2 ಅರಸುಗಳು 9:19 - ಕನ್ನಡ ಸತ್ಯವೇದವು J.V. (BSI)19 ಇವನು ಹೋಗಿ ಯೇಹುವನ್ನು ಎದುರುಗೊಂಡು - ಅರಸನು ಶುಭವಾರ್ತೆಯುಂಟೋ ಎಂದು ಕೇಳುತ್ತಾನೆ ಅನ್ನಲು ಅವನು - ಶುಭವಾರ್ತೆ ನಿನಗೇನು? ನನ್ನ ಹಿಂದೆ ಬಾ ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅವನು ಹೋಗಿ ಯೇಹುವನ್ನು ಎದುರುಗೊಂಡು, “ಅರಸನು ಶುಭವಾರ್ತೆಯುಂಟೋ? ಎಂದು ಕೇಳುತ್ತಾನೆ” ಎನ್ನಲು ಅವನು, “ಶುಭವಾರ್ತೆಯಿಂದ ನಿನಗೇನಾಗಬೇಕಾಗಿದೆ ನೀನು ನನ್ನ ಹಿಂದೆ ಬಾ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಇವನು ಹೋಗಿ ಯೇಹುವನ್ನು ಎದುರುಗೊಂಡು, “ಅರಸರು ‘ಶುಭವಾರ್ತೆಯುಂಟೊ?’ ಎಂದು ಕೇಳುತ್ತಾರೆ,” ಎನ್ನಲು ಅವನು, “ಶುಭವಾರ್ತೆಯಿಂದ ನಿನಗೇನು?, ನನ್ನ ಹಿಂದೆ ಬಾ,” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆಗ ಯೋರಾಮನು ಎರಡನೆಯವನನ್ನು ಕುದುರೆಯ ಮೇಲೆ ಕಳುಹಿಸಿದನು. ಅವನು ಯೇಹುವಿನ ಗುಂಪಿನ ಬಳಿಗೆ ಬಂದು, “ರಾಜನಾದ ಯೋರಾಮನು, ‘ಶುಭವಾರ್ತೆಯುಂಟೋ?’ ಎಂದು ಕೇಳುತ್ತಿರುವನು” ಎಂದು ಹೇಳಿದನು. ಯೇಹುವು, “ನಮ್ಮ ಶುಭವಾರ್ತೆಯಿಂದ ನೀನು ಮಾಡುವುದೇನಿದೆ! ಬಾ, ನನ್ನನ್ನು ಹಿಂಬಾಲಿಸು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆಗ ಅರಸನು ಇನ್ನೊಬ್ಬ ರಾಹುತನನ್ನು ಕಳುಹಿಸಿದನು. ಇವನು ಹೋಗಿ ಯೇಹುವನ್ನು ಎದುರುಗೊಂಡು, “ಅರಸನು, ‘ಶುಭವಾರ್ತೆ ಉಂಟೋ?’ ಎಂದು ಕೇಳುತ್ತಾನೆ,” ಎನ್ನಲು ಅವನು, “ಶುಭವಾರ್ತೆಯಿಂದ ನಿನಗೇನು? ನನ್ನ ಹಿಂದೆ ಬಾ,” ಎಂದನು. ಅಧ್ಯಾಯವನ್ನು ನೋಡಿ |