Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 9:25 - ಕನ್ನಡ ಸತ್ಯವೇದವು J.V. (BSI)

25 ಆಗ ಯೇಹುವು ತನ್ನ ಜೊತೆಯಲ್ಲಿದ್ದ ಬಿದ್ಕರನೆಂಬ ಸೇನಾಪತಿಗೆ - ಯೋರಾಮನ ಶವವನ್ನು ಎತ್ತಿ ಇಜ್ರೇಲಿನವನಾದ ನಾಬೋತನ ಹೊಲದಲ್ಲಿ ಹಾಕು. ಒಂದು ದಿವಸ ನಾವಿಬ್ಬರೂ ಕುದುರೆಹತ್ತಿ ಇವನ ತಂದೆಯಾದ ಅಹಾಬನ ಹಿಂದಿನಿಂದ ಹೋಗುತ್ತಿರುವಾಗ ಯೆಹೋವನು ಅಹಾಬನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆಗ ಯೇಹುವು ತನ್ನ ಜೊತೆಯಲ್ಲಿದ್ದ ಬಿದ್ಕರನೆಂಬ ಸೇನಾಪತಿಗೆ, “ಯೋರಾಮನ ಶವವನ್ನು ಎತ್ತಿ ಇಜ್ರೇಲಿನವನಾದ ನಾಬೋತನ ಹೊಲದಲ್ಲಿ ಬಿಸಾಡು. ಒಂದು ದಿನ ನಾವಿಬ್ಬರೂ ಕುದುರೆ ಹತ್ತಿ, ಇವನ ತಂದೆಯಾದ ಅಹಾಬನ ಹಿಂದಿನಿಂದ ಹೋಗುತ್ತಿರುವಾಗ, ಯೆಹೋವನು ಈ ಪ್ರವಾದನೆಯನ್ನು ಅವನ ವಿರುದ್ಧ ಹೇಳಿದ್ದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆಗ ಯೇಹುವು ತನ್ನ ಜೊತೆಯಲ್ಲಿದ್ದ ಬಿದ್ಕರನೆಂಬ ಸೇನಾಪತಿಗೆ, “ಯೋರಾಮನ ಶವವನ್ನು ಎತ್ತಿ ಜೆಸ್ರೀಲಿನವನಾದ ನಾಬೋತನ ಹೊಲದಲ್ಲಿ ಹಾಕು. ಒಂದು ದಿನ ನಾವಿಬ್ಬರೂ ಕುದುರೆ ಹತ್ತಿ ಇವನ ತಂದೆಯಾದ ಅಹಾಬನ ಹಿಂದಿನಿಂದ ಹೋಗುತ್ತಿರುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಯೇಹು ತನ್ನ ರಥದ ಸಾರಥಿಯಾದ ಬಿದ್ಕರನಿಗೆ, “ಯೋರಾಮನ ದೇಹವನ್ನು ಎತ್ತಿ ಇಜ್ರೇಲಿಯನಾದ ನಾಬೋತನ ಹೊಲದಲ್ಲಿ ಎಸೆದುಬಿಡು. ನಾನು ಮತ್ತು ನೀನು ಯೋರಾಮನ ತಂದೆಯಾದ ಅಹಾಬನ ಸಂಗಡ ಹೋಗುತ್ತಿರುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಗ ಯೇಹುವು ತನ್ನ ಅಧಿಪತಿಯಾದ ಬಿದ್ಕಾರನಿಗೆ, “ನೀನು ಅವನನ್ನು ತೆಗೆದುಕೊಂಡುಹೋಗಿ ಇಜ್ರೆಯೇಲಿನವನಾದ ನಾಬೋತನ ಪಾಲಾಗಿರುವ ಹೊಲದಲ್ಲಿ ಹಾಕಿಬಿಡು. ಏಕೆಂದರೆ ನಾನೂ, ನೀನೂ ಅವನ ತಂದೆಯಾದ ಅಹಾಬನ ಹಿಂದೆ ರಥವನ್ನು ಏರಿಕೊಂಡು ಹೋಗುತ್ತಿರುವಾಗ, ಯೆಹೋವ ದೇವರು ಈ ಪ್ರವಾದನೆಯನ್ನು ಅವನ ಬಗ್ಗೆ ತಿಳಿಸಿದರೆಂದು ಜ್ಞಾಪಕಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 9:25
12 ತಿಳಿವುಗಳ ಹೋಲಿಕೆ  

ಅವನಿಗೆ - ನೀನು ಕೊಲೆ ಮಾಡಿ ಸ್ವಾಸ್ತ್ಯವನ್ನು ಸಂಪಾದಿಸಿಕೊಂಡಿಯಲ್ಲವೋ? ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನೂ ನೆಕ್ಕುವವು ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಅವನಿಗೆ ಹೇಳು ಎಂಬದೇ.


ಆಮೋಚನ ಮಗನಾದ ಯೆಶಾಯನಿಗೆ ಬಾಬೆಲಿನ ವಿಷಯವಾಗಿ ಕಂಡುಬಂದ ದೈವೋಕ್ತಿ.


ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವದು. ಯಾಕಂದರೆ ನನ್ನ ನೊಗವು ಮೃದುವಾದದ್ದು; ನನ್ನ ಹೊರೆಯು ಹೌರವಾದದ್ದು ಅಂದನು.


ಯೆಹೋವನು ಇಸ್ರಾಯೇಲನ್ನು ಕುರಿತು ಮಲಾಕಿಯ ಮೂಲಕ ನುಡಿದ ದೈವೋಕ್ತಿ.


ನಿನೆವೆಯ ವಿಷಯವಾದ ದೈವೋಕ್ತಿ. ಎಲ್ಕೋಷ್ ಊರಿನ ನಹೂಮನಿಗೆ ಆದ ದೈವದರ್ಶನದ ಗ್ರಂಥ.


ಹಜಾಯೇಲನ ಕತ್ತಿಗೆ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುವನು; ಇವನ ಕತ್ತಿಗೆ ತಪ್ಪಿಸಿಕೊಂಡವರನ್ನು ಎಲೀಷನು ಕೊಲ್ಲುವನು.


ಅನಂತರ ಸಂಭವಿಸಿದ್ದೇನಂದರೆ - ಇಜ್ರೇಲಿನಲ್ಲಿ ಸಮಾರ್ಯದ ಅರಸನಾದ ಅಹಾಬನ ಅರಮನೆಯ ಹತ್ತಿರ ಇಜ್ರೇಲಿನವನಾದ ನಾಬೋತನೆಂಬ ಮನುಷ್ಯನ ದ್ರಾಕ್ಷೇತೋಟವಿತ್ತು.


ನನ್ನ ಮಾತನ್ನು ಕೇಳು, ನೀನು ನಿನ್ನೆ ಸುರಿಸಿದ ನಾಬೋತನ ಮತ್ತು ಅವನ ಮಕ್ಕಳ ರಕ್ತವನ್ನು ನಿಶ್ಚಯವಾಗಿ ನೋಡಿದ್ದೇನೆ. ನೀನು ಅವರ ರಕ್ತವನ್ನು ಸುರಿಸಿದ ಹೊಲದಲ್ಲೇ ನಿನಗೆ ಮುಯ್ಯಿತೀರಿಸುವೆನು ಎಂದು ಪ್ರವಾದಿಯಿಂದ ಹೇಳಿಸಿದ್ದು ನಿನಗೆ ನೆನಪಿರುತ್ತದಲ್ಲಾ; ಯೆಹೋವನ ಆ ಮಾತು ನೆರವೇರುವಂತೆ ಇವನ ಶವವನ್ನು ಆ ಹೊಲದಲ್ಲಿ ಹಾಕಿಬಿಡು ಎಂದು ಹೇಳಿದನು.


ನೀನು ಅವರಿಗೆ ಹೀಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಈ ಹೊರೆಯು ಯೆರೂಸಲೇವಿುನಲ್ಲಿರುವ ಪ್ರಭುವಿಗೂ ಅಲ್ಲಿನ ಇಸ್ರಾಯೇಲ್ ವಂಶದವರೆಲ್ಲರಿಗೂ ಸಂಬಂಧಪಟ್ಟಿದೆ.


ನಿನ್ನ ಸಂತಾನದವರು ನಾಲ್ಕನೆಯ ತಲೆಯವರೆಗೂ ಇಸ್ರಾಯೇಲ್‍ಸಿಂಹಾಸನದ ಮೇಲೆ ಕೂತುಕೊಳ್ಳುವರು ಎಂಬದಾಗಿ ಯೆಹೋವನು ಯೇಹುವಿಗೆ ಮುಂತಿಳಿಸಿದ ಮಾತು ನೆರವೇರಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು