Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 9:8 - ಕನ್ನಡ ಸತ್ಯವೇದವು J.V. (BSI)

8 ಅಹಾಬನ ಕುಟುಂಬದವರೆಲ್ಲಾ ನಿರ್ನಾಮವಾಗಬೇಕು. ಅವನ ಸಂತಾನದ ಗಂಡಸರಲ್ಲಿ ಸ್ವತಂತ್ರರಾಗಿರಲಿ ಪರತಂತ್ರರಾಗಿರಲಿ ಎಲ್ಲರನ್ನೂ ಇಸ್ರಾಯೇಲ್ಯರೊಳಗಿಂದ ತೆಗೆದುಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅಹಾಬನ ಕುಟುಂಬದವರೆಲ್ಲಾ ನಿರ್ನಾಮವಾಗಬೇಕು. ಅವನ ಸಂತಾನದ ಗಂಡಸರಲ್ಲಿ ಸ್ವತಂತ್ರರಾಗಲಿ, ಗುಲಾಮನಾಗಲಿ ಎಲ್ಲರನ್ನೂ ಇಸ್ರಾಯೇಲರೊಳಗಿಂದ ತೆಗೆದುಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅಹಾಬನ ಕುಟುಂಬದವರೆಲ್ಲಾ ನಿರ್ನಾಮವಾಗಬೇಕು. ಅವನ ಸಂತಾನದ ಗಂಡಸರಲ್ಲಿ ಸ್ವತಂತ್ರರಾಗಿರಲಿ, ಪರತಂತ್ರರಾಗಿರಲಿ ಎಲ್ಲರನ್ನೂ ಇಸ್ರಯೇಲರ ಮಧ್ಯೆಯಿಂದ ತೆಗೆದುಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅಹಾಬನ ಕುಟುಂಬವೆಲ್ಲ ಸಾಯುತ್ತದೆ. ಅಹಾಬನ ಕುಟುಂಬದಲ್ಲಿ ಒಬ್ಬ ಗಂಡಸಾದರೂ ಜೀವಿಸಿರಲು ನಾನು ಬಿಡುವುದಿಲ್ಲ. ಆ ಗಂಡಸು ಇಸ್ರೇಲಿನಲ್ಲಿ ಸ್ವತಂತ್ರವಾಗಿರಲಿ ಇಲ್ಲವೆ ಗುಲಾಮನಾಗಿರಲಿ ಅದು ನನಗೆ ಮುಖ್ಯವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅಹಾಬನ ಮನೆಯೆಲ್ಲಾ ನಾಶವಾಗುವುದು. ಇಸ್ರಾಯೇಲಿನಲ್ಲಿ ಉಳಿದಿರುವ ಅಹಾಬನ ಗಂಡಸರಲ್ಲಿ ಸ್ವತಂತ್ರರಾಗಲಿ, ಗುಲಾಮರಾಗಲಿ ಎಲ್ಲರನ್ನೂ ತೆಗೆದುಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 9:8
8 ತಿಳಿವುಗಳ ಹೋಲಿಕೆ  

ಬೆಳಗಾಗುವಷ್ಟರಲ್ಲಿ ಅವನ ಜನರೊಳಗೆ ಒಬ್ಬ ಗಂಡಸಾದರೂ ಉಳಿದರೆ ದೇವರು ದಾವೀದನಿಗೆ ಬೇಕಾದದ್ದನ್ನು ಮಾಡಲಿ ಎಂದು ಪ್ರತಿಜ್ಞೆಮಾಡಿದ್ದನು.


ಆಗ ಯೆಹೋವನು ತನ್ನ ಜನರಿಗೋಸ್ಕರ ನ್ಯಾಯತೀರಿಸುವನು. ಪರತಂತ್ರರಾಗಲಿ ಸ್ವತಂತ್ರರಾಗಲಿ ಅವರೆಲ್ಲರೂ ನಿರಾಶ್ರಯರಾಗಿ ನಿಶ್ಶೇಷರಾದದ್ದನ್ನು ಆತನು ತಿಳಿದಾಗ ತನ್ನ ಸೇವಕರಾದ ಅವರ ವಿಷಯದಲ್ಲಿ ಪಶ್ಚಾತ್ತಾಪಪಡುವನು.


ಇಸ್ರಾಯೇಲ್ಯರು ಘೋರಕಷ್ಟವನ್ನು ಅನುಭವಿಸುತ್ತಿರುತ್ತಾರೆ, ಅವರಲ್ಲಿದ್ದ ಸ್ವತಂತ್ರರೂ ಪರತಂತ್ರರೂ ನಾಶವಾಗಿದ್ದಾರೆ, ಅವರನ್ನು ರಕ್ಷಿಸುವವನು ಒಬ್ಬನೂ ಇಲ್ಲ ಎಂಬದನ್ನು ಯೆಹೋವನು ನೋಡಿ


ಸಮಾರ್ಯವನ್ನು ಸೇರಿದನಂತರ ಅಲ್ಲಿ ಉಳಿದಿದ್ದ ಅಹಾಬನ ಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟನು. ಹೀಗೆ ಯೆಹೋವನು ಎಲೀಯನ ಮುಖಾಂತರವಾಗಿ ಹೇಳಿಸಿದ ಮಾತು ನೆರವೇರಿತು.


ಯೆಹೋವನೇ, ಅಶ್ಶೂರದ ಅರಸರು ದೇಶಜನಾಂಗಗಳನ್ನು ಹಾಳುಮಾಡಿ


ನೂಲು ಮಟ್ಟಗೋಲು ಇವುಗಳಿಂದಲೋ ಎಂಬಂತೆ ಸಮಾರ್ಯವನ್ನೂ ಅಹಾಬನ ಮನೆಯನ್ನೂ ನೆಲಸಮಮಾಡಿಬಿಟ್ಟೆನಲ್ಲಾ; ಯೆರೂಸಲೇಮನ್ನೂ ಅವುಗಳಂತೆಯೇ ಮಾಡುವೆನು. ಒಬ್ಬನು ಪಾತ್ರೆಯನ್ನು ಒರಸಿ ಡಬ್ಬುಹಾಕುವ ಮೇರೆಗೆ ನಾನು ಯೆರೂಸಲೇಮನ್ನು ಒರಸಿ ಡಬ್ಬು ಹಾಕುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು