Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 9:30 - ಕನ್ನಡ ಸತ್ಯವೇದವು J.V. (BSI)

30 ಯೇಹುವು ಇಜ್ರೇಲಿಗೆ ಬಂದನು. ಈಜೆಬೆಲಳು ಅದನ್ನು ಕೇಳಿ ತಲೆಯನ್ನು ಆಭರಣಗಳಿಂದ ಅಲಂಕರಿಸಿಕೊಂಡು ಕಣ್ಣಿಗೆ ಕಾಡಿಗೆಹಚ್ಚಿಕೊಂಡು ಕಿಟಕಿಯಿಂದ ನೋಡುತ್ತಾ ನಿಂತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಅನಂತರ ಯೇಹುವು ಇಜ್ರೇಲಿಗೆ ಬಂದನು. ಈಜೆಬೆಲಳು ಅದನ್ನು ಕೇಳಿ ತನ್ನ ತಲೆಯನ್ನು ನಯವಾಗಿ ಬಾಚಿಕೊಂಡು, ಕಣ್ಣಿಗೆ ಕಾಡಿಗೆ ಹಚ್ಚಿಕೊಂಡು ಕಿಟಕಿಯಿಂದ ಇಣುಕಿ ನೋಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಯೇಹುವು ಜೆಸ್ರೀಲಿಗೆ ಬಂದನು. ಈಜೆಬೆಳು ಅದನ್ನು ಕೇಳಿ ತಲೆಯನ್ನು ಆಭರಣಗಳಿಂದ ಅಲಂಕರಿಸಿಕೊಂಡು, ಕಣ್ಣಿಗೆ ಕಾಡಿಗೆ ಹಚ್ಚಿಕೊಂಡು, ಕಿಟಕಿಯಿಂದ ನೋಡುತ್ತಾ ನಿಂತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಯೇಹುವು ಇಜ್ರೇಲಿಗೆ ಹೋದನು. ಈಜೆಬೆಲಳಿಗೆ ಈ ಸುದ್ದಿಯು ತಿಳಿಯಿತು. ಅವಳು ತಲೆಕೂದಲನ್ನು ಸುಂದರವಾಗಿ ಕಟ್ಟಿಕೊಂಡು, ಅಲಂಕರಿಸಿಕೊಂಡಳು. ನಂತರ ಅವಳು ಹೊರಗೆ ನೋಡುತ್ತಾ ಕಿಟಕಿಯ ಹತ್ತಿರ ನಿಂತುಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಯೇಹುವು ಇಜ್ರೆಯೇಲಿಗೆ ಬಂದನು. ಅಲ್ಲಿಗೆ ಅವನು ಬಂದಿದ್ದಾನೆಂದು ಈಜೆಬೆಲಳು ಕೇಳಿ, ಅವಳು ತನ್ನ ಕಣ್ಣುಗಳಿಗೆ ಕಾಡಿಗೆ ಹಚ್ಚಿಕೊಂಡು, ತನ್ನ ತಲೆಯನ್ನು ಶೃಂಗರಿಸಿಕೊಂಡು, ಕಿಟಕಿಯಿಂದ ಇಣಿಕಿ ನೋಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 9:30
12 ತಿಳಿವುಗಳ ಹೋಲಿಕೆ  

ಎಲೈ, [ನಗರಿಯೇ,] ನೀನು ಸೂರೆಯಾಗುವಾಗ ಏನು ಮಾಡುವಿ? ನೀನು ರಕ್ತಾಂಬರವನ್ನು ಹೊದ್ದು ಸುವರ್ಣಾಭರಣಗಳಿಂದ ನಿನ್ನನ್ನು ಅಲಂಕರಿಸಿಕೊಂಡು ನೀಲಾಂಜನದಿಂದ ವಿಶಾಲಾಕ್ಷಿಯಾದರೇನು, ನಿನ್ನನ್ನು ಸೊಗಸು ಮಾಡಿಕೊಳ್ಳುವದು ವ್ಯರ್ಥ; ನಿನ್ನ ವಿುಂಡರು ನಿನ್ನನ್ನು ಧಿಕ್ಕರಿಸಿ ನಿನ್ನ ಪ್ರಾಣವನ್ನೇ ಹುಡುಕುತ್ತಾರೆ.


ಇಷ್ಟಲ್ಲದೆ ದೂತನನ್ನು ಕಳುಹಿಸಿ ಪುರುಷರನ್ನು ದೂರದಿಂದ ಕರೆಯಿಸಿಕೊಂಡರು; ಇಗೋ, ಅವರು ಬಂದರು; [ಎಲೈ ಹೆಂಗಸೇ,] ಅವರಿಗಾಗಿ ನೀನು ಸ್ನಾನಮಾಡಿ ಕಣ್ಣಿಗೆ ಕಾಡಿಗೆಹಚ್ಚಿ


ವಿಯೋಗದುಃಖವನ್ನು ತೋರಿಸಬೇಡ, ರುಮಾಲನ್ನು ಸುತ್ತಿಕೊಂಡಿರು, ಕೆರಗಳನ್ನು ಮೆಟ್ಟಿಕೊಂಡಿರು, ಬಾಯನ್ನು ಬಟ್ಟೆಯಿಂದ ಮುಚ್ಚಿಕೊಳ್ಳಬೇಡ, ಗಾರಿಗೆಯನ್ನು ತಿನ್ನಬೇಡ.


ನೀವು ನಿರ್ಮಲರಾಗಿಯೂ ಭಯಭರಿತರಾಗಿಯೂ ನಡೆದುಕೊಳ್ಳುವದನ್ನು ಅವರು ನೋಡಿ ವಾಕ್ಯೋಪದೇಶವಿಲ್ಲದೆ ತಮ್ಮ ಹೆಂಡತಿಯರಾದ ನಿಮ್ಮ ನಡತೆಯಿಂದಲೇ ಸನ್ಮಾರ್ಗಕ್ಕೆ ಬಂದಾರು.


ಫಿಲಿಷ್ಟಿಯರು ತಮ್ಮ ಸೈನ್ಯವನ್ನು ಕೂಡಿಸಿಕೊಂಡು ಬಂದು ಅಫೇಕಿನಲ್ಲಿ ಪಾಳೆಯಮಾಡಿಕೊಂಡರು. ಇಸ್ರಾಯೇಲ್ಯರು ಇಜ್ರೇಲ್ ಬೈಲಿನಲ್ಲಿರುವ ಬುಗ್ಗೆಯ ಬಳಿಯಲ್ಲಿ ಇಳುಕೊಂಡರು.


ಅವನ ಸೇವಕನೂ ಅವನ ರಥಬಲದ ಅರ್ಧಭಾಗಕ್ಕೆ ಅಧಿಪತಿಯೂ ಆಗಿದ್ದ ಜಿಮ್ರಿ ಎಂಬವನು ಅವನಿಗೆ ವಿರೋಧವಾಗಿ ಒಳಸಂಚುಮಾಡಿದನು. ಅರಸನು ತಿರ್ಚದಲ್ಲಿ ತನ್ನ ಮನೆಯ ಉಗ್ರಾಣಿಕನಾದ ಅರ್ಚನೆಂಬವನ ಮನೆಯಲ್ಲಿ ಕುಡಿದು ಮತ್ತನಾಗಿರುವಾಗ


ಇದಲ್ಲದೆ ಆತನು ಈಜೆಬೆಲಳನ್ನು ಕುರಿತು - ನಾಯಿಗಳು ಇಜ್ರೇಲ್ ಪಟ್ಟಣದ ಗೋಡೆಯ ಬಳಿಯಲ್ಲಿ ಆಕೆಯ ಶವವನ್ನು ತಿನ್ನುವವು;


ನಿನ್ನ ಹೃದಯವು ಅವಳ ಬೆಡಗನ್ನು ಮೋಹಿಸದಿರಲಿ, ಅವಳು ತನ್ನ ಕಣ್ಣು ರೆಪ್ಪೆಗಳಿಂದ ನಿನ್ನನ್ನು ವಶಮಾಡಿಕೊಂಡಾಳು, ನೋಡಿಕೋ.


ಇಗೋ ವೇಶ್ಯಾವೇಷವನ್ನು ಧರಿಸಿರುವ ಒಬ್ಬ ಕಪಟ ಸ್ತ್ರೀಯು ಅವನನ್ನು ಎದುರುಗೊಳ್ಳುತ್ತಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು