Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 9:13 - ಕನ್ನಡ ಸತ್ಯವೇದವು J.V. (BSI)

13 ಕೂಡಲೆ ಅವರು ಅವನಿಗೋಸ್ಕರ ಮೆಟ್ಲುಗಳ ಮೇಲೆ ತಮ್ಮ ಬಟ್ಟೆಗಳನ್ನು ಹಾಸಿ ತುತೂರಿಯನ್ನು ಊದಿಸಿ ಯೇಹುವು ಅರಸನಾಗಿದ್ದಾನೆಂದು ಆರ್ಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಕೂಡಲೆ ಅವರು ಅವನಿಗೋಸ್ಕರ ಮೆಟ್ಟಿಲುಗಳ ಮೇಲೆ ತಮ್ಮ ಬಟ್ಟೆಗಳನ್ನು ಹಾಸಿ ತುತ್ತೂರಿಯನ್ನು ಊದಿಸಿ ಯೇಹುವು ಅರಸನಾಗಿದ್ದಾನೆಂದು ಘೋಷಣೆಗಳನ್ನು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಕೂಡಲೆ ಅವರು ಅವನಿಗಾಗಿ ಮೆಟ್ಟಲುಗಳ ಮೇಲೆ ತಮ್ಮ ಬಟ್ಟೆಗಳನ್ನು ಹಾಸಿ, ತುತೂರಿಯನ್ನು ಊದಿಸಿ, “ಯೇಹುವು ಅರಸನಾಗಿದ್ದಾನೆ,” ಎಂದು ಆರ್ಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಗ ಪ್ರತಿಯೊಬ್ಬ ಅಧಿಕಾರಿಯೂ ತಮ್ಮತಮ್ಮ ನಿಲುವಂಗಿಗಳನ್ನು ತೆಗೆದು, ಅವುಗಳನ್ನು ಮೆಟ್ಟಿಲುಗಳ ಮೇಲೆ, ಯೇಹುವಿನ ಮುಂದೆ ಇಟ್ಟರು. ಅನಂತರ ಅವರು ತುತ್ತೂರಿಯನ್ನೂದಿ, “ಯೇಹು ರಾಜನು!” ಎಂದು ಘೋಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ಅವರು ತ್ವರೆಪಟ್ಟು ಪ್ರತಿಯೊಬ್ಬರು ತಮ್ಮ ಹೊರ ಉಡುಪುಗಳನ್ನು ತೆಗೆದು, ಮೆಟ್ಟಿಲುಗಳ ಮೇಲೆ ಹಾಸಿ, ಇವನನ್ನು ಕುಳ್ಳಿರಿಸಿ, ತುತೂರಿಗಳನ್ನು ಊದಿ, “ಯೇಹುವು ಅರಸನಾಗಿದ್ದಾನೆ,” ಎಂದು ಆರ್ಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 9:13
12 ತಿಳಿವುಗಳ ಹೋಲಿಕೆ  

ಯಾಜಕನಾದ ಚಾದೋಕನು ದೇವದರ್ಶನದ ಗುಡಾರದಲ್ಲಿರುವ ಎಣ್ಣೆಯ ಕೊಂಬನ್ನು ತೆಗೆದುಕೊಂಡು ಸೊಲೊಮೋನನನ್ನು ಅಭಿಷೇಕಿಸಿದನು. ಕೂಡಲೆ ಕೊಂಬನ್ನೂದಿ ಎಲ್ಲಾ ಜನರು - ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ ಎಂದು ಆರ್ಭಟಿಸಿದರು.


ಅಲ್ಲಿ ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಅವನನ್ನು ಇಸ್ರಾಯೇಲ್ಯರ ಅರಸನನ್ನಾಗಿ ಅಭಿಷೇಕಿಸಲಿ; ಅನಂತರ ಕೊಂಬನ್ನೂದಿರಿ; ಎಲ್ಲರೂ ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ ಎಂದು ಆರ್ಭಟಿಸಲಿ.


ತುತೂರಿಗಳನ್ನೂ ಕೊಂಬನ್ನೂ ಊದುತ್ತಾ ಯೆಹೋವರಾಜನಿಗೆ ಜಯಘೋಷಮಾಡಿರಿ.


ಅವನು ಗೂಢಚಾರರನ್ನು ಕಳುಹಿಸಿ ಇಸ್ರಾಯೇಲ್ಯರ ಎಲ್ಲಾ ಕುಲದವರಿಗೆ - ನೀವು ತುತೂರಿಯ ಧ್ವನಿಯನ್ನು ಕೇಳುತ್ತಲೆ ಅಬ್ಷಾಲೋಮನು ಹೆಬ್ರೋನಿನಲ್ಲಿ ಅರಸನಾದನೆಂದು ಆರ್ಭಟಿಸಿರಿ ಎಂದು ಹೇಳಿಸಿದ್ದನು.


ಆದರೆ ಅವರು - ಅದು ಸುಳ್ಳು; ಅವನು ಹೇಳಿದ್ದನ್ನು ತಿಳಿಸು ಎಂದು ಅವನನ್ನು ಒತ್ತಾಯಪಡಿಸಿದದರಿಂದ ಅವನು - ನಿನ್ನನ್ನು ಇಸ್ರಾಯೇಲ್ಯರ ಅರಸನಾಗುವದಕ್ಕೆ ಅಭಿಷೇಕಿಸಿದ್ದೇನೆಂಬದಾಗಿ ಯೆಹೋವನು ಅನ್ನುತ್ತಾನೆ ಎಂಬೀ ಮೊದಲಾದ ಮಾತುಗಳನ್ನು ಹೇಳಿದನು ಎಂದು ಉತ್ತರಕೊಟ್ಟನು.


ಅವನು ಗಟ್ಟಾ ಇಳಿದು ಹೋಗಿ ಹೋರಿಕುರಿ ಮುಂತಾದ ಹಲವು ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ ಎಲ್ಲಾ ರಾಜಪುತ್ರರನ್ನೂ ಸೇನಾಪತಿಗಳನ್ನೂ ಯಾಜಕನಾದ ಎಬ್ಯಾತಾರನನ್ನೂ ಔತಣಕ್ಕೆ ಕರೆದಿದ್ದಾನೆ. ಅವರು ಅವನ ಪಂಕ್ತಿಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು ಅರಸನಾದ ಅದೋನೀಯನು ಚಿರಂಜೀವಿಯಾಗಿರಲಿ ಎಂದು ಕೂಗುತ್ತಿರುತ್ತಾರೆ.


ಯೆಹೋಯಾದಾವನು ರಾಜಪುತ್ರನನ್ನು ಹೊರಗೆ ಕರಕೊಂಡು ಬಂದು ಅವನ ತಲೆಯ ಮೇಲೆ ಕಿರೀಟವನ್ನಿಟ್ಟು ಕೈಯಲ್ಲಿ ಧರ್ಮಶಾಸ್ತ್ರವನ್ನು ಕೊಟ್ಟು ಅವನಿಗೆ ರಾಜ್ಯಾಭಿಷೇಕಮಾಡಿದನು. ಕೂಡಲೆ ಜನರು ಚಪ್ಪಾಳೆಹೊಡೆದು ಅರಸನು ಚಿರಂಜೀವಿಯಾಗಿರಲಿ ಎಂದು ಕೂಗಿದರು.


ಅಲ್ಲಿ ಅರಸನು ಪದ್ಧತಿಯ ಪ್ರಕಾರ ಸ್ತಂಭದ ಬಳಿಯಲ್ಲಿ ನಿಂತಿದ್ದನು; ಅಧಿಪತಿಗಳೂ ತುತೂರಿಗಳನ್ನು ಊದುವವರೂ ಅರಸನ ಹತ್ತಿರ ಇದ್ದರು. ಸಾಧಾರಣ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಇದನ್ನು ಕಂಡ ಕೂಡಲೆ ಆಕೆಯು ಬಟ್ಟೆಗಳನ್ನು ಹರಿದುಕೊಂಡು - ದ್ರೋಹ, ದ್ರೋಹ ಎಂದು ಕೂಗಿದಳು.


ಆತನು ಹೋಗುತ್ತಿರುವಾಗ ಅವರು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು