2 ಅರಸುಗಳು 9:14 - ಕನ್ನಡ ಸತ್ಯವೇದವು J.V. (BSI)14 ಹೀಗೆ ನಿಂಷಿಯ ಮೊಮ್ಮಗನೂ ಯೆಹೋಶಾಫಾಟನ ಮಗನೂ ಆದ ಯೆಹುವು ಯೋರಾಮನಿಗೆ ವಿರೋಧವಾಗಿ ಒಳಸಂಚುಮಾಡಿದನು. (ಅರಾಮ್ಯರ ಅರಸನಾದ ಹಜಾಯೇಲನು ರಾಮೋತ್‍ಗಿಲ್ಯಾದಿಗೆ ವಿರೋಧವಾಗಿ ಬರಲು ಯೋರಾಮನು ಅದನ್ನು ಕಾಪಾಡುವದಕ್ಕೋಸ್ಕರ ಎಲ್ಲಾ ಇಸ್ರಾಯೇಲ್ಯರ ಸಹಿತವಾಗಿ ಹೋಗಿ ಹಜಾಯೇಲನೊಡನೆ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಹೀಗೆ ನಿಂಷಿಯ ಮೊಮ್ಮಗನೂ ಯೆಹೋಷಾಫಾಟನ ಮಗನೂ ಆದ ಯೇಹುವು ಯೋರಾಮನಿಗೆ ವಿರುದ್ಧವಾಗಿ ಒಳಸಂಚುಮಾಡಿದನು. ಅರಾಮ್ಯರ ಅರಸನಾದ ಹಜಾಯೇಲನು ರಾಮೋತ್ ಗಿಲ್ಯಾದಿಗೆ ವಿರುದ್ಧವಾಗಿ ಬರಲು ಯೋರಾಮನು ಅದನ್ನು ಕಾಪಾಡುವುದಕ್ಕಾಗಿ ಎಲ್ಲಾ ಇಸ್ರಾಯೇಲರ ಸಹಿತವಾಗಿ ಹೋಗಿ ಅದಕ್ಕೆ ಕಾವಲುದಂಡುಗಳನ್ನು ಇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಹೀಗೆ ನಿಂಷಿಯ ಮೊಮ್ಮಗನೂ ಯೆಹೋಷಾಫಾಟನ ಮಗನೂ ಆದ ಯೇಹುವು ಯೋರಾಮನಿಗೆ ಒಳಸಂಚು ಮಾಡಿದನು. (ಸಿರಿಯಾದವರ ಅರಸನಾದ ಹಜಾಯೇಲನು ರಾಮೋತ್ ಗಿಲ್ಯಾದಿಗೆ ಮುತ್ತಿಗೆ ಹಾಕಿದನು. ಯೋರಾಮನು ಅದನ್ನು ಕಾಪಾಡುವುದಕ್ಕಾಗಿ ಎಲ್ಲಾ ಇಸ್ರಯೇಲರ ಸಹಿತ ಹೋಗಿ, ಹಜಾಯೇಲನೊಡನೆ ಯುದ್ಧಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಯೆಹೋಷಾಫಾಟನ ಮಗನೂ ನಿಂಷಿಯ ಮೊಮ್ಮಗನೂ ಆದ ಯೇಹುವು ಯೋರಾಮನ ವಿರುದ್ಧ ಒಳಸಂಚುಮಾಡಿದನು. ಆ ಸಮಯದಲ್ಲಿ ರಾಮೋತ್‌ಗಿಲ್ಯಾದನ್ನು ಅರಾಮ್ಯರ ರಾಜನಾದ ಹಜಾಯೇಲನಿಂದ ರಕ್ಷಿಸಲು, ಯೋರಾಮನೂ ಇಸ್ರೇಲರೂ ಪ್ರಯತ್ನಿಸಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಹೀಗೆಯೇ ನಿಂಷಿಯ ಮಗ ಯೆಹೋಷಾಫಾಟನ ಮಗ ಯೇಹುವು ಯೋರಾಮನಿಗೆ ವಿರೋಧವಾಗಿ ಒಳಸಂಚು ಮಾಡಿದನು. ಅರಾಮ್ಯರ ಅರಸನಾದ ಹಜಾಯೇಲನ ನಿಮಿತ್ತ ಯೋರಾಮನೂ, ಸಮಸ್ತ ಇಸ್ರಾಯೇಲರೂ ಗಿಲ್ಯಾದಿನ ರಾಮೋತಿನಲ್ಲಿ ಕಾಯುತ್ತಿದ್ದರು. ಅಧ್ಯಾಯವನ್ನು ನೋಡಿ |