2 ಅರಸುಗಳು 9:12 - ಕನ್ನಡ ಸತ್ಯವೇದವು J.V. (BSI)12 ಆದರೆ ಅವರು - ಅದು ಸುಳ್ಳು; ಅವನು ಹೇಳಿದ್ದನ್ನು ತಿಳಿಸು ಎಂದು ಅವನನ್ನು ಒತ್ತಾಯಪಡಿಸಿದದರಿಂದ ಅವನು - ನಿನ್ನನ್ನು ಇಸ್ರಾಯೇಲ್ಯರ ಅರಸನಾಗುವದಕ್ಕೆ ಅಭಿಷೇಕಿಸಿದ್ದೇನೆಂಬದಾಗಿ ಯೆಹೋವನು ಅನ್ನುತ್ತಾನೆ ಎಂಬೀ ಮೊದಲಾದ ಮಾತುಗಳನ್ನು ಹೇಳಿದನು ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆದರೆ ಅವರು, “ಅದು ಸುಳ್ಳು, ಅವನು ಹೇಳಿದ್ದನ್ನು ತಿಳಿಸು” ಎಂದು ಅವನನ್ನು ಒತ್ತಾಯಪಡಿಸಿದ್ದರಿಂದ ಯೇಹುವು, “ನಿನ್ನನ್ನು ಇಸ್ರಾಯೇಲರ ಅರಸನಾಗುವುದಕ್ಕೆ ಅಭಿಷೇಕಿಸಿದ್ದೇನೆ ಎಂಬುದಾಗಿ ಯೆಹೋವನು ಅನ್ನುತ್ತಾನೆ ಎಂದು ಅವನು ಹೇಳಿದ ಎಲ್ಲ ಮಾತುಗಳನ್ನು ಹೇಳಿದನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆದರೆ ಅವರು, “ಅದು ಸುಳ್ಳು; ಅವನು ಹೇಳಿದ್ದನ್ನು ತಿಳಿಸು,” ಎಂದು ಅವನನ್ನು ಒತ್ತಾಯಪಡಿಸಿದರು. ಆದ್ದರಿಂದ ಅವನು, “ನಿನ್ನನ್ನು ಇಸ್ರಯೇಲರ ಅರಸನಾಗುವುದಕ್ಕೆ ಅಭಿಷೇಕಿಸಿದ್ದಾನೆಂಬುದಾಗಿ ಸರ್ವೇಶ್ವರ ನುಡಿದಿದ್ದಾರೆ ಎಂಬೀ ಮೊದಲಾದ ಮಾತುಗಳನ್ನು ಹೇಳಿದನು,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆ ಅಧಿಕಾರಿಗಳು, “ಇಲ್ಲ! ನಮಗೆ ನಿಜವನ್ನು ಹೇಳು. ಅವನು ಹೇಳಿದುದೇನು?” ಎಂದು ಕೇಳಿದರು. ಆ ತರುಣ ಪ್ರವಾದಿಯು ತಿಳಿಸಿದ್ದ ಸಂಗತಿಗಳನ್ನು ಯೇಹುವು ಆ ಅಧಿಕಾರಿಗಳಿಗೆ ಹೇಳಿದನು. ಯೇಹುವು ಅವರಿಗೆ, “ಅವನು ಹೇಳಿದ್ದೇನೆಂದರೆ, ಯೆಹೋವನು ಹೀಗೆನ್ನುವನು: ಇಸ್ರೇಲಿನ ನೂತನ ರಾಜನನ್ನಾಗಿ ನಿನ್ನನ್ನು ನಾನು ಅಭಿಷೇಕಿಸಿದ್ದೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅದಕ್ಕವರು, “ಅದು ಸುಳ್ಳು, ದಯಮಾಡಿ ನಮಗೆ ತಿಳಿಸು,” ಎಂದರು. ಆದ್ದರಿಂದ ಅವನು, “ಇಸ್ರಾಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇಕಿಸಿದ್ದೇನೆಂಬುದಾಗಿ ಯೆಹೋವ ದೇವರು ಹೇಳುತ್ತಾರೆಂದು ಹೀಗೆ ನನಗೆ ಹೇಳಿದನು,” ಎಂದನು. ಅಧ್ಯಾಯವನ್ನು ನೋಡಿ |