದು ಅವನಿಗೆ, “ನಡುವನ್ನು ಕಟ್ಟಿಕೊಂಡು ಈ ಎಣ್ಣೆಯ ಪಾತ್ರೆಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಗಿಲ್ಯಾದಿನ ರಾಮೋತಿಗೆ ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 9:1
25 ತಿಳಿವುಗಳ ಹೋಲಿಕೆ  

ಆ ಆಳು ಮುಂದೆ ಹೋದಾಗ ಸಮುವೇಲನು ಎಣ್ಣೇ ಕುಪ್ಪಿಯಿಂದ ಅವನ ತಲೆಯ ಮೇಲೆ ತೈಲವನ್ನು ಹೊಯ್ದು ಅವನನ್ನು ಮುದ್ದಿಟ್ಟು ಅವನಿಗೆ - ಯೆಹೋವನು ತನ್ನ ಸ್ವಾಸ್ತ್ಯದ ಮೇಲೆ ಪ್ರಭುವಾಗಿರುವದಕ್ಕೋಸ್ಕರ ನಿಜವಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ.


ಆಗ ಎಲೀಷನು ಗೇಹಜಿಗೆ - ನೀನು ನಡು ಕಟ್ಟಿಕೊಂಡು ನನ್ನ ಕೋಲನ್ನು ತೆಗೆದುಕೊಂಡು ಹೋಗಿ ಹುಡುಗನ ಮೋರೆಯ ಮೇಲಿಡು; ಹೋಗುವಾಗ ದಾರಿಯಲ್ಲಿ ಯಾರನ್ನೂ ವಂದಿಸಬೇಡ; ಅವರ ವಂದನೆಯನ್ನೂ ಸ್ವೀಕರಿಸಬೇಡ ಎಂದು ಹೇಳಿ ಕಳುಹಿಸಿದನು.


ಯಾಜಕನಾದ ಚಾದೋಕನು ದೇವದರ್ಶನದ ಗುಡಾರದಲ್ಲಿರುವ ಎಣ್ಣೆಯ ಕೊಂಬನ್ನು ತೆಗೆದುಕೊಂಡು ಸೊಲೊಮೋನನನ್ನು ಅಭಿಷೇಕಿಸಿದನು. ಕೂಡಲೆ ಕೊಂಬನ್ನೂದಿ ಎಲ್ಲಾ ಜನರು - ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ ಎಂದು ಆರ್ಭಟಿಸಿದರು.


ಯೆಹೋವನು ಸಮುವೇಲನಿಗೆ - ನಾನು ಸೌಲನನ್ನು ಇಸ್ರಾಯೇಲ್ಯರ ಅರಸನಾಗಿರುವದಕ್ಕೆ ಅಯೋಗ್ಯನೆಂದು ತಳ್ಳಿ ಬಿಟ್ಟೆನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬನ್ನು ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇವಿುನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ ಎಂದು ಹೇಳಿದನು.


ಆದದರಿಂದ ನೀವು ಮನಸ್ಸಿನ ನಡುವನ್ನು ಕಟ್ಟಿಕೊಂಡು ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಭಾಗ್ಯದ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ.


ತರುವಾಯ ಅವರಿಬ್ಬರೂ ಬೇತೇಲಿಗೆ ಹೋದರು. ಬೇತೇಲಿನ ಪ್ರವಾದಿಮಂಡಲಿಯವರು ಎಲೀಷನನ್ನು ಎದುರುಗೊಂಡು ಅವನನ್ನು - ಯೆಹೋವನು ಈಹೊತ್ತು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ಮೇಲಕ್ಕೆ ತೆಗೆದುಕೊಳ್ಳುವನೆಂಬದು ನಿನಗೆ ಗೊತ್ತುಂಟೋ ಎಂದು ಕೇಳಿದರು. ಅದಕ್ಕೆ ಅವನು -


ಇಸ್ರಾಯೇಲ್ಯರೇ, ಕೇಳಿರಿ; ನೀವು ಬದುಕಿಕೊಂಡು ನಿಮ್ಮ ಪಿತೃಗಳ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಂತೆ ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನಿಸಿ ಅನುಸರಿಸಬೇಕು.


ಹೀಗಿರಲು ನೀನು ಎದ್ದು ನಡುಕಟ್ಟಿಕೊಂಡು ನಾನು ಆಜ್ಞಾಪಿಸುವದನ್ನೆಲ್ಲಾ ಅವರಿಗೆ ಹೇಳು. ನೀನು ಅವರಿಗೆ ಕಂಗೆಡಬೇಡ; ಕಂಗೆಟ್ಟರೆ ನಾನೂ ನಿನ್ನನ್ನು ಅವರ ಮುಂದೆ ಕಂಗೆಡಿಸುವೆನು.


ಯೆಹೋವನು ತನ್ನ ಹತ್ತಿರ ನಿಂತವರನ್ನು - ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್‍ಗಿಲ್ಯಾದಿನ ಯುದ್ಧಕ್ಕೆ ಯಾರು ಪ್ರೇರಿಸುವಿರಿ ಎಂದು ಕೇಳಿದಾಗ ಒಬ್ಬನು ಈ ತರವಾಗಿಯೂ ಇನ್ನೊಬ್ಬನು ಆ ತರವಾಗಿಯೂ ಉತ್ತರ ಕೊಟ್ಟರು.


ಯೆಹೋಷಾಫಾಟನನ್ನು - ಯುದ್ಧಮಾಡುವದಕ್ಕಾಗಿ ನೀನೂ ನಮ್ಮ ಜೊತೆಯಲ್ಲಿ ರಾಮೋತ್‍ಗಿಲ್ಯಾದಿಗೆ ಬರುತ್ತೀಯೋ ಎಂದು ಕೇಳಲು ಅವನು - ನಾನೂ ನೀನೂ, ನನ್ನ ಜನರೂ ನಿನ್ನ ಜನರೂ, ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇಯಲ್ಲವೋ ಎಂದು ಉತ್ತರಕೊಟ್ಟು


ಪ್ರವಾದಿಮಂಡಲಿಯವರಲ್ಲಿ ಒಬ್ಬನು ಯೆಹೋವ ಪ್ರೇರಿತನಾಗಿ ತನ್ನ ಜೊತೆಗಾರನಿಗೆ - ನನ್ನನ್ನು ಹೊಡಿ ಎಂದು ಹೇಳಿದನು. ಅದಕ್ಕೆ ಅವನು ಒಪ್ಪಲಿಲ್ಲ.


ಯೆಹೋವನ ಹಸ್ತವು ಎಲೀಯನ ಸಂಗಡ ಇದ್ದದರಿಂದ ಅವನು ನಡುಕಟ್ಟಿಕೊಂಡು ಅಹಾಬನ ಮುಂದೆ ಓಡುತ್ತಾ ಇಜ್ರೇಲನ್ನು ಸೇರಿದನು.


ಪೆಗೋರದ ಬಾಳನ ಸಂಗತಿಯಲ್ಲಿ ಯೆಹೋವನು ಮಾಡಿದ ಕಾರ್ಯವನ್ನು ನೀವು ನೋಡೇ ಇದ್ದೀರಷ್ಟೆ; ಪೆಗೋರದ ಬಾಳನನ್ನು ಅನುಸರಿಸಿದವರೆಲ್ಲರನ್ನೂ ನಿಮ್ಮ ದೇವರಾದ ಯೆಹೋವನು ನಿಮ್ಮಲ್ಲಿರದಂತೆ ನಾಶಮಾಡಿದನಲ್ಲಾ;


ಒಂದು ದಿವಸ ಪ್ರವಾದಿಮಂಡಲಿಯವರಲ್ಲೊಬ್ಬನ ಹೆಂಡತಿಯು ಎಲೀಷನ ಹತ್ತಿರ ಬಂದು ಅವನಿಗೆ - ನಿನ್ನ ಸೇವಕನಾದ ನನ್ನ ಗಂಡನು ಮರಣಹೊಂದಿದನು; ಅವನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿದ್ದನೆಂಬದು ನಿನಗೆ ಗೊತ್ತುಂಟಲ್ಲಾ; ಸಾಲಕೊಟ್ಟವನು ನನ್ನ ಇಬ್ಬರು ಮಕ್ಕಳನ್ನು ದಾಸರನ್ನಾಗಿ ತೆಗೆದುಕೊಂಡು ಹೋಗುವದಕ್ಕೆ ಬಂದಿದ್ದಾನೆ ಎಂದು ಮೊರೆಯಿಟ್ಟಳು.


ಬಹು ಬೆಲೆಯುಳ್ಳ ಸುಗಂಧ ತೈಲದ ಭರಣಿಯನ್ನು ತೆಗೆದುಕೊಂಡು ಆತನ ಬಳಿಗೆ ಬಂದು ಆತನು ಊಟಕ್ಕೆ ಕೂತಿರುವಾಗ ಆ ತೈಲವನ್ನು ಆತನ ತಲೆಯ ಮೇಲೆ ಹೊಯಿದಳು.


ನಿಂಷಿಯ ಮಗನಾದ ಯೇಹುವನ್ನು ಇಸ್ರಾಯೇಲ್ಯರ ಅರಸನನ್ನಾಗಿಯೂ ಅಬೇಲ್‍ಮೆಹೋಲದವನೂ ಶಾಫಾಟನ ಮಗನೂ ಆದ ಎಲೀಷನನ್ನು ನಿನಗೆ ಬದಲಾಗಿ ಪ್ರವಾದಿಯನ್ನಾಗಿಯೂ ಅಭೀಷೇಕಿಸು.


ಆಗ ಪ್ರವಾದಿಯ ಸೇವಕನಾದ ಆ ಯೌವನಸ್ಥನು ರಾಮೋತ್‍ಗಿಲ್ಯಾದಿಗೆ ಹೋಗಿ


ಅಲ್ಲಿನ ಪ್ರವಾದಿಮಂಡಲಿಯವರು ಅವನನ್ನು ಎದುರುಗೊಂಡು - ಯೆಹೋವನು ಈಹೊತ್ತು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ಮೇಲಕ್ಕೆ ಕರೆದುಕೊಳ್ಳುವನೆಂದು ನಿನಗೆ ಗೊತ್ತುಂಟೋ ಎಂದು ಕೇಳಿದರು. ಅದಕ್ಕೆ ಅವನು - ಗೊತ್ತುಂಟು, ಸುಮ್ಮನಿರ್ರಿ ಎಂದು ಉತ್ತರಕೊಟ್ಟನು.


ಪ್ರವಾದಿ ಮಂಡಲಿಯವರಲ್ಲಿ ಐವತ್ತು ಜನರು ಇವರ ಹಿಂದಿನಿಂದಲೇ ಬಂದು ಸ್ವಲ್ಪ ದೂರದಲ್ಲಿ ನಿಂತುಕೊಂಡರು.


ದೂರದಲ್ಲಿ ನಿಂತಿದ್ದ ಯೆರಿಕೋವಿನ ಪ್ರವಾದಿ ಮಂಡಲಿಯವರು ಇದನ್ನು ಕಂಡು ಎಲೀಯನಿಗಿದ್ದ ಆತ್ಮವು ಎಲೀಷನ ಮೇಲೆ ಬಂದಿತೆಂದು ತಿಳಿದುಕೊಂಡು ಅವನನ್ನು ಎದುರುಗೊಂಡು ಅವನಿಗೆ ಸಾಷ್ಟಾಂಗ ನಮಸ್ಕಾರಮಾಡಿದರು.


ಯೆರೂಸಲೇವಿುನವರು ಯೆಹೋರಾಮನಿಗೆ ಬದಲಾಗಿ ಅವನ ಕಿರಿಯ ಮಗನಾದ ಅಹಜ್ಯನನ್ನು ಅರಸನನ್ನಾಗಿ ಮಾಡಿದರು. ಅರಬಿಯರೊಡನೆ [ಯೆಹೋರಾಮನ] ಪಾಳೆಯಕ್ಕೆ ಬಂದ ಕೊಳ್ಳೆಗಾರರು ಅವನ ಹಿರಿಯ ಮಕ್ಕಳನ್ನೆಲ್ಲಾ ಕೊಂದುಬಿಟ್ಟಿದ್ದರು. ಆದದರಿಂದ ಯೆಹೂದದ ಅರಸನಾದ ಯೆಹೋರಾಮನ ಮಗ ಅಹಜ್ಯನು ಅರಸನಾದನು.


ಅವರ ಪ್ರೇರಣೆಯಿಂದ ಇಸ್ರಾಯೇಲ್ಯರ ಅರಸನೂ ಅಹಾಬನ ಮಗನೂ ಆದ ಯೋರಾಮನ ಜೊತೆಯಲ್ಲಿ ಅರಾಮ್ಯರ ಅರಸನಾದ ಹಜಾಯೇಲನಿಗೆ ವಿರುದ್ಧವಾಗಿ ಯುದ್ಧಮಾಡುವದಕ್ಕೆ ರಾಮೋತ್‍ಗಿಲ್ಯಾದಿಗೆ ಹೋದನು. ಅರಾಮ್ಯರು ಯೋರಾಮನನ್ನು ಯುದ್ಧದಲ್ಲಿ ಗಾಯಪಡಿಸಲು ಅವನು ಆ ಗಾಯಗಳನ್ನು ಮಾಯಿಸಿಕೊಳ್ಳುವದಕ್ಕಾಗಿ ಇಜ್ರೇಲಿಗೆ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು