2 ಅರಸುಗಳು 9:7 - ಕನ್ನಡ ಸತ್ಯವೇದವು J.V. (BSI)7 ನೀನು ನಿನ್ನ ಯಜಮಾನನಾದ ಅಹಾಬನ ಮನೆಯವರನ್ನು ಸಂಹರಿಸಿಬಿಡು; ಆಗ ನನ್ನ ಸೇವಕರಾದ ಪ್ರವಾದಿಗಳೇ ಮೊದಲಾದ ಯೆಹೋವಭಕ್ತರ ರಕ್ತವನ್ನು ಸುರಿಸಿದ್ದಕ್ಕಾಗಿ ನಾನು ಈಜೆಬೆಲಳಿಗೆ ಮುಯ್ಯಿತೀರಿಸಿದಂತಾಗುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನೀನು ನಿನ್ನ ಯಜಮಾನನಾದ ಅಹಾಬನ ಮನೆಯವರನ್ನು ಸಂಹರಿಸಿಬಿಡು; ಆಗ ನನ್ನ ಸೇವಕರಾದ ಪ್ರವಾದಿಗಳೇ ಮೊದಲಾದ ಯೆಹೋವನ ಭಕ್ತರ ರಕ್ತವನ್ನು ಸುರಿಸಿದ್ದಕ್ಕಾಗಿ ನಾನು ಈಜೆಬೆಲಳಿಗೆ ಮುಯ್ಯಿತೀರಿಸಿದಂತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನೀನು ನಿನ್ನ ಯಜಮಾನನಾದ ಅಹಾಬನ ಮನೆಯವರನ್ನು ಸಂಹರಿಸಿಬಿಡು; ಆಗ ನನ್ನ ಸೇವಕರಾದ ಪ್ರವಾದಿಗಳೇ ಮೊದಲಾದ ಸರ್ವೇಶ್ವರನ ಭಕ್ತರ ರಕ್ತವನ್ನು ಸುರಿಸಿದ್ದಕ್ಕಾಗಿ ನಾನು ಈಜೆಬೆಲಳಿಗೆ ಮುಯ್ಯಿ ತೀರಿಸಿದಂತಾಗುವುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನೀನು ನಿನ್ನ ರಾಜನಾದ ಅಹಾಬನ ಕುಟುಂಬವನ್ನು ನಾಶಗೊಳಿಸಲೇಬೇಕು. ನನ್ನ ಸೇವಕರಾದ ಪ್ರವಾದಿಗಳ ಸಾವಿಗೆ ಮತ್ತು ಯೆಹೋವನ ಸೇವಕರನ್ನು ಕೊಲ್ಲಿಸಿದುದಕ್ಕೆ ಈಜೆಬೆಲಳನ್ನು ನಾನು ಈ ರೀತಿ ಶಿಕ್ಷಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಾನು ಪ್ರವಾದಿಗಳಾದ ನನ್ನ ಸೇವಕರ ರಕ್ತಕ್ಕೋಸ್ಕರವೂ ಈಜೆಬೆಲಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವಂತೆ ನೀನು ನಿನ್ನ ಯಜಮಾನನಾದ ಅಹಾಬನ ಮನೆಯನ್ನು ಸಂಹರಿಸಬೇಕು. ಅಧ್ಯಾಯವನ್ನು ನೋಡಿ |