Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 9:28 - ಕನ್ನಡ ಸತ್ಯವೇದವು J.V. (BSI)

28 ಅವನ ಸೇವಕರು ಅವನ ಶವವನ್ನು ರಥದಲ್ಲಿ ಹಾಕಿಕೊಂಡು ಯೆರೂಸಲೇವಿುನಲ್ಲಿರುವ ದಾವೀದ ನಗರಕ್ಕೆ ತಂದು ಅದನ್ನು ಅವನ ಕುಟುಂಬ ಶ್ಮಶಾನಭೂವಿುಯಲ್ಲಿ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವನ ಸೇವಕರು ಅವನ ಶವವನ್ನು ರಥದಲ್ಲಿ ಹಾಕಿಕೊಂಡು ಯೆರೂಸಲೇಮಿನಲ್ಲಿರುವ ದಾವೀದ ನಗರಕ್ಕೆ ತಂದು ಅದನ್ನು ಅವನ ಕುಟುಂಬದ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅವನ ಸೇವಕರು ಅವನ ಶವವನ್ನು ರಥದಲ್ಲಿ ಹಾಕಿಕೊಂಡು ಜೆರುಸಲೇಮಿನಲ್ಲಿರುವ ದಾವೀದ ನಗರಕ್ಕೆ ತಂದು ಅದನ್ನು ಅವನ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಅಹಜ್ಯನ ಸೇವಕರು ಅವನ ದೇಹವನ್ನು ಜೆರುಸಲೇಮಿಗೆ ತಂದರು. ಅವನನ್ನು ದಾವೀದ ನಗರದಲ್ಲಿ ಅವನ ಪೂರ್ವಿಕರ ಬಳಿಯಲ್ಲಿ ಸಮಾಧಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅವನ ಸೇವಕರು ಅವನನ್ನು ರಥದಲ್ಲಿ ಯೆರೂಸಲೇಮಿಗೆ ತೆಗೆದುಕೊಂಡುಹೋಗಿ, ದಾವೀದನ ಪಟ್ಟಣದೊಳಗೆ ಅವನ ಪಿತೃಗಳ ಬಳಿಯಲ್ಲಿ ಅವನ ಸಮಾಧಿಯಲ್ಲಿ ಅವನನ್ನು ಹೂಳಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 9:28
9 ತಿಳಿವುಗಳ ಹೋಲಿಕೆ  

ಸೇವಕರು ಅವನನ್ನು ಯುದ್ಧ ರಥದಿಂದಿಳಿಸಿ ಅವನ ಎರಡನೆಯ ರಥದಲ್ಲಿ ಮಲಗಿಸಿ ಯೆರೂಸಲೇವಿುಗೆ ತೆಗೆದುಕೊಂಡು ಹೋಗಲು ಅಲ್ಲಿ ಸತ್ತನು. ಅವನ ಶವವನ್ನು ಅವನ ಪೂರ್ವಿಕರ ಶ್ಮಶಾನದಲ್ಲಿ ಸಮಾಧಿಮಾಡಿದರು. ಎಲ್ಲಾ ಯೆಹೂದ್ಯರೂ ಯೆರೂಸಲೇವಿುನವರೂ ಯೋಷೀಯನ ವಿಷಯವಾಗಿ ಗೋಳಾಡಿದರು.


ಅವನ ಸೇವಕರು ಅವನ ಶವವನ್ನು ರಥದಲ್ಲಿ ಹಾಕಿಕೊಂಡು ಮೆಗಿದ್ದೋವಿನಿಂದ ಯೆರೂಸಲೇವಿುಗೆ ತಂದು ಅವನ ಸ್ವಂತ ಸಮಾಧಿಯಲ್ಲಿ ಇಟ್ಟರು. ಜನರು ಅವನಿಗೆ ಬದಲಾಗಿ ಅವನ ಮಗನಾದ ಯೆಹೋವಾಹಾಜನನ್ನು ಅಭಿಷೇಕಿಸಿ ಅರಸನನ್ನಾಗಿಮಾಡಿದರು.


ಅವನ ಜನರು ಆ ಶವವನ್ನು ಕುದುರೆಯ ಮೇಲೆ ಯೆರೂಸಲೇವಿುಗೆ ತಂದು ಯೆಹೂದದ ರಾಜಧಾನಿಯೊಳಗೆ ಅವನ ಪಿತೃಶ್ಮಶಾನದಲ್ಲಿ ಸಮಾಧಿಮಾಡಿದರು.


ಯೋಷೀಯನು ಅವುಗಳನ್ನು ಕೆಡವಿಬಿಟ್ಟು ಅವುಗಳ ಪೂಜಾರಿಗಳನ್ನು ಯಜ್ಞವೇದಿಗಳ ಮೇಲೆ ವಧಿಸಿ ಮನುಷ್ಯರ ಎಲುಬುಗಳನ್ನು ಸುಡಿಸಿ ಯೆರೂಸಲೇವಿುಗೆ ಹಿಂದಿರುಗಿ ಹೋದನು.


ಅವರಲ್ಲಿ ಶಿಮೆಯಾತನ ಮಗನಾದ ಯೋಜಾಕಾರ್, ಶೋಮೇರನ ಮಗನಾದ ಯೆಹೋಜಾಬಾದ್ ಎಂಬವರು ಸಿಲ್ಲಾ ಊರಿಗೆ ಹೋಗುವ ಗಟ್ಟದ ದಾರಿಯಲ್ಲಿರುವ ವಿುಲ್ಲೋಕೋಟೆಯಲ್ಲಿ ಅವನನ್ನು ಕೊಂದರು. ಅವನ ಜನರು ಅವನ ಶವವನ್ನು ದಾವೀದ ನಗರದೊಳಗೆ ಅವನ ಕುಟುಂಬಶ್ಮಶಾನ ಭೂವಿುಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಅಮಚ್ಯನು ಅರಸನಾದನು.


ಆಮೇಲೆ ಅಹಜ್ಯನನ್ನು ಹುಡುಕಿಸಿದನು; ಅವನು ಸಮಾರ್ಯದಲ್ಲಿ ಅಡಗಿಕೊಂಡಿದ್ದನು. ಜನರು ಅವನನ್ನು ಯೇಹುವಿನ ಬಳಿಗೆ ಹಿಡಿದು ತಂದು ವಧಿಸಿ - ಇವನು ಯೆಹೋವನ ಯಥಾರ್ಥಭಕ್ತನಾದ ಯೆಹೋಷಾಫಾಟನ ಮೊಮ್ಮಗನಾಗಿರುತ್ತಾನಲ್ಲವೇ ಅಂದುಕೊಂಡು ಅವನನ್ನು ಸಮಾಧಿಮಾಡಿದರು. ರಾಜ್ಯಾಧಿಕಾರವನ್ನು ವಹಿಸಿಕೊಳ್ಳುವದಕ್ಕೆ ಅಹಜ್ಯನ ಮನೆಯವರಲ್ಲಿ ಸಮರ್ಥರಾರೂ ಉಳಿಯಲಿಲ್ಲ.


ಅನಂತರ ದಾವೀದನು ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ದಾವೀದ ನಗರದಲ್ಲಿ ಸಮಾಧಿಮಾಡಿದರು.


ಅವನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ದಾವೀದ ನಗರದೊಳಗೆ ಕುಟುಂಬ ಶ್ಮಶಾನಭೂವಿುಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಅಹಜ್ಯನು ಅರಸನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು